ಪವನ್ ಕಲ್ಯಾಣ್ ಬರ್ತ್​ಡೇಗೆ ಬ್ರೇಕ್; ಇಲ್ಲ ಹೊಸ ಸಿನಿಮಾ ಅಪ್​ಡೇಟ್

Pawan Kalyan Birthday: ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಪರಿಸ್ಥಿತಿಯನ್ನು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದಾರೆ. ಹೀಗಾಗಿ ಅವರು ಬರ್ತ್​ಡೇ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ. ಇದು ಅಭಿಮಾನಿಗಳ ಬೇಸರ ಹೆಚ್ಚಿಸಿದೆ.

ಪವನ್ ಕಲ್ಯಾಣ್ ಬರ್ತ್​ಡೇಗೆ ಬ್ರೇಕ್; ಇಲ್ಲ ಹೊಸ ಸಿನಿಮಾ ಅಪ್​ಡೇಟ್
ಪವನ್ ಕಲ್ಯಾಣ್
Follow us
ರಾಜೇಶ್ ದುಗ್ಗುಮನೆ
|

Updated on: Sep 02, 2024 | 7:57 AM

ಪವನ್ ಕಲ್ಯಾಣ್ ಅವರಿಗೆ ಜನ್ಮದಿನದಂದು (ಸೆಪ್ಟೆಂಬರ್ 2) ಬ್ಯಾಡ್​ನ್ಯೂಸ್ ಸಿಕ್ಕಿದೆ. ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಕಾರಣದಿಂದಲೇ ಪವನ್ ಕಲ್ಯಾಣ್ ಅವರು ಬರ್ತ್​ಡೇ ಆಚರಿಸಿಕೊಳ್ಳೋದಕ್ಕೆ ಬ್ರೇಕ್ ಹಾಕಿದ್ದಾರೆ. ಅವರ ಮುಂದಿನ ಸಿನಿಮಾಗಳಿಂದ ಯಾವುದೇ ಅಪ್​ಡೇಟ್ ಕೊಡದೇ ಇರಲು ಸಿನಿಮಾ ತಂಡಗಳು ನಿರ್ಧರಿಸಿವೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಸಾಮಾನ್ಯವಾಗಿ ಬರ್ತ್​ಡೇ ದಿನ ಹೊಸ ಹೊಸ ಅಪ್​ಡೇಟ್​ಗಳನ್ನು ನೀಡುವ ಕೆಲಸ ಸಿನಿಮಾ ತಂಡಗಳಿಂದ ಆಗುತ್ತವೆ. ಅದೇ ರೀತಿ ‘ಹರಿಹರ ವೀರ ಮಲ್ಲು’, ‘ಒಜಿ’, ‘ಉಸ್ತಾದ್ ಭಗತ್ ಸಿಂಗ್’ ತಂಡಗಳು ಸೆಪ್ಟೆಂಬರ್ 2ರಂದು ಪೋಸ್ಟರ್ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿದ್ದವು. ಆದರೆ, ಈ ಯೋಜನೆ ಕ್ಯಾನ್ಸಲ್ ಆಗಿದೆ.

‘ಸಾಕಷ್ಟು ಮಳೆ ಹಾಗೂ ಪ್ರವಾಹದ ಕಾರಣ ಪವನ್ ಕಲ್ಯಾಣ್ ಮುಂದಿನ ಸಿನಿಮಾಗಳ ಬಗ್ಗೆ ಯಾವುದೇ ಅಪ್​ಡೇಟ್ ಇರುವುದಿಲ್ಲ. ನಿಮಗೆ ಪರಿಸ್ಥಿತಿ ಅರ್ಥ ಆಗುತ್ತದೆ ಎಂದುಕೊಂಡಿದ್ದೇನೆ. ದಯವಿಟ್ಟು ಸಹಕರಿಸಿ’ ಎಂದು ಪವನ್ ಕಲ್ಯಾಣ್ ತಂಡದ ಕಡೆಯಿಂದ ಮಾಹಿತಿ ಸಿಕ್ಕಿದೆ. ಇದು ಅಭಿಮಾನಿಗಳ ಬೇಸರ ಹೆಚ್ಚಿಸಿದೆ.

ಪವನ್ ಕಲ್ಯಾಣ್ ಜನ್ಮದಿನವನ್ನು ಫ್ಯಾನ್ಸ್ ಯಾವಾಗಲೂ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಪವನ್ ಅವರು ಉಪಮುಖ್ಯಮಂತ್ರಿ ಕೂಡ ಆಗಿದ್ದರು. ಹೀಗಾಗಿ ಸೆಲೆಬ್ರೇಷನ್ ಜೋರಾಗಿಯೇ ಇರಬೇಕಿತ್ತು. ಆದರೆ, ಪವನ್ ಕಲ್ಯಾಣ್ ಅವರು ಈ ಬಾರಿ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ.

ಇದನ್ನೂ ಓದಿ: ಇಷ್ಟವಾದ್ರೆ ಬರ್ತೀನಿ, ಇಲ್ಲವಾದರೆ ಇಲ್ಲ: ಪವನ್ ಕಲ್ಯಾಣ್​ಗೆ ಟಾಂಗ್ ಕೊಟ್ಟ ಅಲ್ಲು ಅರ್ಜುನ್

ಸದ್ಯ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಪರಿಸ್ಥಿತಿಯನ್ನು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದಾರೆ. ಅಗತ್ಯ ಸಹಾಯವನ್ನು ಅವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಅವರು ಟಚ್​ನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?