AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavithra Gowda: ಆಪ್ತರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಪವಿತ್ರಾ ಗೌಡ

ಪವಿತ್ರಾ ಗೌಡ ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ ಜೈಲಿನಿಂದ ಹೊರಬಂದ ನಂತರ ತಮ್ಮ ಸ್ನೇಹಿತರ ಬಗ್ಗೆ ಒಂದು ಸಂದೇಶವನ್ನು ಹಂಚಿಕೊಂಡಿದ್ದಾರೆ. ನಿಜವಾದ ಸ್ನೇಹಿತರು ಯಾರು ಎಂದು ಅರಿತುಕೊಂಡೆ ಎಂದು ಹೇಳಿದ್ದಾರೆ. ಅವರು ತಮ್ಮ 777 ಬ್ಯೂಟಿಕ್ ಅನ್ನು ಮರುಲಾಂಚ್ ಮಾಡುವ ಮೂಲಕ ಉದ್ಯಮಕ್ಕೆ ಮರಳಿದ್ದಾರೆ.

Pavithra Gowda: ಆಪ್ತರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಪವಿತ್ರಾ ಗೌಡ
ಪವಿತ್ರಾ
ರಾಜೇಶ್ ದುಗ್ಗುಮನೆ
|

Updated on: Feb 10, 2025 | 2:46 PM

Share

ನಟಿ ಹಾಗೂ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಆರೋಪಿ ಆಗಿದ್ದು, ಆರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾರೆ. ಅವರು ಹೊರ ಬಂದ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಪವಿತ್ರಾ ಗೌಡ ಅವರು ದೇವಸ್ಥಾನಗಳನ್ನು ಸುತ್ತಿದ್ದಾರೆ. ಈಗ ಅವರು ಆಪ್ತರ ಬಗ್ಗೆ ಒಂದು ಸಂದೇಶವನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಪವಿತ್ರಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಗೆಳೆಯರ ಬಗ್ಗೆ ತಮ್ಮ ಆಲೋಚನೆ ಏನು ಎಂಬುದನ್ನು ವಿವರಿಸಿದ್ದಾರೆ. ‘ನಿಮ್ಮ ಸುತ್ತ ಯಾವ ಒಳ್ಳೆಯ ಸ್ನೇಹಿತರು ಇರೋದು ಎಷ್ಟು ಮುಖ್ಯ ಎಂಬುದನ್ನು ನಾನು ಅರಿತುಕೊಂಡೆ. ಅದು ನೀವು ಏನು ಎಂಬುದನ್ನು ನಿರ್ಧಾರ ಮಾಡುತ್ತದೆ. ನನಗೆ ಒಳ್ಳೆಯ ಫ್ರೆಂಡ್ಸ್ ಇದ್ದಾರೆ’ ಎಂದು ರಾಶಿ ಖನ್ನಾ ಹಂಚಿಕೊಂಡಿರುವ ವಿಡಿಯೋನ ಪವಿತ್ರಾ ಶೇರ್ ಮಾಡಿಕೊಂಡಿದ್ದಾರೆ.

‘ಒಳ್ಳೆಯದನ್ನು ಮಾಡುವ ಗೆಳೆಯರ ಜೊತೆ ಸದಾ ಇರಿ. ನಿಮ್ಮ ತಳ್ಳುವವರ ಜೊತೆ ಅಲ್ಲ. ನೀನು ನನ್ನನ್ನು ಭೇಟಿ ಮಾಡಿಯೇ ಇಲ್ಲ, ನೀನು ನನಗೆ ಸಮಯ ಕೊಡಲೇ ಇಲ್ಲ ಎಂದು ಹೇಳುವವರು ಗೆಳೆಯರಲ್ಲ. ಭೇಟಿ ಆಗದಿದ್ದರೂ ಪರವಾಗಿಲ್ಲ, ನಾನು ನಿನ್ನ ಪರವಾಗಿ ನಿಲ್ಲುತ್ತೇನೆ ಎನ್ನುವವರು ಸ್ನೇಹಿತರು’ ಎಂದು ವಿಡಿಯೋದಲ್ಲಿ ಹೇಳಲಾಗಿದೆ.

ಪವಿತ್ರಾ ಗೌಡ ಜೈಲಿನಲ್ಲಿ ಇದ್ದಾಗ ಹೆಚ್ಚಿನವರು ನೋಡಲು ಬರಲಿಲ್ಲ. ಆದರೆ, ಅವರ ಜೊತೆ ಈಗಲೂ ಪವಿತ್ರಾ ಒಳ್ಳೆಯ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಈ ವಿಡಿಯೋ ಹಂಚಿಕೊಂಡರೋ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ.

ಇದನ್ನೂ ಓದಿ: ತ್ರಿವೇಣಿ ಸಂಗಮದಲ್ಲಿ ಪವಿತ್ರಾ ಗೌಡ ‘ಪವಿತ್ರ ಸ್ನಾನ’, ಋಣಾತ್ಮಕತೆಯಿಂದ ದೂರ ಎಂದ ಚೆಲುವೆ

ಪವಿತ್ರಾ ಗೌಡ ಅವರು ಜೈಲಿನಿಂದ ಮರಳಿದ ಬಳಿಕ ಪವಿತ್ರಾ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋ 777 ಬ್ಯೂಟಿಕ್ ರೀ ಲಾಂಚ್ ಮಾಡಿದ್ದಾರೆ. ಈ ಮೂಲಕ ಉದ್ಯಮಕ್ಕೆ ಮರಳಿದ್ದಾರೆ. ಅವರು ಮತ್ತೆ ದರ್ಶನ್​ನ ಭೇಟಿ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ