AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳ ಬಳಸಿಕೊಂಡು ಆಡಳಿತ, ಪವನ್ ಕಲ್ಯಾಣ್ ಹೊಸ ಪ್ಲ್ಯಾನ್

Pawan Kalyan: ಪವನ್ ಕಲ್ಯಾಣ್ ಸಿನಿಮಾ ಬಿಡುಗಡೆ ಆದರೆ ಜನ ಮೊದಲ ದಿನವೇ ಮುಗಿಬಿದ್ದು ಟಿಕೆಟ್ ಖರೀದಿಸಿ, ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಸಿನಿಮಾ ನೋಡುತ್ತಾರೆ. ಆದರೆ ಇನ್ನು ಮುಂದೆ, ಪವನ್ ಕಲ್ಯಾಣ್ ನೋಡಲು ಚಿತ್ರಮಂದಿರಕ್ಕೆ ಹೋಗುವ ಜನ, ಅಲ್ಲಿ ಅವರೊಟ್ಟಿಗೆ ಮಾತನಾಡಬಹುದು, ಕಷ್ಟ ಹೇಳಿಕೊಂಡು ಪರಿಹಾರ ಪಡೆಯಬಹುದು!

ಚಿತ್ರಮಂದಿರಗಳ ಬಳಸಿಕೊಂಡು ಆಡಳಿತ, ಪವನ್ ಕಲ್ಯಾಣ್ ಹೊಸ ಪ್ಲ್ಯಾನ್
Pawan Kalyan
ಮಂಜುನಾಥ ಸಿ.
|

Updated on:May 21, 2025 | 1:15 PM

Share

ಚಿತ್ರಮಂದಿರಗಳು (Theater) ಇರುವುದು ಮನರಂಜನೆಗೆ, ಸಿನಿಮಾ ವೀಕ್ಷಣೆಗೆ ಇತ್ತೀಚೆಗೆ ಅಲ್ಲಲ್ಲಿ ಚಿತ್ರಮಂದಿರಗಳಲ್ಲಿ ಕ್ರಿಕೆಟ್ ಪ್ರದರ್ಶನ ಸಹ ನಡೆದಿದೆ. ಒಟ್ಟಾರೆಯಾಗಿ ಚಿತ್ರಮಂದಿರಗಳನ್ನು ಕೇವಲ ಮನರಂಜನೆಗಾಗಿ ಮಾತ್ರವೇ ಬಳಸಲಾಗುತ್ತಿದೆ. ಆದರೆ ಇದೀಗ ಚಿತ್ರಮಂದಿರಗಳನ್ನು ಆಡಳಿತಕ್ಕಾಗಿ ಬಳಸು ಆಲೋಚನೆ ಆಂಧ್ರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರಿಗೆ ಬಂದಿದೆ. ಇದೇ ಗುರುವಾರ ಪವನ್​ ಕಲ್ಯಾಣ್ ಅವರ ಈ ಹೊಸ ಯೋಜನೆ ಲಾಂಚ್ ಆಗುತ್ತಿದೆ.

‘ಮನ ಊರು ಮಾಟ-ಮಂಚಿ ಮಾಟ’ (ನಮ್ಮ ಊರ ಮಾತು, ಒಳ್ಳೆ ಮಾತು) ಎಂಬ ಹೊಸ ಕಾರ್ಯಕ್ರಮವನ್ನು ಪವನ್ ಕಲ್ಯಾಣ್ ಲಾಂಚ್ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಡಿಸಿಎಂ ಪವನ್ ಕಲ್ಯಾಣ್. ಈ ಕಾರ್ಯಕ್ರಮ ಗ್ರಾಮ ಸಭೆ ಮಾದರಿಯ ಕಾರ್ಯಕ್ರಮ ಆಗಿದ್ದು, ಈ ಕಾರ್ಯಕ್ರಮದಡಿ ಆಂಧ್ರ ಪ್ರದೇಶದ ಗ್ರಾಮವಾಸಿಗಳ ಕುಂದು-ಕೊರತೆಗಳನ್ನು ಆಲಿಸಲಿದ್ದಾರೆ ಪವನ್ ಕಲ್ಯಾಣ್.

ಹಾಗೆಂದು ಪವನ್ ಕಲ್ಯಾಣ್ ಯಾವುದೇ ಗ್ರಾಮಕ್ಕೆ ಭೇಟಿಗೆ ಹೋಗುವುದಿಲ್ಲ. ಬದಲಿಗೆ ಮಂಗಳಗಿರಿಯ ತಮ್ಮ ಕಚೇರಿಯಲ್ಲಿಯೇ ಕೂತು ವಿಡಿಯೋ ಕಾನ್ಫರೆನ್ಸ್ ಮೂಲಕ ಆಂಧ್ರದ ಹಳ್ಳಿಗರೊಟ್ಟಿಗೆ ಮಾತನಾಡಲಾಗಿದ್ದಾರೆ. ಗ್ರಾಮಸ್ಥರು ಸ್ಥಳೀಯ ಚಿತ್ರಮಂದಿರಗಳಿಗೆ ಭೇಟಿ ನೀಡಿದರೆ ಅಲ್ಲಿ ಪವನ್ ಕಲ್ಯಾಣ್​ರ ವಿಡಿಯೋ ಕಾನ್ಫರೆನ್ಸ್ ಅನ್ನು ವೀಕ್ಷಿಸಬಹುದು ಮತ್ತು ಸಕ್ರಿಯವಾಗಿ ಭಾಗಿ ಆಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು, ಸ್ಥಳದಲ್ಲಿಯೇ ಪರಿಹಾರವನ್ನು ಪಡೆಯಬಹುದಾಗಿರುತ್ತದೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಸಿನಿಮಾಕ್ಕೆ ಮತ್ತೆ ಸಂಕಷ್ಟ, ಬಿಡುಗಡೆ ಮುಂದೂಡಿಕೆ ಸಾಧ್ಯತೆ

ಗುರುವಾರದಂದು ಈ ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದು ಮೊದಲನೇಯದಾಗಿ ಶ್ರೀಕಾಕುಲಂ ಜಿಲ್ಲೆಯ ರಾವಿವಾಸಲ ಗ್ರಾಮದ ಜನರೊಟ್ಟಿಗೆ ಪವನ್ ಕಲ್ಯಾಣ್ ಚರ್ಚೆ ಮಾಡಲಿದ್ದಾರೆ. ಈ ಕಾರ್ಯಕ್ರಮ ತೆಕ್ಕಲಿಯ ಭವಾನಿ ಥಿಯೇಟರ್​​ನಲ್ಲಿ ನಡೆಯಲಿದೆ. ಸುಮಾರು 300 ಮಂದಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಈ ವೇಳೆ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಿರಲಿದ್ದಾರೆ.

ಈ ಹಿಂದೆ ಪವನ್ ಕಲ್ಯಾಣ್​ರ ಸಿನಿಮಾ ನೋಡಿ ಚಪ್ಪಾಳೆ, ಶಿಳ್ಳೆ ಹೊಡೆಯಲು ಜನ ಚಿತ್ರಮಂದಿರಗಳಿಗೆ ಹೋಗುತ್ತಿದ್ದರು. ಆದರೆ ಈಗ ಪವನ್ ಕಲ್ಯಾಣ್ ಜೊತೆ ಮಾತನಾಡಲು, ಅವರ ಬಳಿ ಕಷ್ಟ ಹೇಳಿಕೊಂಡು ಪರಿಹಾರ ಪಡೆದುಕೊಳ್ಳಲು ಜನ ಚಿತ್ರಮಂದಿರಕ್ಕೆ ಹೋಗಲಿದ್ದಾರೆ. ಆಂಧ್ರ ಪ್ರದೇಶ ರಾಜ್ಯದಾದ್ಯಂತ ಈ ಕಾರ್ಯಕ್ರಮ ಮಾಡಲಿಚ್ಛಿಸಿದ್ದು ಚಿತ್ರಮಂದಿರಗಳೇ ಪವನ್ ಕಲ್ಯಾಣ್​ರ ಈ ಕಾರ್ಯಕ್ರಮದ ಮುಖ್ಯ ವೇದಿಕೆ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Wed, 21 May 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ