AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್ ಜೊತೆ ಡ್ಯಾನ್ಸ್ ಮಾಡಲಿದ್ದಾರೆ ಖ್ಯಾತ ಆ್ಯಂಕರ್

ಟಾಲಿವುಡ್​ನ ಆ್ಯಂಕರ್ ಅನಸೂಯ ಅವರು ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಅವರು ಪವನ್ ಕಲ್ಯಾಣ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಕೇವಲ ಆ್ಯಂಕರಿಂಗ್ ಮಾತ್ರವಲ್ಲದೆ ಅವರು ನಟನೆ ಮೂಲಕವೂ ಗುರುತಿಸಿಕೊಂಡಿದ್ದಾರೆ. ಈಗ ಅವರು ಟಿವಿ ಶೋ ಒಂದರ ವೇದಿಕೆ ಮೇಲೆ ಈ ಬಗ್ಗೆ ಮಾತನಾಡಿದ್ದಾರೆ.

ಪವನ್ ಕಲ್ಯಾಣ್ ಜೊತೆ ಡ್ಯಾನ್ಸ್ ಮಾಡಲಿದ್ದಾರೆ ಖ್ಯಾತ ಆ್ಯಂಕರ್
ಪವನ್ ಕಲ್ಯಾಣ್ ಜೊತೆ ಡ್ಯಾನ್ಸ್ ಮಾಡಲಿದ್ದಾರೆ ಖ್ಯಾತ ಆ್ಯಂಕರ್
TV9 Web
| Edited By: |

Updated on: Jul 24, 2024 | 12:44 PM

Share

ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವರ ಪಕ್ಷ ಗೆಲುವು ಕಂಡಿದೆ. ರಾಜಕೀಯದ ಜೊತೆ ಪವನ್ ಕಲ್ಯಾಣ್ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಈಗ ಅವರು ಖ್ಯಾತ ಆ್ಯಂಕರ್ ಜೊತೆ ವಿಶೇಷ ಸಾಂಗ್ ಒಂದರಲ್ಲಿ ಹೆಜ್ಜೆ ಹಾಕಲಿದ್ದಾರೆ. ಅದು ಯಾವ ಸಿನಿಮಾ, ಇದರ ಶೂಟ್ ಯಾವಾಗ ನಡೆಯಲಿದೆ ಎನ್ನುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಟಾಲಿವುಡ್​ನ ಆ್ಯಂಕರ್ ಅನಸೂಯ ಅವರು ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಅವರು ಪವನ್ ಕಲ್ಯಾಣ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಕೇವಲ ಆ್ಯಂಕರಿಂಗ್ ಮಾತ್ರವಲ್ಲದೆ ಅವರು ನಟನೆ ಮೂಲಕವೂ ಗುರುತಿಸಿಕೊಂಡಿದ್ದಾರೆ. ಈಗ ಅವರು ಟಿವಿ ಶೋ ಒಂದರ ವೇದಿಕೆ ಮೇಲೆ ಈ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಸಖತ್ ಚರ್ಚೆಗಳು ನಡೆಯುತ್ತಿವೆ.

ವೇದಿಕೆ ಏರಿದ ಅನಸೂಯ ಅವರು ‘ನಾನು ಇದೇ ಮೊದಲ ಬಾರಿಗೆ ಈ ವಿಚಾರವನ್ನು ರಿವೀಲ್ ಮಾಡುತ್ತಿದ್ದೇನೆ. ನಾನು ಪವನ್ ಸರ್ ಜೊತೆ ಡ್ಯಾನ್ಸ್ ಮಾಡಲಿದ್ದೇನೆ. ಈ ಸಾಂಗ್ ಬೆಳ್ಳಿಪರದೆ ಮೇಲೆ ಅಬ್ಬರಿಸಲಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ, ಅವರು ಹೆಜ್ಜೆ ಹಾಕೋದು ಯಾವ ಸಿನಿಮಾದಲ್ಲಿ ಎಂಬಿತ್ಯಾದಿ ವಿಚಾರವನ್ನು ರಿವೀಲ್ ಮಾಡಿಲ್ಲ.

ಇದನ್ನೂ ಓದಿ: ಅಂಬಾನಿ ಮದುವೆಗೆ ಪವರ್​ಫುಲ್ ಎಂಟ್ರಿ ಕೊಟ್ಟ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಅವರು ಸದ್ಯ ‘ಹರಿ ಹರ ವೀರ ಮಲ್ಲು’, ‘ಒಜಿ’ ಹಾಗೂ ‘ಉಸ್ತಾದ ಭಗರ್ ಸಿಂಗ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅನೇಕರು ಈ ವಿಶೇಷ ಡ್ಯಾನ್ಸ್ ಇರೋದು  ‘ಹರಿ ಹರ ವೀರ ಮಲ್ಲು’ ಸಿನಿಮಾದಲ್ಲಿ ಎಂದು ಹೇಳುತ್ತಿದ್ದಾರೆ. ಒಂದೊಮ್ಮೆ ಅವರು ವಿಶೇಷ ಡ್ಯಾನ್ಸ್ ಮಾಡಿರೋದು ‘ಒಜಿ’ ಸಿನಿಮಾಗೆ ಆದರೆ, ಅವರು ಈಗಾಗಲೇ ಶೂಟಿಂಗ್ ಪೂರ್ಣಗೊಳಿಸಿದ್ದಾರೆ ಎಂದರ್ಥ. ಈ ಬಗ್ಗೆ ತಂಡದ ಕಡೆಯಿಂದಲೇ ಹೆಚ್ಚಿನ ಮಾಹಿತಿ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್