AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಜಿ’ ಸೀಕ್ವೆಲ್​​ನಲ್ಲಿ ಪವನ್ ಕಲ್ಯಾಣ್‌ಗೆ ಪೂಜಾ ಹೆಗ್ಡೆ ಜೋಡಿ?

ಪವನ್ ಕಲ್ಯಾಣ್ ಅವರ 'ಓಜಿ' ಚಿತ್ರದ ಸೀಕ್ವೆಲ್ ಕುರಿತು ಹೊಸ ಸುದ್ದಿ ಹರಿದಾಡುತ್ತಿದೆ. 'ಓಜಿ 2' ರಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುವ ಸಾಧ್ಯತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳಿವೆ. 'ಓಜಿ ಯುನಿವರ್ಸ್' ಅಧಿಕೃತವಾಗಿ ಘೋಷಣೆಯಾಗಿದ್ದು, ನಿರ್ದೇಶಕ ಸುಜೀತ್ ಮತ್ತು ಪವನ್ ಕಲ್ಯಾಣ್ ಸೀಕ್ವೆಲ್ ಬಗ್ಗೆ ಮಾತನಾಡಿದ್ದಾರೆ. ಚಿತ್ರತಂಡದಿಂದ ಅಧಿಕೃತ ಪ್ರಕಟಣೆ ಇನ್ನೂ ಬಾಕಿಯಿದೆ, ಆದರೆ ಈ ಕುತೂಹಲಕಾರಿ ಬೆಳವಣಿಗೆಗಳು ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿವೆ.

‘ಓಜಿ’ ಸೀಕ್ವೆಲ್​​ನಲ್ಲಿ ಪವನ್ ಕಲ್ಯಾಣ್‌ಗೆ ಪೂಜಾ ಹೆಗ್ಡೆ ಜೋಡಿ?
ಓಜಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jun 30, 2026 | 2:49 PM

Share

ಮುಖ್ಯಾಂಶಗಳು

  • 'ಓಜಿ 2' ಸೀಕ್ವೆಲ್‌ನಲ್ಲಿ ನಟಿ ಪೂಜಾ ಹೆಗ್ಡೆ ನಟಿಸುವ ವದಂತಿಗಳ ಸತ್ಯಾಸತ್ಯತೆ
  • ಪವನ್ ಕಲ್ಯಾಣ್ ಮತ್ತು ಸುಜೀತ್ ಕಾಂಬಿನೇಷನ್‌ನ 'ಓಜಿ ಯುನಿವರ್ಸ್' ಭವಿಷ್ಯದ ಯೋಜನೆಗಳು
  • ಮೊದಲ ಭಾಗದ ನಾಯಕಿಯ ಪಾತ್ರದ ಅಂತ್ಯ ಮತ್ತು ಎರಡನೇ ಭಾಗದ ಹೊಸ ಕಥೆಯ ಟ್ವಿಸ್ಟ್

ಪವನ್ ಕಲ್ಯಾಣ್ ನಟನೆಯ ‘ಓಜಿ’ ಚಿತ್ರದ ಸೀಕ್ವೆಲ್ ಬಗ್ಗೆ ಹೊಸದೊಂದು ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಇದು ಕೇವಲ ಸಾಮಾಜಿಕ ಜಾಲತಾಣಗಳ ವದಂತಿಯಾಗಿದೆ. ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ‘ಓಜಿ’ ಮೊದಲ ಭಾಗದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿಯಾಗಿದ್ದರು. ಆದರೆ ಅವರ ಪಾತ್ರವು ಚಿತ್ರದ ಮಧ್ಯದಲ್ಲೇ ಕೊನೆಗೊಳ್ಳುತ್ತದೆ. ಹೀಗಾಗಿ ಎರಡನೇ ಭಾಗಕ್ಕೆ ಪೂಜಾ ಹೆಗ್ಡೆ ಅವರನ್ನು ಪರಿಗಣಿಸಲಾಗುತ್ತಿದೆ ಎಂಬ ಸುದ್ದಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಅಧಿಕೃತವಾಗಿ ಘೋಷಣೆಯಾದ ‘ಓಜಿ’ ಯುನಿವರ್ಸ್’

ಇತ್ತೀಚೆಗೆ ‘ಓಜಿ ಯುನಿವರ್ಸ್’ ಬಗ್ಗೆ ಹೊಸ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿತ್ತು. ನಿರ್ದೇಶಕ ಸುಜೀತ್ ಮತ್ತು ಪವನ್ ಕಲ್ಯಾಣ್ ಕುಳಿತು ‘ಓಜಿ’ ಕಥೆ ಹುಟ್ಟಿದ ಬಗ್ಗೆ ಮಾತನಾಡಿದ್ದರು. ಚಿತ್ರಕ್ಕೆ ಸೀಕ್ವೆಲ್ ಬರೋ ಬಗ್ಗೆಯೂ ಘೋಷಣೆ ಮಾಡಲಾಗಿತ್ತು

ಪವನ್ ಕಲ್ಯಾಣ್ ಹೇಳಿದ್ದೇನು?

2025ರ ವಿಶೇಷ ಪ್ರದರ್ಶನವೊಂದರಲ್ಲಿ ಪವನ್ ಕಲ್ಯಾಣ್ ಸಿನಿಮಾ ಬಗ್ಗೆ ಮಾತನಾಡಿದ್ದರು. ‘ಯಾವುದೇ ಒಳ್ಳೆಯ ಕೆಲಸಕ್ಕೆ ಅತ್ಯುತ್ತಮ ತಂಡ ಬೇಕು. ಓಜಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರದ ಯಶಸ್ಸು ಅಥವಾ ಕಲೆಕ್ಷನ್ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಸಿನಿಮಾ ಮಾತ್ರ ಅದ್ಭುತ ವೀಕ್ಷಣೆಯ ಅನುಭವ ನೀಡುತ್ತದೆ. ನಾವು ಓಜಿ ಯುನಿವರ್ಸ್ ಬಗ್ಗೆ ಎದುರು ನೋಡುತ್ತಿದ್ದೇವೆ. ಇದು ಸಂಪೂರ್ಣವಾಗಿ ಸುಜೀತ್ ಅವರ ಸೃಷ್ಟಿ’ ಎಂದು ಪವನ್ ಕಲ್ಯಾಣ್ ಚಿತ್ರತಂಡವನ್ನು ಶ್ಲಾಘಿಸಿದ್ದರು.

ಇದನ್ನೂ ಓದಿ: ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್

ಪೂಜಾ ಹೆಗ್ಡೆ ಮುಂಬರುವ ಚಿತ್ರಗಳು

ನಟಿ ಪೂಜಾ ಹೆಗ್ಡೆ ಮುಂದಿನ ದಿನಗಳಲ್ಲಿ ದುಲ್ಕರ್ ಸಲ್ಮಾನ್ ಜೊತೆ ‘DQ41’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಎಸ್‌ಎಲ್‌ವಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಚೆರುಕೂರಿ ನಿರ್ಮಿಸುತ್ತಿದ್ದಾರೆ. ಇದು ಈ ಸಂಸ್ಥೆಯ 10ನೇ ಸಿನಿಮಾವಾಗಿದೆ. ಈ ಚಿತ್ರದ ಬಗ್ಗೆಯೂ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!