ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ.

ಒಂದು ವಿಚಾರದಲ್ಲಿ ಎಡವಿದ ಪವನ್​ ಕಲ್ಯಾಣ್; ‘ಭೀಮ್ಲಾ ನಾಯಕ್​’ಗೆ ಗೆಲುವು ಬಲು ಕಷ್ಟ?
ಭೀಮ್ಲಾ ನಾಯಕ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 18, 2022 | 1:54 PM

ನಟ ಪವನ್​ ಕಲ್ಯಾಣ್​ಗೆ (Pawan Kalyan) ಟಾಲಿವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾ ನೋಡೋಕೆ ಅಭಿಮಾನಿಗಳ ದಂಡೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತದೆ. ಮೊದಲ ದಿನ ಮುಂಜಾನೆ 5 ಗಂಟೆಗೆ ಅವರ ಸಿನಿಮಾ ಶೋ ಇದ್ದರೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತದೆ. ಅವರ ಸಿನಿಮಾಗೆ ಅಷ್ಟು ತಾಕತ್ತಿದೆ. ಈಗ ಅವರ ನಟನೆಯ ‘ಭೀಮ್ಲಾ ನಾಯಕ್​’ (Bheemla Nayak) ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ, ಈ ಸಿನಿಮಾದ ಹಿಂದಿ ಅವತರಣಿಕೆಗೆ ಸಂಕಷ್ಟ ಎದುರಾಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಹೆಚ್ಚು ಗಮನ ವಹಿಸದೇ ಇದ್ದರೆ ಈ ಸಿನಿಮಾಗೆ ಹಿಂದಿಯಲ್ಲಿ ಗೆಲುವು ಸಿಗೋದು ಬಲುಕಷ್ಟ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಹಿಂದಿ ಭಾಷೆಗೆ ಡಬ್​ ಆಗಿಯೂ ಈ ಚಿತ್ರ ರಿಲೀಸ್​ ಆಗುತ್ತಿದೆ. ಆದರೆ, ಹಿಂದಿ ವಿಭಾಗದಲ್ಲಿ ಚಿತ್ರತಂಡದವರು ಅಷ್ಟಾಗಿ ಪ್ರಚಾರ ಮಾಡುತ್ತಿಲ್ಲ. ಇದರಿಂದ ಹಿಂದಿ ವರ್ಷನ್​ ಕಲೆಕ್ಷನ್​ ತಗ್ಗಬಹುದು.

ಪವನ್​ ಕಲ್ಯಾಣ್​ಗೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಅವರನ್ನು ಆರಾಧಿಸುವವರಿದ್ದಾರೆ. ಈ ಕಾರಣಕ್ಕೆ ಅವರ ಚಿತ್ರಗಳು ಕರ್ನಾಟಕದಲ್ಲೂ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಹೀಗಾಗಿ, ಈ ಭಾಗದಲ್ಲಿ ಅಷ್ಟಾಗಿ ಸಿನಿಮಾಗೆ ಪ್ರಚಾರ ನೀಡದಿದ್ದರೂ ಅಭಿಮಾನಿಗಳು ಬಂದು ಚಿತ್ರ ವೀಕ್ಷಿಸುತ್ತಾರೆ. ಆ ಬಳಿಕ ಸಿನಿಮಾ ಬಗ್ಗೆ ಟಾಕ್​ ಶುರುವಾದರೆ ಸಿನಿಮಾ ಕಲೆಕ್ಷನ್​ ಹೆಚ್ಚುತ್ತದೆ. ಆದರೆ, ಹಿಂದಿಯಲ್ಲಿ ಹಾಗೆ ಆಗುವುದಿಲ್ಲ.

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಹಿಂದಿಯಲ್ಲಿ 100 ಕೋಟಿ ಕಲೆಕ್ಷನ್​ ಮಾಡಿದೆ. ಇದಕ್ಕೆ ಹಲವು ಕಾರಣಗಳಿವೆ. ಅಲ್ಲು ಅರ್ಜುನ್​ ಅವರ ಈ ಮೊದಲ ಸಿನಿಮಾಗಳು ಹಿಂದಿಗೆ ಡಬ್​ ಆಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗಿದೆ. ಇದು ಕೋಟಿಕೋಟಿ ವೀಕ್ಷಣೆ ಕಂಡಿದೆ. ಹೀಗಾಗಿ, ಅನೇಕರಿಗೆ ಅವರ ಪರಿಚಯ ಇತ್ತು. ಇದು ‘ಪುಷ್ಪ’ ಸಿನಿಮಾ ಕಲೆಕ್ಷನ್​ ಹೆಚ್ಚೋಕೆ ಪ್ರಮುಖ ಕಾರಣವಾಗಿತ್ತು. ಆದರೆ, ಪವನ್​ ಕಲ್ಯಾಣ್​ ವಿಚಾರದಲ್ಲಿ ಆ ರೀತಿ ಆಗುವುದಿಲ್ಲ.

‘ಭೀಮ್ಲಾ ನಾಯಕ್​’ ತೆರೆಕಾಣೋಕೆ ಕೆಲವೇ ದಿನಗಳು ಬಾಕಿ ಇದೆ. ಈಗಲೂ ತಂಡದವರು ಹಿಂದಿಯಲ್ಲಿ ಅಬ್ಬರದ ಪ್ರಚಾರ ಮಾಡದೆ ಇದ್ದರೆ ಸಿನಿಮಾ ಅಲ್ಲಿ ಗೆಲ್ಲೋದು ಕಷ್ಟಸಾಧ್ಯ ಎನ್ನುವ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ‘ಭೀಮ್ಲಾ ನಾಯಕ್’ ಸಿನಿಮಾಗೆ ರಾಣಾ ದಗ್ಗುಬಾಟಿ ಪಡೆಯುತ್ತಿರುವ ಸಂಭಾವನೆ ಇಷ್ಟೊಂದಾ?

ಪವನ್​ ಕಲ್ಯಾಣ್​ ಅಭಿಮಾನಿಗಳಿಗೆ ‘ಭೀಮ್ಲಾ ನಾಯಕ್​’ ನಿರ್ಮಾಪಕರ ಕ್ಷಮೆ; ಖುಷಿಪಟ್ಟಿದ್ದು ರಾಜಮೌಳಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್