ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿದ ಪವನ್ ಕಲ್ಯಾಣ್ ಅಭಿಮಾನಿಗಳು

Pawan Kalyan: ಪವನ್ ಕಲ್ಯಾಣ್​ರ ಮರು ಬಿಡುಗಡೆ ಆದ ಸಿನಿಮಾ ನೋಡುವ ವೇಳೆ ಪವನ್ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ.

ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿದ ಪವನ್ ಕಲ್ಯಾಣ್ ಅಭಿಮಾನಿಗಳು
ಪವನ್-ತೊಲಿಪ್ರೇಮ
Follow us
ಮಂಜುನಾಥ ಸಿ.
|

Updated on: Jul 01, 2023 | 6:06 PM

ತೆಲುಗು ಸಿನಿಮಾ ನಟರ ಅಭಿಮಾನಿಗಳ (Fans) ಅಭಿಮಾನ ಹುಚ್ಚಾಟಕ್ಕೆ ತಿರುಗಿದಂತಿದೆ. ಮೆಚ್ಚಿನ ನಟನ ಸಿನಿಮಾ ಬಿಡುಗಡೆ ಆದರೆ ಕಟೌಟ್ ಕಟ್ಟುವುದು, ಹಾರ ಹಾಕುವುದು, ಆಹಾರ ವಿತರಿಸುವುದು, ಇತರರಿಗೆ ಉಚಿತ ಟಿಕೆಟ್ ನೀಡುವುದು ತಮಟೆ, ಡೊಳ್ಳು ಕರೆಸಿ ಕುಣಿಯುವುದು ಸಾಮಾನ್ಯ. ಕರ್ನಾಟಕದಲ್ಲಿ ಇದೇ ನಡೆಯುತ್ತದೆ. ಆದರೆ ತೆಲುಗು ನಟರ ಅಭಿಮಾನಿಗಳು ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ. ಈ ಹಿಂದೆ ಕೆಲವು ಸ್ಟಾರ್ ನಟರ ಅಭಿಮಾನಿಗಳು ಚಿತ್ರಮಂದಿರಗಳಿಗೆ ಹಾನಿ ಮಾಡಿದ್ದರು ಈಗ ಪವನ್ ಕಲ್ಯಾಣ್ (Pawan Kalyan) ಅಭಿಮಾನಿಗಳ ಸರದಿ.

ಪವನ್ ಕಲ್ಯಾಣ್ ನಟನೆಯ ‘ತೊಲಿ ಪ್ರೇಮ’ ಸಿನಿಮಾ ಬಿಡುಗಡೆ ಆಗಿ 25 ವರ್ಷವಾದ ಬೆನ್ನಲ್ಲೆ ಸಿನಿಮಾ ತೆಲುಗು ರಾಜ್ಯಗಳಲ್ಲಿ ಮರು ಬಿಡುಗಡೆ ಆಗಿದೆ. ಪವನ್ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಆದರೆ ಕೆಲವು ಅಭಿಮಾನಿಗಳು ಇದೇ ಸಂದರ್ಭವನ್ನು ತಮ್ಮ ಹುಚ್ಚಾಟ ಪ್ರದರ್ಶಿಸಲಿಕ್ಕೆ ಬಳಸಿಕೊಂಡಿದ್ದು, ಚಿತ್ರಮಂದಿರದಲ್ಲಿ ಬೆಂಕಿ ಹಚ್ಚಿದ್ದಾರೆ.

ವಿಜಯವಾಡದ ಕಪರ್ದಿ ಎಸಿ ಚಿತ್ರಮಂದಿರದಲ್ಲಿ ಪವನ್ ಕಲ್ಯಾಣ್ ನಟನೆಯ ತೊಲಿ ಪ್ರೇಮ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ. ನಿರೀಕ್ಷೆಯಂತೆ ದೊಡ್ಡ ಸಂಖ್ಯೆಯಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳು ಸಿನಿಮಾಕ್ಕೆ ಬಂದಿದ್ದಾರೆ. ಆದರೆ ಕೆಲವು ಅಭಿಮಾನಿಗಳು ಪವನ್ ಕಲ್ಯಾಣ್ ಎಂಟ್ರಿ ಸೀನ್ ಸಮಯದಲ್ಲಿ ಚಿತ್ರಮಂದಿರದ ಒಳಗೆ ಬೆಂಕಿ ಹಚ್ಚಿದ್ದಾರೆ. ಮಾತ್ರವಲ್ಲದೆ ಚಿತ್ರಮಂದಿರದ ಸ್ಕ್ರೀನ್ ಅನ್ನು ಹರಿದಿದ್ದಾರೆ ಹಾಗೂ ಸೀಟುಗಳನ್ನು ಮುರಿದಿದ್ದಾರೆ. ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾ ನೋಡಿ ಸಿಟ್ಟಾಗಿದ್ದ ಅಮಿತಾಬ್ ಬಚ್ಚನ್: ಯಾಕೆ? ಸಿನಿಮಾ ಯಾವುದು?

ತೊಲಿಪ್ರೇಮ ಸಿನಿಮಾಕ್ಕೆ ಎರಡೂ ತೆಲುಗು ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅದೇ ಮಾದರಿಯಲ್ಲಿ ಪವನ್ ಅಭಿಮಾನಿಗಳು ಹಲವು ಚಿತ್ರಮಂದಿರಗಳಲ್ಲಿ ಅಶಿಸ್ತು ಪ್ರದರ್ಶಿಸಿರುವುದು ಸಹ ಸುದ್ದಿಯಾಗುತ್ತಿವೆ. ತೊಲಿ ಪ್ರೇಮ ಸಿನಿಮಾವು ಪವನ್​ರ ಹೊಸ ಸಿನಿಮಾ ಮಾದರಿಯಲ್ಲಿಯೇ ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಆಗಿದೆ.

ತೊಲಿ ಪ್ರೇಮ ಸಿನಿಮಾವು ಮೊದಲ ಬಾರಿಗೆ 1998 ರಲ್ಲಿ ಬಿಡುಗಡೆ ಆಗಿತ್ತು. ಕೀರ್ತಿ ರೆಡ್ಡಿ ನಾಯಕಿಯಾಗಿದ್ದ ಆ ಸಿನಿಮಾದ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿತು. ಸಿನಿಮಾವನ್ನು ಕರುಣಾಕರನ್ ನಿರ್ದೇಶನ ಮಾಡಿದ್ದರು. ಇದು ಅವರ ಮೊದಲ ಸಿನಿಮಾ. ಸಿನಿಮಾ ಕಲ್ಟ್ ಕ್ಲಾಸಿಕ್ ಎಂದೆನಿಸಿಕೊಂಡಿದ್ದು ಪವನ್ ಅಭಿಮಾನಿಗಳು ಮತ್ತೆ-ಮತ್ತೆ ಚಿತ್ರಮಂದಿರಕ್ಕೆ ಬಂದು ತೊಲಿ ಪ್ರೇಮ ಸಿನಿಮಾ ನೋಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ