ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’; ಒಂದೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್

ರಾಮ್ ಚರಣ್ ನಟನೆಯ 'ಪೆದ್ದಿ' ಚಿತ್ರಮಂದಿರಗಳಲ್ಲಿ ಭಾರಿ ಸದ್ದು ಮಾಡಿದೆ. ಮೊದಲ ದಿನವೇ ಜಗತ್ತಿನಾದ್ಯಂತ 100 ಕೋಟಿ ರೂ. ಗಳಿಸಿ ಬಾಕ್ಸ್ ಆಫೀಸ್ ದಾಖಲೆ ಬರೆದಿದೆ. ಈ ಯಶಸ್ಸು ರಾಮ್ ಚರಣ್ ಅವರ ಜನಪ್ರಿಯತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಅವರ ಹಿಂದಿನ ಚಿತ್ರಗಳ ಹಿನ್ನಡೆಯ ನಂತರ ಇದು ಒಂದು ದೊಡ್ಡ ಗೆಲುವು.

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’; ಒಂದೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್
ಪೆದ್ದಿ

Updated on: Jun 05, 2026 | 7:05 AM

ಟಾಲಿವುಡ್ ನಟ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ (Peddi Movie) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಜಗತ್ತಿನಾದ್ಯಂತ ಭರ್ಜರಿಯಾಗಿ ತೆರೆಕಂಡಿರುವ ಈ ಚಿತ್ರ, ಮೊದಲ ದಿನವೇ ಗಳಿಕೆಯಲ್ಲಿ ನೂರರ ಗಡಿ ದಾಟುವ ಮೂಲಕ ಬಾಕ್ಸ್ ಆಫೀಸ್ ಸುಲ್ತಾನ್ ತಾನೇ ಎಂಬುದನ್ನು ಸಾಬೀತುಪಡಿಸಿದೆ. ರಾಮ್ ಚರಣ್ ಮಾಸ್ ಕ್ರೇಜ್‌ಗೆ ಗಳಿಕೆ ಜೊರಾಗಿಯೇ ಆಗಿದೆ.

ಚಿತ್ರಮಂದಿರಗಳಲ್ಲಿ ‘ಪೆದ್ದಿ’ ಮೊದಲ ದಿನ ಅದ್ದೂರಿಯಾಗಿ ತೆರೆಕಂಡಿತು. ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲ ಕಡೆಗಳಲ್ಲಿ ಮುಂಜಾನೆಯ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಪರಿಣಾಮ ಸಿನಿಮಾ ಒಂದೇ ದಿನಕ್ಕೆ ವಿಶ್ವಾದ್ಯಂತ ಬರೋಬ್ಬರಿ 112.49 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ರಾಮ್ ಚರಣ್ ಅವರ ಅದ್ಭುತ ನಟನೆ ಮತ್ತು ಸಿನಿಮಾದ ಮಾಸ್ ಎಲಿಮೆಂಟ್‌ಗಳಿಗೆ ಫಿದಾ ಆಗಿರುವ ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಗಿಬೀಳುತ್ತಿದ್ದಾರೆ.

ಮೊದಲ ದಿನ ಸಿನಿಮಾಗೆ ಸಿಕ್ಕಿದ್ದು ಬರೋಬ್ಬರಿ 12,412 ಶೋಗಳು. ಭಾರರದಲ್ಲಿ ಈ ಸಿನಿಮಾ ಮೊದಲ ದಿನ ನೆಟ್ ಕಲೆಕ್ಷನ್ 69.50 ಕೋಟಿ ರೂಪಾಯಿ. ಭಾರತದಲ್ಲಿ ಇದುವರೆಗೆ ಒಟ್ಟು 82.49 ಕೋಟಿ ಗ್ರಾಸ್ ಕಲೆಕ್ಷನ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾ 30.00 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ.

ರಾಮ್ ಚರಣ್ ಅವರ ವೃತ್ತಿಜೀವನದಲ್ಲೇ ಈ ಸಿನಿಮಾ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವುದು ಖಚಿತ ಎನ್ನಲಾಗುತ್ತಿದೆ. ಕೇವಲ ಮೊದಲ ದಿನವೇ ಈ ರೇಂಜ್‌ಗೆ ಅಬ್ಬರಿಸಿರುವ ‘ಪೆದ್ದಿ’, ವೀಕೆಂಡ್‌ನಲ್ಲಿ ಇನ್ನೂ ದೊಡ್ಡ ಮಟ್ಟದ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದೆ. ಸದ್ಯಕ್ಕಂತೂ ಚರಣ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ‘ಪೆದ್ದಿ’ ಸಕ್ಸಸ್ ಅನ್ನು ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ಪೆದ್ದಿ’ ಟ್ವಿಟರ್ ವಿಮರ್ಶೆ: ರಾಮ್ ಚರಣ್ ನಟನೆಗೆ ಪ್ರೇಕ್ಷಕರು ಫಿದಾ; ಶಿವಣ್ಣನಿಗೂ ಜೈಕಾರ

‘ಆರ್​​ಆರ್​​ಆರ್​ ಬಳಿಕ ರಾಮ್ ಚರಣ್ ಅವರ ‘ಆಚಾರ್ಯ’ ಹಾಗೂ ‘ಗೇಮ್ ಚೇಂಜರ್’ ಸಿನಿಮಾಗಳು ಬಂದವು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಮಕಾಡೆ ಮಲಗಿದವು. ಹೀಗಾಗಿ, ಅವರಿಗೆ ಒಂದು ದೊಡ್ಡ ಗೆಲುವಿನ ಅಗತ್ಯ ಇತ್ತು. ಕೆಲವರು ‘ಪೆದ್ದಿ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us