‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಟಿಕೆಟ್ ದರ ಹೆಚ್ಚಳದ ಬಗ್ಗೆ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 'ಇದು ಶೋಷಣೆಯಲ್ಲ, ಚಿತ್ರಮಂದಿರದಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ, ನೆಟ್‌ಫ್ಲಿಕ್ಸ್ ಆಯ್ಕೆಗಳಿವೆ' ಎಂದರು. 'ಉಸ್ತಾದ್ ಭಗತ್ ಸಿಂಗ್' ಪ್ರೀ-ರಿಲೀಸ್ ಇವೆಂಟ್‌ನಲ್ಲಿ ನೀಡಿದ ಈ ಹೇಳಿಕೆ ಪರ-ವಿರೋಧ ಅಭಿಪ್ರಾಯಗಳನ್ನು ಹುಟ್ಟುಹಾಕಿದೆ.

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್
ಪವನ್ ಕಲ್ಯಾಣ್

Updated on: Mar 16, 2026 | 10:06 AM

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಅಲ್ಲಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಎಲ್ಲಾ ಉದ್ಯಮಗಳ ಸಿನಿಮಾಗಳು ಗೆಲ್ಲಲಿ ಎಂದು ನಾನು ಬಯಸುತ್ತೇನೆ. ಯಾರಿಗೂ ತಾರತಮ್ಯ ಮಾಡುವುದಿಲ್ಲ . ಜೂನಿಯರ್ ಎನ್‌ಟಿಆರ್, ಮಹೇಶ್ ಬಾಬು ಅಥವಾ ಪ್ರಭಾಸ್ ಯಾರೇ ನಟಿಸಿದ ಚಿತ್ರವಾದರೂ ಪ್ರತಿ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕೆಂದು ಹಾರೈಸುತ್ತೇನೆ’ ಎಂದು ಅವರು ಹೇಳಿದರು.

ಕನ್ನಡದ ಬ್ಲಾಕ್‌ಬಸ್ಟರ್ ಚಿತ್ರ ‘ಕಾಂತಾರ’ ಸಿನಿಮಾದ ಯಶಸ್ಸನ್ನು ಉದಾಹರಣೆಯಾಗಿ ನೀಡಿದರು. ‘ಭಾಷೆ ಅಥವಾ ಸಿನಿಮಾದಲ್ಲಿ ಯಾರು ನಟಿಸಿದ್ದಾರೆ ಎಂಬುದನ್ನು ಲೆಕ್ಕಿಸಬಾರದು. ತೆಲುಗು ಚಿತ್ರಗಳು ಕರ್ನಾಟಕದಲ್ಲಿ ಹಿನ್ನಡೆಯನ್ನು ಎದುರಿಸುತ್ತಿವೆ. ಆದರೂ ಕಾಂತಾರದಂತಹ ಚಿತ್ರದ ಬಗ್ಗೆ ನಾನು ಎಂದಿಗೂ ಕೆಟ್ಟದಾಗಿ ಭಾವಿಸಿಲ್ಲ. ಏಕೆಂದರೆ ಅದು ಭಾರತೀಯ ಚಿತ್ರವಾಗಿದ್ದು, ಅದನ್ನು ಪ್ರೋತ್ಸಾಹಿಸಬೇಕಾಗಿದೆ’ ಎಂದು ಅವರು ಹೇಳಿದರು.

ಟಿಕೆಟ್ ದರ ಏರಿಕೆಯ ಬಗ್ಗೆ ಮಾತನಾಡಿದ ಪವನ್ ಕಲ್ಯಾಣ್, ‘ಅದನ್ನು ಶೋಷಣೆ ಎಂದು ನೋಡಬಾರದು. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ. ಈಗ ಪ್ರೇಕ್ಷಕರು ನೆಟ್‌ಫ್ಲಿಕ್ಸ್, ಅಮೇಜಾನ್ ಸೇರಿದಂತೆ ಅನೇಕ ಪ್ಲಾಟ್‌ಫಾರ್ಮ್’ ಆಯ್ಕೆ ಹೊಂದಿದ್ದಾರೆ ಎಂದು ಅವರು ಹೇಳಿದರು. ನಿರ್ಮಾಪಕರು ದೊಡ್ಡ ಮೊತ್ತವನ್ನು ಹಾಕಿರುತ್ತಾರೆ. ಅದಕ್ಕೆ ಪ್ರತಿಯಾಗಿ ಹಣ ಪಡೆಯಬೇಕು ಎಂಬ ಕಾರಣಕ್ಕೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ಆಂಧ್ರದಲ್ಲಿ ಟಿಕೆಟ್ ದರ ಹೆಚ್ಚಿಸೋದಾದರೆ ಸರ್ಕಾರದ ಒಪ್ಪಿಗೆ ಬೇಕು. ಅದು ಕೂಡ ಕೆಲವೇ ದಿನ ಮಾತ್ರ ಟಿಕೆಟ್ ದರ ಹೆಚ್ಚಿಸಲ ಅವಕಾಶ ಇರುತ್ತದೆ. ಆದರೆ, ಕರ್ನಾಟಕದಲ್ಲಿ ಈ ರೀತಿಯ ಯಾವುದೇ ಕಟ್ಟುಪಾಡು ಇಲ್ಲ. ಹೀಗಾಗಿ, ಇದೊಂದು ದಬ್ಬಾಳಿಕೆ ಎಂದೇ ಪರಿಗಣಿಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us