
ಆಂಧ್ರ ಪ್ರದೇಶದ ಉಪ ಮುಖ್ಯ ಮಂತ್ರಿ ಆದ ಬಳಿಕವೂ ಪವನ್ ಕಲ್ಯಾಣ್ (Pawan Kalyan) ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ ಬದಲಿಗೆ ಚುನಾವಣೆಗೆ ಮುಂಎ ಒಪ್ಪಿಕೊಂಡಿದ್ದ ಸಿನಿಮಾಗಳನ್ನು ಮುಗಿಸಿಕೊಡುತ್ತಿದ್ದಾರೆ. ಇತ್ತೀಚೆಗಷ್ಟೆ ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಗಳಿಸಿತ್ತು. ರಾಜಕಾರಣಿಯಾದ ಬಳಿಕ ಪವನ್ಗೆ ಇದ್ದ ಕ್ರೇಜ್ ಕಡಿಮೆ ಆಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದವರಿಗೆ ‘ಓಜಿ’ ಕಲೆಕ್ಷನ್ ಉತ್ತರ ನೀಡಿದೆ. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದ್ದು, ದಿನಾಂಕ ನಿಗದಿ ಆಗಿದೆ.
ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಸೆಪ್ಟೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳಿಗೂ ಮುಂಚೆಯೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ‘ಓಜಿ’ ಸಿನಿಮಾ ಅಕ್ಟೋಬರ್ 23 ರಂದು ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ನೆಟ್ಪ್ಲಿಕ್ಸ್ನಲ್ಲಿ ‘ಓಜಿ’ ಸಿನಿಮಾವನ್ನು ತೆಲುಗು ಮಾತ್ರವಲ್ಲದೆ ತಮಿಳು, ಹಿಂದಿ, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಸಹ ವೀಕ್ಷಣೆ ಮಾಡಬಹುದಾಗಿದೆ.
ಪವನ್ ಕಲ್ಯಾಣ್ ನಟಿಸಿರುವ ‘ಓಜಿ’ ಸಿನಿಮಾವನ್ನು ಸುಜೀತ್ ನಿರ್ದೇಶನ ಮಾಡಿದ್ದರು. ಈ ಹಿಂದೆ ಇವರು ಪ್ರಭಾಸ್ ನಟನೆಯ ‘ಸಾಹೊ’ ಸಿನಿಮಾ ನಿರ್ದೇಶಿಸಿದ್ದರು. ಸೆಪ್ಟೆಂಬರ್ 25 ರಂದು ಬಿಡುಗಡೆ ಆಗಿದ್ದ ‘ಓಜಿ’ ಸಿನಿಮಾ ಭರ್ಜರಿ ಓಪನಿಂಗ್ ಪಡೆದುಕೊಂಡಿತ್ತು. ಈ ವರೆಗೆ ಸಿನಿಮಾ 350 ಕೋಟಿಗೂ ಹೆಚ್ಚಿನ ಮೊತ್ತವನ್ನು ಬಾಕ್ಸ್ ಆಫೀಸ್ನಲ್ಲಿ ಗಳಿಕೆ ಮಾಡಿದೆ. ಆಂಧ್ರ, ತೆಲಂಗಾಣದ ಕೆಲವು ಕಡೆಗಳಲ್ಲಿ ಈಗಲೂ ಸಹ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅಷ್ಟರಲ್ಲೇ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ.
ಇದನ್ನೂ ಓದಿ:ನೀರಿನ ಸಮಸ್ಯೆ ಬಗೆಹರಿಸಲು ಸಹೋದರನಾಗಿ ಪ್ರಯತ್ನ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್
‘ಓಜಿ’ ಸಿನಿಮಾವು ಒಬ್ಬ ಗ್ಯಾಂಗ್ಸಟರ್ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಓಜಸ್ ಗಂಭೀರ ಪಾತ್ರದಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಜೊತೆಗೆ ಪ್ರಕಾಶ್ ರೈ, ವಿಲನ್ ಆಗಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಪೋಷಕ ಪಾತ್ರದಲ್ಲಿ ಅರ್ಜುನ್ ದಾಸ್. ನಾಯಕಿಯಾಗಿ ಪ್ರಿಯಾಂಕಾ ಮೋಹನ್ ನಟಿಸಿದ್ದಾರೆ. ಸಿನಿಮಾಕ್ಕೆ ತಮನ್ ಸಂಗೀತ ನೀಡಿದ್ದಾರೆ. ಡಿವಿವಿ ಎಂಟರ್ಟೈನ್ಮೆಂಟ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದೆ.
ಪವನ್ ಕಲ್ಯಾಣ್, ಆಂಧ್ರ ಡಿಸಿಎಂ ಆದ ಬಳಿಕ ಬಿಡುಗಡೆ ಆದ ಅವರ ಎರಡನೇ ಸಿನಿಮಾ ‘ಓಜಿ’ ಆಗಿತ್ತು. ಇದಕ್ಕೆ ಮುಂಚೆ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಗಿ ಫ್ಲಾಪ್ ಎನಿಸಿಕೊಂಡಿತು. ಇನ್ನು ಒಂದು ಸಿನಿಮಾನಲ್ಲಿ ಪವನ್ ಕಲ್ಯಾಣ್ ನಟಿಸುತ್ತಿದ್ದಾರೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಪವನ್ ಕಲ್ಯಾಣ್ ನಟಿಸುತ್ತಿದ್ದಾರೆ. ಈ ಸಿನಿಮಾನಲ್ಲಿ ಶ್ರೀಲೀಲಾ ನಾಯಕಿ. ಹರೀಶ್ ಶಂಕರ್ ಈ ಸಿನಿಮಾದ ನಿರ್ದೇಶಕ. ಈ ಹಿಂದೆ ‘ಗಬ್ಬರ್ ಸಿಂಗ್’ ಸಿನಿಮಾವನ್ನು ಇವರೇ ನಿರ್ದೇಶಿಸಿದ್ದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ