AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರಮಲ್ಲು’ ಚಿತ್ರಕ್ಕಾಗಿ ಮಾಸ್ ಅವತಾರ ತಾಳಿದ ಪವನ್ ಕಲ್ಯಾಣ್​; ಬರ್ತ್​ಡೇಗೆ ಟೀಸರ್ ಗಿಫ್ಟ್

ಒಂದು ನಿಮಿಷದ ಟೀಸರ್​ ಸಂಪೂರ್ಣವಾಗಿ ಮಾಸ್ ಆಗಿದೆ. ಫೈಟಿಂಗ್​​ಗೆ ನಿಂತವರನ್ನು ಪವನ್ ಕಲ್ಯಾಣ್ ಎತ್ತಿ ಬಿಸಾಡಿದ್ದಾರೆ. ಅವರು ಪೈಲ್ವಾನ್ ರೀತಿಯಲ್ಲಿ ಮಿಂಚಿದ್ದಾರೆ.

‘ಹರಿ ಹರ ವೀರಮಲ್ಲು’ ಚಿತ್ರಕ್ಕಾಗಿ ಮಾಸ್ ಅವತಾರ ತಾಳಿದ ಪವನ್ ಕಲ್ಯಾಣ್​; ಬರ್ತ್​ಡೇಗೆ ಟೀಸರ್ ಗಿಫ್ಟ್
ಪವನ್ ಕಲ್ಯಾಣ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 02, 2022 | 12:26 PM

Share

ಟಾಲಿವುಡ್​ನ ಪವರ್​ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಅವರಿಗೆ ಇಂದು (ಸೆಪ್ಟೆಂಬರ್ 2) ಬರ್ತ್​ಡೇ ಸಂಭ್ರಮ. ಟಾಲಿವುಡ್​ನ ಸ್ಟಾರ್​ ನಟನಿಗೆ ಮಹೇಶ್ ಬಾಬು (Mahesh Babu), ಚಿರಂಜೀವಿ ಸೇರಿ ಅನೇಕ ಸೆಲೆಬ್ರಿಟಿ​ಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಫ್ಯಾನ್ಸ್ ಸಂಭ್ರಮಾಚರಣೆ ಕೂಡ ಮುಗಿಲು ಮುಟ್ಟಿದೆ. ಈ ಮಧ್ಯೆ ಅವರ ಮುಂದಿನ ಚಿತ್ರ ‘ಹರಿ ಹರ ವೀರಮಲ್ಲು’  (Hari Hara Veera Mallu Movie)ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​ನಲ್ಲಿ ಪವನ್ ಕಲ್ಯಾಣ್ ಅವರು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

ಸೆಲೆಬ್ರಿಟಿಗಳ ಬರ್ತ್​ಡೇ ಸಂದರ್ಭದಲ್ಲಿ ಹೊಸ ಚಿತ್ರದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆಗೋದು ಸಾಮಾನ್ಯ. ಅದೇ ರೀತಿ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ‘ಹರಿ ಹರ ವೀರಮಲ್ಲು’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ಮಾಸ್​ ಅಂಶಗಳಿವೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಒಂದು ನಿಮಿಷದ ಟೀಸರ್​ ಸಂಪೂರ್ಣವಾಗಿ ಮಾಸ್ ಆಗಿದೆ. ಫೈಟಿಂಗ್​​ಗೆ ನಿಂತವರನ್ನು ಪವನ್ ಕಲ್ಯಾಣ್ ಎತ್ತಿ ಬಿಸಾಡಿದ್ದಾರೆ. ಅವರು ಪೈಲ್ವಾನ್ ರೀತಿಯಲ್ಲಿ ಮಿಂಚಿದ್ದಾರೆ. ಎಂ.ಎಂ. ಕೀರವಾಣಿ ಅವರ ಹಿನ್ನೆಲೆ ಸಂಗೀತ ಟೀಸರ್​ನಲ್ಲಿ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
ಪವನ್​ ಕಲ್ಯಾಣ್ ನಿರ್ಧಾರಕ್ಕೆ ಬೇಸರ; ಸಿನಿಮಾದಿಂದಲೇ ಹೊರ ನಡೆದ ಪೂಜಾ ಹೆಗ್ಡೆ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ಮೊದಲ ದಿನವೇ 10 ಕೋಟಿ ರೂಪಾಯಿ ನಷ್ಟ ಅನುಭವಿಸಿದ ‘ಭೀಮ್ಲಾ ನಾಯಕ್​’

‘ಹರಿ ಹರ ವೀರಮಲ್ಲು’ ಚಿತ್ರಕ್ಕೆ ಜಾಗರಲಮುಡಿ ರಾಧಾಕೃಷ್ಣ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಅವರಿಗೆ ಇದೆ. ಎ ದಯಾಕರ್ ರಾವ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ಪೊಸಾನಿ ಕೃಷ್ಣ ಮುರಳಿ ಮೇಲೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ, 10 ಜನರ ಬಂಧನ; ಏನಿದು ಪ್ರಕರಣ?

ಈ ವರ್ಷ ತೆರೆಗೆ ಬಂದ ‘ಭೀಮ್ಲಾ ನಾಯಕ್’ ಸಿನಿಮಾದಿಂದ ಪವನ್ ಕಲ್ಯಾಣ್ ವೃತ್ತಿ ಜೀವನದಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ. ಆ ಗೆಲುವಿನ ಬಳಿಕ ಅವರು ಒಪ್ಪಿಕೊಂಡ ಸಿನಿಮಾ ಇದಾಗಿದೆ. ಪವನ್ ಕಲ್ಯಾಣ್ ಅವರು ರಾಜಕೀಯ ಹಾಗೂ ಸಿನಿಮಾ ಎರಡರಲ್ಲೂ ಬ್ಯುಸಿ ಇದ್ದಾರೆ. ಎರಡನ್ನೂ ಅವರು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್