ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ

Pawan Kalyan: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿರುವ ಪವನ್ ಕಲ್ಯಾಣ್​ ಸಿನಿಮಾಗಳಿಂದಲೂ ದೂರವಾಗಿಲ್ಲ. ಅವರ ನಟನೆಯ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ
Follow us
ಮಂಜುನಾಥ ಸಿ.
|

Updated on: Feb 06, 2024 | 8:24 PM

ತೆಲುಗು ಚಿತ್ರರಂಗದ (Tollywood) ಟಾಪ್ ನಟರಲ್ಲಿ ಒಬ್ಬರಾದ ಪವನ್ ಕಲ್ಯಾಣ್ (Pawan Kalyan) ಈಗ ತಮ್ಮ ಸಂಪೂರ್ಣ ಗಮನ ಹಾಗೂ ಸಮಯವನ್ನು ರಾಜಕೀಯಕ್ಕೆ ಮೀಸಲಾಗಿರಿಸಿದ್ದಾರೆ. ಆಂಧ್ರ ಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿರುವ ಪವನ್ ಕಲ್ಯಾಣ್ ಕೆಲವೇ ತಿಂಗಳಲ್ಲಿ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದರ ನಡುವೆ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರಮಲ್ಲು’, ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಇದೀಗ ಪವನ್ ನಟನೆಯ ಒಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಕೆಲವೇ ತಿಂಗಳಲ್ಲಿ ನಡೆಯಲಿದೆ. ಚುನಾವಣೆ ಸಮೀಪಿಸಿದಾಗ ಪವನ್ ಕಲ್ಯಾಣ್​ರ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ. ಆ ಮೂಲಕ ಸಿನಿಮಾವನ್ನು ಅವರ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂಬ ಚರ್ಚೆ ನಡೆಯುತ್ತಿತ್ತು. ಇದೀಗ ಪವನ್ ಕಲ್ಯಾಣ್​ರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು ಆಂಧ್ರದ ಚುನಾವಣೆ ಮುಗಿದ ಬಳಿಕ ಹೊಸ ಸಿನಿಮಾ ಬಿಡುಗಡೆಗೆ ಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ

ಪವನ್ ಕಲ್ಯಾಣ್​ರ ‘ಓಜಿ’ ಸಿನಿಮಾ ಸೆಪ್ಟೆಂಬರ್ 27ರಂದು ಬಿಡುಗಡೆ ಆಗಲಿದೆ. ಗ್ಯಾಂಗ್​ಸ್ಟರ್ ಸಿನಿಮಾ ಇದಾಗಿದ್ದು ಸಿನಿಮಾನಲ್ಲಿ ಭೂಗತ ಲೋಕದ ಡಾನ್​ ಪಾತ್ರದಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಸಿನಿಮಾ ರೆಟ್ರೋ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟೀಸರ್ ಒಂದು ಐದು ತಿಂಗಳ ಹಿಂದೆಯೇ ಬಿಡುಗಡೆ ಆಗಿತ್ತು, ಪ್ರೋಮೋನಲ್ಲಿ ಪವನ್ ಕಲ್ಯಾಣ್​ರ ಆಕ್ಷನ್ ಅವತಾರದ ಗ್ಲಿಂಪ್ಸ್​ ಅನ್ನು ತೋರಿಸಲಾಗಿತ್ತು.

‘ಓಜಿ’ ಸಿನಿಮಾವನ್ನು ಸುಜಿತ್ ನಿರ್ದೇಶನ ಮಾಡಿದ್ದಾರೆ. ಸುಜಿತ್ ಈ ಹಿಂದೆ ‘ರನ್ ರಾಜ ರನ್’ ಹಾಗೂ ಪ್ರಭಾಸ್ ನಟನೆಯ ‘ಸಾಹೋ’ ಸಿನಿಮಾ ನಿರ್ದೇಶನ ಮಾಡಿದ್ದರು. ಅವರ ಮೂರನೇ ಸಿನಿಮಾ ‘ಓಜಿ’. ‘ಆರ್​ಆರ್​ಆರ್’ ಸಿನಿಮಾ ನಿರ್ಮಾಣ ಮಾಡಿದ್ದ ಡಿವಿವಿ ದಯಾನಂದ್ ಅವರೇ ‘ಓಜಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಎಸ್​ಎಸ್ ತಮನ್ ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಅರುಲ್ ಮೋಹನ್ ನಾಯಕಿಯಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಇಮ್ರಾನ್ ಹಶ್ಮಿ ವಿಲನ್. ಪ್ರಕಾಶ್ ರೈ, ಶ್ರಿಯಾ ರೆಡ್ಡಿ ಇನ್ನೂ ಕೆಲವು ಜನಪ್ರಿಯ ನಟರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್