‘ಅಂದುಕೊಂಡಿದ್ದಕ್ಕಿಂತ ಹೆಚ್ಚೇ ಆಗಿದೆ’; ಮಗನ ಆರೋಗ್ಯದ ಅಪ್ಡೇಟ್ ಕೊಟ್ಟ ಪವನ್ ಕಲ್ಯಾಣ್
ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೈ ಮತ್ತು ಕಾಲುಗಳಿಗೆ ತೀವ್ರ ಸುಟ್ಟಗಾಯಗಳಾಗಿವೆ. ಪವನ್ ಕಲ್ಯಾಣ್ ಅವರು ಮಾರ್ಕ್ ಶಂಕರ್‌ರ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿ, ಅವರ ಶ್ವಾಸಕೋಶಕ್ಕೆ ಹಾನಿಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದೂ ಹೇಳಿದ್ದಾರೆ.

ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಕಿರಿಯ ಮಗ ಮಾರ್ಕ್ ಶಂಕರ್ ಅವರಿಗೆ ಗಾಯಗಳಾಗಿವೆ. ಅವರು ಅಲ್ಲಿ ಶಿಕ್ಷಣ ಪಡೆಯುತ್ತಿದ್ದು, ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅವರ ಕೈ ಹಾಗೂ ಕಾಲಿಗೆ ಸುಟ್ಟ ಗಾಯಗಳಾಗಿವೆ. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ವಿಚಾರವಾಗಿ ಪವನ್ ಕಲ್ಯಾಣ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಮಾರ್ಕ್ ಶಂಕರ್ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ್ದಾರೆ.
ಮಾರ್ಕ್ ಶಂಕರ್ ಅವರು ಶಾಲೆಯಲ್ಲಿ ಬೇಸಿಗೆ ರಜದಲ್ಲಿ ಭಾಗಿ ಆಗಿದ್ದರು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಮಾರ್ಕ್ ಶಂಕರ್ ಜೊತೆ ಇತರ ವಿದ್ಯಾರ್ಥಿಗಳೂ ಇದ್ದರು ಎಂದು ಪವನ್ ಕಲ್ಯಾಣ್ ಅವರು ಹೇಳಿದ್ದಾರೆ. ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಸ್ಯೆ ಆಗಿದೆ ಎಂದು ಪವನ್ ಕಲ್ಯಾಣ್ ಅವರು ಹೇಳಿದ್ದಾರೆ.
‘ಶಂಕರ್ ಕಾಲು ಹಾಗೂ ಕೈಗೆ ಸುಟ್ಟ ಗಾಯಗಳಾಗಿವೆ. ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚೇ ಆಗಿದೆ. ಅವನ ಶ್ವಾಸಕೋಶವನ್ನು ಸರಿಪಡಿಸಲು ಬ್ರಾಂಕೋಸ್ಕೋಪಿ ಮಾಡಲಾಗಿದೆ. ಅವನ ದೇಹಕ್ಕೆ ಸಾಕಷ್ಟು ಹೊಗೆ ಸೇರಿದೆ. ನನ್ನ ಮಗನ ಮುಂದೆ ಕುಳಿತಿದ್ದ ಮತ್ತೋರ್ವನಿಗೆ ಇನ್ನೂ ಸಾಕಷ್ಟು ಗಾಯಗಳು ಆಗಿವೆ. ಮತ್ತೋರ್ವ ನಿಧನ ಹೊಂದಿದ್ದಾನೆ’ ಎಂದು ಪವನ್ ಕಲ್ಯಾಣ್ ಮಾಹಿತಿ ನೀಡಿದ್ದಾರೆ.
ಪವನ್ ಕಲ್ಯಾಣ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಬಳಿಕ ಸಿಂಗಾಪುರಕ್ಕೆ ಹಾರಿದ್ದಾರೆ. ಅವರು ಅಲ್ಲಿ ಸ್ವಲ್ಪ ಸಮಯ ಕಳೆದು ಆ ಬಳಿಕ ಮರಳಲಿದ್ದಾರೆ. ಪವನ್ ಕಲ್ಯಾಣ್ ಮಗ ಬೇಗ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ಆತಂಕಗೊಂಡಿದ್ದಾರೆ. ಅವರು ಈಗಾಗಲೇ ಸಿಂಗಾಪುರ ತೆರಳಿದ್ದು, ಅಲ್ಲಿ ಮಗನ ಆರೋಗ್ಯ ವಿಚಾರಿಸುತ್ತಿದ್ದಾರೆ.
ಇದನ್ನೂ ಓದಿ: ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ
ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸಿನಿಮಾ ಕೆಲಸಗಳು ವಿಳಂಬ ಆಗುತ್ತಿವೆ. ಮುಂದಿನ ದಿನಗಳಲ್ಲಿ ಅವರು ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ. ಆದರೆ, ಸದ್ಯಕ್ಕಂತೂ ಅವರು ರಾಜಕೀಯ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇವುಗಳ ಜೊತೆಗೆ ಕುಟುಂಬದಲ್ಲೂ ಸಮಸ್ಯೆ ಉಂಟಾಗಿದ್ದು ಅವರು ಬೇಸರ ಮಾಡಿಕೊಳ್ಳುವಂತೆ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:04 am, Wed, 9 April 25