AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ

ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಪವನ್ ಕಲ್ಯಾಣ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಗ್ಗೆ ಅಭಿಮಾನಿಗಳಿಗೆ ಆತಂಕ ಮೂಡಿದೆ. ಅವರ ಆರೋಗ್ಯದ ಪರಿಸ್ಥಿತಿ ಈಗ ಹೇಗಿದೆ ಎಂಬುದರ ಬಗ್ಗೆ ಸಹೋದರ ಚಿರಂಜೀವಿ ಅವರು ಅಪ್ಡೇಟ್ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ
Pawan Kalyan Image Credit source: PTI
ಮದನ್​ ಕುಮಾರ್​
|

Updated on:Apr 20, 2026 | 6:10 PM

Share

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್‌ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

ವೈದ್ಯರ ಸಲಹೆಯಂತೆ ಪವನ್ ಕಲ್ಯಾಣ್ ಅವರು ಇನ್ನು ಒಂದು ವಾರದಲ್ಲಿ ತಮ್ಮ ಎಂದಿನ ದಿನಚರಿಗೆ ಮರಳಲಿದ್ದಾರೆ ಎಂದು ಚಿರಂಜೀವಿ ಭರವಸೆ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಪ್ರೀತಿ, ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವೆಲ್ಲರೂ ಹಾರೈಸೋಣ’ ಎಂದು ಅವರು ತಿಳಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಆಂಧ್ರ ಉಪಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಶುಕ್ರವಾರ (ಏಪ್ರಿಲ್ 17) ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಇದ್ದಕ್ಕಿದ್ದಂತೆಯೇ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು.

ಶುಕ್ರವಾರ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಎಂಆರ್‌ಐ ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಯಿತು. ಪರೀಕ್ಷಾ ವರದಿಗಳನ್ನು ಪರಿಶೀಲಿಸಿದ ವೈದ್ಯರು ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ನಿರ್ಧರಿಸಿದರು. ಅದರಂತೆ ಶನಿವಾರ ಸಂಜೆ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಪವನ್ ಕಲ್ಯಾಣ್ ಅವರಿಗೆ ಕನಿಷ್ಠ 10 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಇದನ್ನೂ ಓದಿ: ಹನುಮ ಜಂತಿಯಂದು ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ ನಡೆಯಿತು ಅದ್ಭುತ

ಸದ್ಯಕ್ಕೆ ಅವರು ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಒಂದು ವಾರ ಅಥವಾ ಹತ್ತು ದಿನಗಳ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಹುದು ಎಂದು ಹೇಳಲಾಗಿದ್ದರೂ, ಸಂಪೂರ್ಣ ಗುಣಮುಖರಾಗಲು ದೀರ್ಘಕಾಲದ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅವಶ್ಯಕ ಎಂದು ವೈದ್ಯಕೀಯ ತಂಡ ತಿಳಿಸಿದೆ. ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ರಾಜಕೀಯ ಗಣ್ಯರು ಮತ್ತು ಚಿತ್ರರಂಗದ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:54 pm, Mon, 20 April 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು