AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Peddi Trailer: ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ

Peddi Film Trailer: ‘ಪೆದ್ದಿ’ ಸಿನಿಮಾಗಾಗಿ ರಾಮ್ ಚರಣ್ ಅವರು ಎಷ್ಟು ಶ್ರಮ ಹಾಕಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಎದ್ದು ಕಾಣುತ್ತಿದೆ. ಬೃಹತ್ ಬಜೆಟ್​ನಲ್ಲಿ ಸಿದ್ಧವಾಗಿರುವ ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ಟ್ರೇಲರ್ ಮೂಡಿಬಂದಿದೆ. ಶಿವರಾಜ್​ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

Peddi Trailer: ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ
Ram Charan
ಮದನ್​ ಕುಮಾರ್​
|

Updated on: May 18, 2026 | 5:07 PM

Share

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ (Peddi) ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿರುವ ಈ ಸಿನಿಮಾದ ಟ್ರೇಲರ್ ಇಂದು (ಮೇ 18) ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ (Peddi Trailer) ನೋಡಿದ ಬಳಿಕ ರಾಮ್ ಚರಣ್ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ರಾಮ್ ಚರಣ್ (Ram Charan) ಅವರ ವಿವಿಧ ಗೆಟಪ್ ಗಮನ ಸೆಳೆದಿದೆ. ಮೇಕಿಂಗ್ ಗುಣಮಟ್ಟ ನೋಡಿ ಪ್ರೇಕ್ಷಕರ ಭೇಷ್ ಎಂದಿದ್ದಾರೆ.

1. ‘ಪೆದ್ದಿ’ ಸಿನಿಮಾದಲ್ಲಿ ನಟ ರಾಮ್ ಚರಣ್ ಪಾತ್ರಕ್ಕೆ ಹಲವು ಶೇಡ್ಸ್ ಇವೆ. 2. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಟ್ರೇಲರ್ ಬಿಡುಗಡೆ ಆಗಿದೆ. 3. ಜೂನ್ 4ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ವಿಜಯನಗರಂ ಹಿನ್ನೆಲೆಯಲ್ಲಿ ಸಾಗುವ ಈ ಚಿತ್ರದಲ್ಲಿ ರಾಮ್ ಚರಣ್ ಅವರು ಬೆಲ್ಲದ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಮಿಕನಾಗಿ ಕಾಣಿಸಿಕೊಂಡಿದ್ದಾರೆ. ಕ್ರಿಕೆಟ್ ಆಟದ ಬಗ್ಗೆ ಅಪಾರ ಒಲವು ಹೊಂದಿರುವ ಹೀರೋ ಅನಿವಾರ್ಯ ಪರಿಸ್ಥಿತಿಗಳಿಂದಾಗಿ ತನಗೆ ಪರಿಚಯವೇ ಇಲ್ಲದ ಕುಸ್ತಿ ಅಖಾಡಕ್ಕೆ ಇಳಿಯಬೇಕಾಗಿ ಬರುತ್ತದೆ. ಕೊನೆಗೆ ಆತ ಹೇಗೆ ‘ಕ್ರಾಸ್ ಓವರ್ ಅಥ್ಲೀಟ್’ ಆಗಿ ಹೊರಹೊಮ್ಮುತ್ತಾನೆ ಎಂಬುದು ಚಿತ್ರದ ಮುಖ್ಯ ಕಥಾಹಂದರ.

‘ಆರ್ಆರ್ಆರ್’ ಚಿತ್ರದಲ್ಲಿ ವಿಭಿನ್ನ ಶೇಡ್‌ಗಳ ಪಾತ್ರದ ಮೂಲಕ ಅಬ್ಬರಿಸಿದ್ದ ರಾಮ್ ಚರಣ್ ಅವರು ‘ಪೆದ್ದಿ’ ಚಿತ್ರಕ್ಕಾಗಿ ತಮ್ಮ ದೇಹವನ್ನು ದಂಡಿಸಿ ಸಖತ್ ಟ್ರಾನ್ಸ್​ಫಾರ್ಮೇಷನ್ ಮಾಡಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ಅವರ ಕಟ್ಟುಮಸ್ತಾದ ಬಾಡಿ ನೋಡಿ ಫ್ಯಾನ್ಸ್ ವಾವ್ ಎಂದಿದ್ದಾರೆ. ನಟನೆ, ಮಾಸ್ ಮ್ಯಾನರಿಸಂ, ಡೈಲಾಗ್ ಡೆಲಿವರಿ ಕೂಡ ಅಭಿಮಾನಿಗಳಿಗೆ ಇಷ್ಟ ಆಗಿದೆ.

ಪೆದ್ದಿ ಸಿನಿಮಾ ಟ್ರೇಲರ್:

ಈ ಸಿನಿಮಾಗೆ ಬುಚ್ಚಿ ಬಾಬು ಸನಾ ಅವರು ನಿರ್ದೇಶನ ಮಾಡಿದ್ದಾರೆ. ಕೇವಲ ನಾಯಕನ ಮಾಸ್ ಎಲಿಮೆಂಟ್‌ಗಳನ್ನು ಮಾತ್ರವಲ್ಲದೇ, ಕಥೆಯಲ್ಲಿರುವ ಭಾವನಾತ್ಮಕ ಆಳವನ್ನೂ ಕೂಡ ಅವರು ಈ ಟ್ರೇಲರ್​​ನಲ್ಲಿ ತೋರಿಸಿದ್ದಾರೆ. ಸಿನಿಮಾದ ಅದ್ದೂರಿ ಮೇಕಿಂಗ್ ಹೆಚ್ಚು ಹೈಲೈಟ್ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅವರ ಪಾತ್ರ ಕೂಡ ಟ್ರೇಲರ್​ನಲ್ಲಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ

ಈ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಶಿವರಾಜಕುಮಾರ್ ಜೊತೆ ದಿವ್ಯೇಂದು ಶರ್ಮಾ, ಜಗಪತಿ ಬಾಬು, ಬೋಮನ್ ಇರಾನಿ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ‘ವೃದ್ಧಿ ಸಿನಿಮಾಸ್’ ಬ್ಯಾನರ್ ಮೂಲಕ ವೆಂಕಟ ಸತೀಶ್ ಕಿಲಾರು ಅವರು ಈ ಬಿಗ್ ಬಜೆಟ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜೂನ್ 4ರಂದು ತೆಲುಗಿನ ಜೊತೆಗೆ ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವಾದ್ಯಂತ ಈ ಸಿನಿಮಾ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More