‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಆದಾಗ್ಯೂ ಅವರು ಸಂಬಳ ಪಡೆಯೋದಾಗಿ ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ನೀಡಿದ್ದಾರೆ.

 ‘ಸರ್ಕಾರ ಕೊಡೋ ಸಂಬಳದಲ್ಲಿ ಒಂದು ರೂಪಾಯಿನೂ ಬಿಡಲ್ಲ’; ಪವನ್ ಕಲ್ಯಾಣ್
ಪವನ್ ಕಲ್ಯಾಣ್
Follow us
|

Updated on:Jun 11, 2024 | 1:49 PM

ಪವನ್ ಕಲ್ಯಾಣ್ (Pawan Kalyan) ಅವರು ಈ ಬಾರಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಅವರ ಪಕ್ಷದಿಂದ ಸ್ಪರ್ಧಿಸಿದ ಎಲ್ಲಾ 21 ಸ್ಥಾನಗಳಲ್ಲಿ ಅವರಿಗೆ ಗೆಲುವು ಸಿಕ್ಕಿದೆ. ಅವರು ಸಂಭಾವನೆ ವಿಚಾರದಲ್ಲಿ ಈಗ ಮಾತನಾಡಿದ್ದಾರೆ. ತಮಗೆ ಸರ್ಕಾರ ನೀಡುವ ಸಂಬಳದಲ್ಲಿ ಅಷ್ಟೂ ಹಣವನ್ನು ಪಡೆಯೋದಾಗಿ ಪವನ್ ಕಲ್ಯಾಣ್  ಹೇಳಿದ್ದಾರೆ. ಇದಕ್ಕೆ ಕಾರಣ ಕೂಡ ನೀಡಿದ್ದಾರೆ.

ಪವನ್ ಕಲ್ಯಾಣ್ ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಆದಾಗ್ಯೂ ಅವರು ಸಂಬಳ ಪಡೆಯೋದಾಗಿ ಹೇಳಿದ್ದಾರೆ.  ‘ನಾನು ನನ್ನ ಸಂಪೂರ್ಣ ಸಂಭಾವನೆಯನ್ನು ಪಡೆಯುತ್ತೇನೆ. ನಾನು ಸಾರ್ವಜನಿಕರ ತೆರಿಗೆ ಹಣವನ್ನು ಸಂಭಾವನೆಯಾಗಿ ಪಡೆಯುತ್ತಿದ್ದೇನೆ ಅನ್ನೋದು ನನಗೆ ನೆನಪಾಗುತ್ತಿರಬೇಕು. ನಾನು ಖರ್ಚು ಮಾಡುವ ಪ್ರತಿ ರೂಪಾಯಿಗೂಜ ವಾಬ್ದಾರನಾಗಿರಲು ಬಯಸುತ್ತೇನೆ. ಹೀಗಾಗಿ ಪೂರ್ತಿ ಸಂಭಾವನೆ ಪಡೆಯುತ್ತೇನೆ. ಅವರ ಹಣವನ್ನು ಬಳಸಿದ್ದಕ್ಕಾಗಿ ನನ್ನನ್ನು ಜನರು ಪ್ರಶ್ನಿಸಬೇಕೆಂದು ನಾನು ಬಯಸುತ್ತೇನೆ’ ಎಂದಿದ್ದಾರೆ ಅವರು.

‘ಜವಾಬ್ದಾರಿಯುತ ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತೋರಿಸಲು ನಾನು ಬಯಸುತ್ತೇನೆ. ನಾನು ಆ ಬದಲಾವಣೆಯನ್ನು ತರಬೇಕಿದೆ. ನಿಜವಾದ ಶಾಸಕರು ಹೇಗೆ ಇರುತ್ತಾರೆ ಮತ್ತು ನಿಜವಾದ ನಾಯಕರಾಗುವುದು ಹೇಗೆ ಎಂಬುದನ್ನು ತೋರಿಸಬೇಕಿದೆ’ ಎಂದಿದ್ದಾರೆ ಪವನ್ ಕಲ್ಯಾಣ್.

ಇದನ್ನೂ ಓದಿ: ಈಗ ಅಪ್ಪಿ ಮುದ್ದಾಡುತ್ತಿರುವ ಚಿರಂಜೀವಿ-ಪವನ್ ಕಲ್ಯಾಣ್ ಹಿಂದೊಮ್ಮೆ ಕಿತ್ತಾಡಿಕೊಂಡಿದ್ದು ನೆನಪಿದೆಯೇ?

ಟಿಡಿಪಿ ನೇತೃತ್ವದ ಸಂಪುಟದಲ್ಲಿ ಪವನ್ ಕಲ್ಯಾಣ್ ಯಾವ ಖಾತೆಯನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಮತ್ತು ಪ್ರೇಕ್ಷಕರು ಕಾಯುತ್ತಿದ್ದಾರೆ. ಶಾಸಕರ ವೇತನ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಆಂಧ್ರ ಪ್ರದೇಶದಲ್ಲಿ ಶಾಸಕರಿಗೆ ತಿಂಗಳ ಸಂಭಾವನೆ 1,25,000 ಇದೆ ಎನ್ನಲಾಗಿದೆ. ಇದರ ಜೊತೆಗೆ ಇತರ ಭತ್ಯೆಗಳು ಕೂಡ ಸಿಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Mon, 10 June 24

ತಾಜಾ ಸುದ್ದಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ