ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!

ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ.

ವಕೀಲ್​ ಸಾಬ್​ ಹಿಟ್​ ಏನೋ ಆಯ್ತು, ಆದರೂ ಅಭಿಮಾನಿಗಳಿಗೆ ಕಹಿ ಸುದ್ದಿ!
(ವಕೀಲ್​ ಸಾಬ್​ ಸಿನಿಮಾದಲ್ಲಿ ಪವನ್​ ಕಲ್ಯಾಣ್​)
Follow us
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:43 PM

ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಕೊರೊನಾ ಅಬ್ಬರದ ನಡುವೆಯೂ ಸಿನಿಮಾ ಇಷ್ಟೊಂದು ಕಲೆಕ್ಷನ್​ ಮಾಡುತ್ತಿರುವುದಕ್ಕೆ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂಭ್ರಮಾಚರಣೆ ಜೋರಾಗಿದೆ. ಈ ಮಧ್ಯೆ, ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್ ಒಂದು ಸಿಕ್ಕಿದೆ. ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ. ಇದು ಪವನ್​ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪವನ್​ ಕಲ್ಯಾಣ್​ ಕ್ವಾರಂಟೈನ್​ ವಿಚಾರವನ್ನು ಜನೇಸನಾ ಪಕ್ಷದ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಪವನ್​ ಕಲ್ಯಾಣ್​ ಆಪ್ತ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಅವರು ಹಲವು ದಿನಗಳಿಂದ ಪವನ್​ ಕಲ್ಯಾಣ್​ ಜತೆಯಲ್ಲೇ ಇದ್ದರು. ಹೀಗಾಗಿ, ಪವನ್​ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಭಿಮಾನಿಗಳಿಗೆ ಇದು ಬಲು ದೊಡ್ಡ ನಿರಾಸೆ ಉಂಟು ಮಾಡಿದೆ. ವಕೀಲ್​ ಸಾಬ್ ಗೆಲುವಿನ​ ಖುಷಿಯನ್ನು ಆಚರಿಸಿಕೊಳ್ಳಲು ವಕೀಲ್​ ಸಾಬ್​ ಸಕ್ಸಸ್​ ಮೀಟ್​ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದರ ಜತೆಗೆ ತಿರುಪತಿ ಉಪಚುನಾವಣೆಯ ಪ್ರಚಾರದ ಭಾಗವಾಗಿ ರೋಡ್​ ಶೋನಲ್ಲೂ  ಪವನ್​ ಪಾಲ್ಗೊಳ್ಳಬೇಕಿತ್ತು. ಆದರೆ, ಇದು ಈಗ ಸಾಧ್ಯವಾಗೋದು ಅನುಮಾನ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಅಭಿಮಾನಿಗಳಿಗೆ ಬೇಸರಮೂಡಿಸಿದೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿದೆ. ಹೀಗಾಗಿ, ಅನೇಕ ರಾಜ್ಯಗಳಲ್ಲಿ ಕೊರೊನಾ ವೈರಸ್​ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತೆಯೇ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಹೀಗಿದ್ದರೂ ವಕೀಲ್​ ಸಾಬ್​ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ಇದು ಪವನ್​ ಕಲ್ಯಾಣ್​ ಅವರ ಒಳ್ಳೆಯ ಕಂಬ್ಯಾಕ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Vakeel Saab Collection: ಪವನ್​ ಕಲ್ಯಾಣ್​ ವಕೀಲ್​ ಸಾಬ್​ ಚಿತ್ರ ಮೊದಲ ದಿನ ಮಾಡಿದ ಕಲೆಕ್ಷನ್​ ಎಷ್ಟು?

ಥಿಯೇಟರ್ ಗಾಜು ಒಡೆದು ಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್! ಕಾರಣ ಚಿಕ್ಕದೊಂದು ಟ್ರೇಲರ್

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ