Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ.

Pawan Kalyan: ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ‘ಬ್ರೋ’ ಸಿನಿಮಾ ಟಿಕೆಟ್​ಗೆ​ ಆಫರ್
ಬ್ರೋ ಸಿನಿಮಾ ಪೋಸ್ಟರ್
Follow us
ರಾಜೇಶ್ ದುಗ್ಗುಮನೆ
|

Updated on: Jul 20, 2023 | 9:06 AM

ಸ್ಟಾರ್ ಹೀರೋಗಳ ಸಿನಿಮಾ ರಿಲೀಸ್ ಆಗುತ್ತದೆ ಎಂದರೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಮೊದಲ ದಿನವಂತೂ ಟಿಕೆಟ್ ದರ ಮಿತಿ ಮೀರುತ್ತದೆ. ಈ ಕಾರಣಕ್ಕೆ ಅನೇಕ ಅಭಿಮಾನಿಗಳಿಗೆ ಸಿನಿಮಾ ನೋಡೋಕೆ ಸಾಧ್ಯವಾಗುವುದೇ ಇಲ್ಲ. ಆದರೆ, ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ (Pawan Kalyan) ಅಭಿನಯದ ‘ಬ್ರೋ’ ಸಿನಿಮಾ (Bro Movie) ವಿಚಾರದಲ್ಲಿ ಹಾಗಾಗುವುದಿಲ್ಲ. ಈ ಬಗ್ಗೆ ನಿರ್ಮಾಪಕರ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಸಾಯಿ ಧರಮ್ ತೇಜ್ ಅವರಿಗೆ ಪವನ್​ ಕಲ್ಯಾಣ್ ಸೋದರ ಮಾವ. ಇವರು ಒಟ್ಟಾಗಿ ತೆರೆ ಹಂಚಿಕೊಂಡಿದ್ದು ಫ್ಯಾನ್ಸ್​ಗೆ ಖುಷಿ ನೀಡಿದೆ. ಈ ಮೊದಲು ತೆರೆಗೆ ಬಂದ ತಮಿಳಿನ ‘ವಿನೋಧ್ಯ ಸೀತಂ​’ ಚಿತ್ರದ ತೆಲುಗು ರಿಮೇಕ್ ‘ಬ್ರೋ’. ಮೂಲ ಚಿತ್ರದಲ್ಲಿ ತಂಬಿ ರಾಮಯ್ಯ ಹಾಗೂ ಸಮುದ್ರಖಣಿ ನಟಿಸಿದ್ದರು. ಇದರ ರಿಮೇಕ್​ನಲ್ಲಿ ಪವನ್​ ಕಲ್ಯಾಣ್​ ಹಾಗೂ ಸಾಯಿ ಧರಮ್​ ತೇಜ್​ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇದರ ಜೊತೆಗೆ ಸಿನಿಮಾ ಟಿಕೆಟ್ ದರ ಹೆಚ್ಚಬಹುದು ಎಂದು ಅನೇಕರು ಊಹಿಸಿದ್ದರು. ಆದರೆ, ಹಾಗಾಗುವುದಿಲ್ಲ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಹಾಗೂ ‘ಜೀ ಸ್ಟುಡಿಯೋ’ ಬ್ಯಾನರ್ ಅಡಿಯಲ್ಲಿ ಟಿಜಿ ವಿಶ್ವಪ್ರಸಾದ್ ಹಾಗೂ ವಿವೇಕ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ವಿಶ್ವಪ್ರಸಾದ್ ಅವರು ಸಿನಿಪ್ರೇಮಿಗಳಿಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ‘ಬ್ರೋ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಸೀಮಿತ ಬಜೆಟ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಪವನ್ ಕಲ್ಯಾಣ್, ತೇಜ್ ಸಿನಿಮಾದ ಟಿಕೆಟ್ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ವಿಶ್ವಪ್ರಸಾದ್ ತಿಳಿಸಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಸಾಯಿ ಧರಮ್ ತೇಜ್​ಗೆ ಮತ್ತೆ ಸಂಕಷ್ಟ; ಹೈದರಾಬಾದ್​ ಪೊಲೀಸರಿಂದ ಬಂತು ನೋಟಿಸ್​

‘ಬ್ರೋ’ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಜುಲೈ 21ರಂದು ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ವಿಶೇಷ ಎಂದರೆ ‘ಪ್ರಾಜೆಕ್ಟ್ ಕೆ’ ಚಿತ್ರದ ಗ್ಲಿಂಪ್ಸ್ ಕೂಡ ಜುಲೈ 21ಕ್ಕೇ ರಿಲೀಸ್ ಆಗುತ್ತಿದೆ. ಹೀಗಾಗಿ, ಸಿನಿಪ್ರಿಯರ ಪಾಲಿಗೆ ಡಬಲ್ ಧಮಾಕ ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್