ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೈಯಲ್ಲಿರುವ ಸಿನಿಮಾಗಳೆಷ್ಟು?

ನಟ ಪವನ್ ಕಲ್ಯಾಣ್ ಈಗ ಆಂಧ್ರ ಪ್ರದೇಶದ ಉಪಮುಖ್ಯ ಮಂತ್ರಿ. ಪವನ್ ಇನ್ನುಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗುತ್ತಿದೆ. ಆದರೆ ಅಭಿಮಾನಿಗಳು ಪೂರ್ಣವಾಗಿ ನಿರಾಶರಾಗಬೇಕಿಲ್ಲ. ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆಗೆ ರೆಡಿ ಇವೆ.

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೈಯಲ್ಲಿರುವ ಸಿನಿಮಾಗಳೆಷ್ಟು?
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೈಯಲ್ಲಿರುವ ಸಿನಿಮಾಗಳೆಷ್ಟು?
Follow us
ಮಂಜುನಾಥ ಸಿ.
|

Updated on: Jun 14, 2024 | 5:27 PM

ನಟ ಪವನ್ ಕಲ್ಯಾಣ್ (Pawan Kalyan) ಈಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಆಗಿದ್ದಾರೆ. ಕೇವಲ ಐದು ವರ್ಷದ ಮುಂಚೆ ಸ್ಪರ್ಧಿಸಿದ್ದ ಎರಡೂ ಕ್ಷೇತ್ರದಲ್ಲಿ ಸೋತು, ಪಕ್ಷದ ಒಬ್ಬನೇ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸಿಕೊಳ್ಳಲಾಗದಿದ್ದ ಪವನ್ ಕಲ್ಯಾಣ್ ಕೇವಲ ಐದು ವರ್ಷದಲ್ಲಿ ತಮ್ಮ ಪಕ್ಷದ ಸ್ಥಿತಿಯನ್ನೇ ಬದಲಾಯಿಸಿದ್ದಾರೆ. ತಾವು ಸೇರಿದಂತೆ 21 ಜನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿರುವುದು ಮಾತ್ರವೇ ಅಲ್ಲದೆ ಕೇವಲ 21 ಸೀಟುಗಳನ್ನು ಹೊಂದಿದ್ದಾಗಿಯೂ ಆಂಧ್ರ ಪ್ರದೇಶದ ಉಪಮುಖ್ಯ ಮಂತ್ರಿ ಸ್ಥಾನದಲ್ಲಿ ಕೂತಿದ್ದಾರೆ. ಪವನ್​ರ ರಾಜಕೀಯ ಬೆಳವಣಿಗೆ ಅಭಿಮಾನಿಗಳಿಗೆ ಖುಷಿಯನ್ನೇನೋ ತಂದಿದೆ. ಆದರೆ ಪವನ್ ಅನ್ನು ಸಿನಿಮಾಗಳಿಂದ ಇದು ದೂರ ಮಾಡಿಬಿಡುತ್ತದೆಯೇನೋ ಎಂಬ ಆತಂಕವೂ ಅವರಿಗೆ ಇದೆ.

ಪವನ್ ಕಲ್ಯಾಣ್, ಅತಿ ಹೆಚ್ಚು ಅಭಿಮಾನಿಗಳಿರುವ ಭಾರತದ ಸ್ಟಾರ್ ನಟರಲ್ಲಿ ಪವನ್ ಕಲ್ಯಾಣ್ ಸಹ ಒಬ್ಬರು. ಅವರ ಸಿನಿಮಾಗಳಿಗಾಗಿ ಲಕ್ಷಾಂತರ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿರುತ್ತಾರೆ. ಅವರ ಸಿನಿಮಾಗಳು ಮೊದಲ ದಿನವೇ 30-40 ಕೋಟಿ ಗಳಿಸಿರುವ ಸಾಕಷ್ಟು ಉದಾಹರಣೆಗಳಿವೆ. ಹೀಗಿರುವಾಗ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರೆ ಅವರಿಗೆ ಜನಪ್ರಿಯತೆ ತಂದುಕೊಟ್ಟ ಸಿನಿಮಾಪ್ರೇಮಿಗಳಿಗೆ ಬೇಸರ ಆಗುವುದಂತೂ ಖಚಿತ. ಆದರೆ ಅಭಿಮಾನಿಗಳು ಸಂಪೂರ್ಣವಾಗಿ ನಿರಾಶರಾಗಬೇಕಿಲ್ಲ. ಪವನ್ ನಟಿಸಿರುವ ಬರೋಬ್ಬರಿ ಮೂರು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ.

2018 ರಲ್ಲಿ ‘ಅಜ್ಞಾತವಾಸಿ’ ಸಿನಿಮಾದಲ್ಲಿ ನಟಿಸಿದ್ದ ಪವನ್ ಕಲ್ಯಾಣ್ ಅದಾದ ಬಳಿಕ ಮೂರು ವರ್ಷಗಳ ಕಾಲ ಸಿನಿಮಾರಂಗದಿಂದ ದೂರ ಉಳಿದಿದ್ದರು. 2021 ರಲ್ಲಿ ಬಿಡುಗಡೆ ಆದ ‘ವಕೀಲ್ ಸಾಬ್’ ಸಿನಿಮಾ ಮೂಲಕ ಭರ್ಜರಿ ಕಮ್ ಬ್ಯಾಕ್ ಮಾಡಿದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು, ಜಗನ್ ಸರ್ಕಾರ ಒಡ್ಡಿದ ಅಡೆ-ತಡೆಗಳ ನಡುವೆಯೂ ಸಿನಿಮಾ ದೊಡ್ಡ ಹಿಟ್ ಆಯ್ತು. ಬಳಿಕ ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಸಿನಿಮಾವನ್ನು ‘ಭೀಮ್ಲ ನಾಯಕ್’ ಹೆಸರಲ್ಲಿ ರೀಮೇಕ್ ಮಾಡಿದರು. ಅದೂ ಸಹ ಹಿಟ್ ಆಯ್ತು. ಬಳಿಕ ತಮ್ಮ ಸಂಬಂಧಿ ಸಾಯಿ ಧರಮ್ ತೇಜ್ ಜೊತೆಗೆ ‘ಬ್ರೋ’ ಸಿನಿಮಾದಲ್ಲಿ ನಟಿಸಿದರು. ಅದೂ ಸಾಧಾರಣ ಯಶಸ್ಸು ಕಂಡಿತು.

ಇದನ್ನೂ ಓದಿ:ಪ್ರಮಾಣ ವಚನ ಸ್ವೀಕರಿಸಿ ಅಣ್ಣನ ಕಾಲಿಗೆರಗಿದ ಪವನ್ ಕಲ್ಯಾಣ್

‘ಬ್ರೋ’ ಸಿನಿಮಾದ ಬಳಿಕ ಪವನ್ ನಟನೆಯ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ಆದರೆ ಚುನಾವಣೆ ಪ್ರಚಾರಕ್ಕೂ ಹೋಗುವ ಮುನ್ನ ಪವನ್ ಕಲ್ಯಾಣ್ ಬರೋಬ್ಬರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲಿ ಎರಡು ಸಿನಿಮಾಗಳು ಈಗಾಗಲೇ ಬಿಡುಗಡೆಗೆ ರೆಡಿಯಾಗಿವೆ. ಪ್ರಚಾರಕ್ಕೆ ಹೋಗುವ ಮುನ್ನ ‘ಉಸ್ತಾದ್ ಭಗತ್ ಸಿಂಗ್’, ‘ಹರಿಹರ ವೀರ ಮಲ್ಲು’ ಹಾಗೂ ‘ಓಜಿ’ ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ.

ಇವುಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ ಎನ್ನಲಾಗುತ್ತಿದ್ದು, ಈ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆಯಂತೆ. ಇನ್ನು ಐತಿಹಾಸಿಕ ಸಿನಿಮಾ ಆಗಿರುವ ‘ಹರಿಹರ ವೀರ ಮಲ್ಲು’ ಸಿನಿಮಾದ ಹಲವು ಭಾಗಗಳ ಚಿತ್ರೀಕರಣ ಮುಗಿದಿದ್ದು, ಕೆಲವು ಹಾಡು, ಹಾಗೂ ಆಕ್ಷನ್ ದೃಶ್ಯಗಳ ಚಿತ್ರೀಕರಣವಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ‘ಉಸ್ತಾದ್ ಭಗತ್ ಸಿಂಗ್’ ಹಾಗೂ ‘ಓಜಿ’ ಸಿನಿಮಾಗಳ ಟ್ರೈಲರ್​, ಟೀಸರ್​ಗಳು ಸಹ ಈಗಾಗಲೇ ಬಿಡುಗಡೆ ಆಗಿವೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಕನ್ನಡತಿ ಶ್ರೀಲೀಲಾ. ಈ ಸಿನಿಮಾಗಳು ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ