ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Ustaad Bhagat Singh movie: ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟಾಲಿವುಡ್ನ ಸ್ಟಾರ್ ನಟರೂ ಸಹ ಹೌದು. ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.
ಪವನ್ ಕಲ್ಯಾಣ್ ಡಿಸಿಎಂ ಆದ ಬಳಿಕ ಅವರ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿತು. ಅದರ ಬಳಿಕ ‘ಓಜಿ’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತು. ಇದೀಗ ಪವನ್ ಅವರ ಮತ್ತೊಂದು ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ತೆರೆಗೆ ಬರುತ್ತಿದೆ. ಈ ಸಿನಿಮಾ ಪವನ್ ಅಭಿಮಾನಿಗಳಿಗಾಗಿಯೇ ಮಾಡಲಾದ ಸಿನಿಮಾ ಆಗಿದೆ ಎಂಬುದು ನಿರ್ದೇಶಕ ಹರೀಶ್ ಶಂಕರ್ ಮಾತು.
ಪವನ್ ಕಲ್ಯಾಣ್ ಜೊತೆಗೆ ನಾಯಕಿಯಾಗಿ ಕನ್ನಡತಿ ಶ್ರೀಲೀಲಾ ಸಹ ನಟಿಸಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 23 ರಂದು ಬಿಡುಗಡೆ ಆಗಲಿದೆ. ಕನ್ನಡದ ‘ಟಾಕ್ಸಿಕ್’, ಹಿಂದಿಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆದ ನಾಲ್ಕು ದಿನಗಳ ಬಳಿಕ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:ಅಪರೂಪದ ಗೌರವಕ್ಕೆ ಭಾಜನರಾದ ಪವನ್ ಕಲ್ಯಾಣ್
ಪವನ್ ಕಲ್ಯಾಣ್ ನಟನೆಯ ‘ಗಬ್ಬರ್ ಸಿಂಗ್’ ಸಿನಿಮಾ ಬಹಳ ಜನಪ್ರಿಯವಾಗಿದ್ದು, ಅದೇ ಸಿನಿಮಾದ ಪಾತ್ರದಿಂದ ಸ್ಪೂರ್ತಿ ಪಡೆದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಹರೀಶ್ ಶಂಕರ್ ನಿರ್ದೇಶಿಸಿದ್ದಾರೆ. ಪವನ್ ಕಲ್ಯಾಣ್ ಡಿಸಿಎಂ ಆಗುವ ಮುಂಚೆಯೇ ಸಿನಿಮಾದ ಚಿತ್ರೀಕರಣ ಆರಂಭಿಸಲಾಗಿತ್ತು. ಆದರೆ ಪವನ್ ಕಲ್ಯಾಣ್ ರಾಜಕೀಯದಲ್ಲಿ ಸಕ್ರಿಯರಾದ ಕಾರಣ ಸಿನಿಮಾವನ್ನು ನಿಲ್ಲಿಸಲಾಗಿತ್ತು. ಇದೀಗ ಬ್ಯುಸಿ ರಾಜಕೀಯ, ಆಡಳಿತದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾದ ಚಿತ್ರೀಕರಣವನ್ನು ಪವನ್ ಕಲ್ಯಾಣ್ ಮುಗಿಸಿದ್ದು, ವಿದೇಶಕ್ಕೆಲ್ಲ ಹೋಗಿ ಹಾಡುಗಳ ಚಿತ್ರೀಕರಣ ಮಾಡಿಕೊಂಡು ಬಂದಿದ್ದಾರೆ.
Get ready to cheer, whistle, and stomp your feet to celebrate our USTAAD 🕺🤟🏻🙇🏻💥💥
This summer, the box office will be on FIRE with the duo of POWER STAR & CULT CAPTAIN 🔥#UstaadBhagatSingh GRAND RELEASE WORLDWIDE ON 26th MARCH, 2026.#UBSOnMarch26th
POWER STAR @PawanKalyan… pic.twitter.com/XjcuIv64wh
— Ustaad Bhagat Singh (@UBSTheFilm) February 4, 2026
‘ಹರಿ ಹರ ವೀರ ಮಲ್ಲು’ ಸಿನಿಮಾನಲ್ಲಿ ವೀರ ಯೋಧನಾಗಿ, ‘ಓಜಿ’ ಸಿನಿಮಾನಲ್ಲಿ ಗಂಭೀರ ಗ್ಯಾಂಗ್ಸ್ಟರ್ ಆಗಿ ನಟಿಸಿದ್ದ ಪವನ್ ಕಲ್ಯಾಣ್, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಠಪೋರಿ ಪೊಲೀಸ್ ಪಾತ್ರದಲ್ಲಿ ಮಿಂಚಲಿದ್ದಾರೆ. ಆದರೆ ಪವನ್ ಪ್ರಸ್ತುತ ಜವಾಬ್ದಾರಿಯುತ ಡಿಸಿಎಂ ಸ್ಥಾನದಲ್ಲಿರುವ ಕಾರಣ ಮೊದಲಿದ್ದ ಚಿತ್ರೀಕರಣಕ್ಕೆ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




