
ಪವನ್ ಕಲ್ಯಾಣ್ (Pawan Kalyan) ಅವರು ಟಾಲಿವುಡ್ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಇತ್ತೀಚೆಗೆ ರಾಜಕೀಯದಲ್ಲಿ ಅವರು ಆ್ಯಕ್ಟೀವ್ ಆಗಿರುವುದರಿಂದ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸೋಕೆ ಸಾಧ್ಯವಾಗುತ್ತಿಲ್ಲ. ಕಳೆದ ವರ್ಷದ ಆರಂಭದಲ್ಲಿ ತೆರೆಗೆ ಬಂದ ‘ಭೀಮ್ಲಾ ನಾಯಕ್’ (Bheemla Nayak) ಚಿತ್ರವೇ ಕೊನೆ. ಆ ಬಳಿಕ ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಈಗ ಅವರ ಕಾಲ್ಶೀಟ್ ಮೊತ್ತ ಕೇಳಿ ಅನೇಕರು ಅಚ್ಚರಿಗೊಂಡಿದ್ದಾರೆ. ಬಾಲಿವುಡ್ ಸ್ಟಾರ್ ಹೀರೋಗಿಂತ ಹೆಚ್ಚಿನ ಸಂಭಾವನೆಯನ್ನು ಪವನ್ ಕಲ್ಯಾಣ್ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ತಮಿಳಿನ ‘ವಿನೋದಯಾ ಸೀತಂ’ ಚಿತ್ರದ ತೆಲುಗು ರಿಮೇಕ್ನಲ್ಲಿ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಕೂಡ ಇತ್ತೀಚೆಗೆ ರಿಲೀಸ್ ಆಗಿದೆ. ಈ ಪೋಸ್ಟರ್ನಲ್ಲಿ ಸಾಯಿ ಧರಮ್ ತೇಜ್ ಅವರು ಕುರ್ಚಿ ಮೇಲೆ ಕುಳಿತಿದ್ದು, ಅವರ ಹೆಗಲಮೇಲೆ ಪವನ್ ಕಲ್ಯಾಣ್ ಕೈ ಹಾಕಿ ನಿಂತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ಪವನ್ ಕಲ್ಯಾಣ್ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಆರಂಭದಲ್ಲಿ ಈ ಚಿತ್ರಕ್ಕಾಗಿ ಪವನ್ ಕಲ್ಯಾಣ್ ಅವರು 100 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು. ಇದನ್ನು ಕೊಡಲು ನಿರ್ಮಾಪಕರು ಕೂಡ ಒಪ್ಪಿದ್ದರು. ಆದರೆ, ಪವನ್ ಕಲ್ಯಾಣ್ಗೆ ಸಮಯ ಸಿಗುತ್ತಿಲ್ಲ. ಇತರ ಚಿತ್ರದ ಕೆಲಸಗಳು ಹಾಗೂ ರಾಜಕೀಯ ಕೆಲಸಗಳಲ್ಲಿ ಪವನ್ ಕಲ್ಯಾಣ್ ಬ್ಯುಸಿ ಇದ್ದಾರೆ. ಹೀಗಾಗಿ, ಅವರು ಸಂಭಾವನೆ ಕಡಿಮೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ತೆಲುಗು ನಟ ಪವನ್ ಕಲ್ಯಾಣ್ ಕಾರ್ ಹಿಂಬಾಲಿಸಿದ ಅನುಮಾನಾಸ್ಪದ ವ್ಯಕ್ತಿಗಳು: ಸ್ಟಾರ್ ಮನೆ ಎದುರು ನಡುರಸ್ತೆಯಲ್ಲಿ ಮಧ್ಯರಾತ್ರಿ ಜಗಳ
ಪವನ್ ಕಲ್ಯಾಣ್ ಅವರು ಈ ಚಿತ್ರಕ್ಕಾಗಿ 20 ದಿನದ ಕಾಲ್ಶೀಟ್ ನೀಡಿದ್ದಾರೆ. ಇದಕ್ಕಿಂತ ಹೆಚ್ಚಿನ ಸಮಯ ಹೊಂದಿಸೋಕೆ ಅವರಿಗೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 50 ಕೋಟಿ ರೂಪಾಯಿ. ಅಂದರೆ ಒಂದು ದಿನದ ಸಂಭಾವನೆ 3.3 ಕೋಟಿ ರೂಪಾಯಿ. ಒಂದು ದಿನದ ಕಾಲ್ಶೀಟ್ಗೆ ಪವನ್ ಕಲ್ಯಾಣ್ ಇಷ್ಟೊಂದು ಹಣ ಪಡೆಯುತ್ತಿದ್ದಾರೆ ಎನ್ನುವ ವಿಚಾರ ಫ್ಯಾನ್ಸ್ಗೆ ಅಚ್ಚರಿ ಮೂಡಿಸಿದೆ. ಬಾಲಿವುಡ್ ಸ್ಟಾರ್ ಕಲಾವಿದರೂ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುವುದಿಲ್ಲ ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:44 am, Wed, 1 March 23