AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್‌ಫ್ಲಿಕ್ಸ್‌ನಲ್ಲಿ ಅಬ್ಬರಿಸಲು ಸಜ್ಜಾದ ‘ಪೆದ್ದಿ’; ಒಟಿಟಿ ರಿಲೀಸ್ ವಿವರ ಇಲ್ಲಿದೆ

ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಮತ್ತು 338.98 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಕಂಡಿರುವ ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಅಭಿನಯದ 'ಪೆದ್ದಿ' ಸಿನಿಮಾ, ಇದೀಗ ಒಟಿಟಿ ಅಂಗಳಕ್ಕೆ ಲಗ್ಗೆ ಇಡುತ್ತಿದೆ. ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಈ ಬಿಗ್ ಬಜೆಟ್ ಚಿತ್ರವು, ಜುಲೈ 9 ರಂದು ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ಅಬ್ಬರಿಸಲು ಸಜ್ಜಾದ 'ಪೆದ್ದಿ'; ಒಟಿಟಿ ರಿಲೀಸ್ ವಿವರ ಇಲ್ಲಿದೆ
ಪೆದ್ದಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 04, 2026 | 12:49 PM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್ ಸುನಾಮಿ ಬಳಿಕ ಒಟಿಟಿ ಅಂಗಳದಲ್ಲಿ 'ಪೆದ್ದಿ' ದರ್ಬಾರ್
  • ಜುಲೈ 9ಕ್ಕೆ ನೆಟ್‌ಫ್ಲಿಕ್ಸ್‌ಗೆ ಎಂಟ್ರಿ ಕೊಡಲಿದೆ ಭರ್ಜರಿ ಆ್ಯಕ್ಷನ್ ಸಿನಿಮಾ
  • ಸ್ಟಾರ್ ನಟರ ದಂಡು ಮತ್ತು ಎ.ಆರ್. ರೆಹಮಾನ್ ಸಂಗೀತದ ರಸದೌತಣ

ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಬಹುನಿರೀಕ್ಷಿತ ಆ್ಯಕ್ಷನ್ ಹಾಗೂ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ (Peddi Movie) ಬಾಕ್ಸ್  ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳ ಮನಗೆದ್ದಿರುವ ಈ ಚಿತ್ರವು ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ದೊಡ್ಡ ಮಟ್ಟದ ಗಳಿಕೆ ಮಾಡಿದೆ. ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ನಂತರ, ಈ ಸಿನಿಮಾ ಈಗ ಪ್ರಮುಖ ಒಟಿಟಿ ಪ್ಲಾಟ್‌ಫಾರ್ಮ್ ಆದ ನೆಟ್‌ಫ್ಲಿಕ್ಸ್‌ಗೆ ಬರಲು ಸಜ್ಜಾಗಿದೆ.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಈ ಸಿನಿಮಾ ಹೊಸ ದಾಖಲೆಗಳನ್ನೇ ಬರೆದಿದೆ. ವಿಶ್ವದಾದ್ಯಂತ ಒಟ್ಟು 120,447 ಶೋಗಳ ಪ್ರದರ್ಶನ ಕಂಡಿರುವ ‘ಪೆದ್ದಿ’, ಒಟ್ಟಾರೆ 338.98 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರಲ್ಲಿ ಭಾರತದ ಗಳಿಕೆ ₹286.08 ಕೋಟಿ ಆಗಿದ್ದರೆ, ವಿದೇಶಿ ಮಾರುಕಟ್ಟೆಯಿಂದ 52.90 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಹರಿದುಬಂದಿದೆ. ಇನ್ನು ಚಿತ್ರದ ಒಟ್ಟು ನೆಟ್ ಕಲೆಕ್ಷನ್ 242.03 ಕೋಟಿ ರೂಪಾಯಿ ತಲುಪಿದೆ.

ಮನೆಯಲ್ಲೇ ಕುಳಿತು ಸಿನಿಮಾ ನೋಡಲು ಕಾಯುತ್ತಿದ್ದ ಒಟಿಟಿ ಪ್ರೇಕ್ಷಕರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಈ ಸಿನಿಮಾ ಜುಲೈ 9ರಂದು ನೆಟ್‌ಫ್ಲಿಕ್ಸ್‌ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ಪ್ರಸಾರವಾಗಲಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಲು ಸಿದ್ಧವಾಗಿದೆ. ಹಿಂದಿ ವರ್ಷನ್ ಒಂದು ವಾರ ವಿಳಂಬವಾಗಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪೆದ್ದಿ ಸಿನಿಮಾ ಬಗೆಗಿನ ಟ್ರೋಲ್‌ ಬಗ್ಗೆ ಕೊನೆಗೂ ಮೌನ ಮುರಿದ ರಾಮ್ ಚರಣ್

ಈ ಬಿಗ್ ಬಜೆಟ್ ಸಿನಿಮಾವನ್ನು ಪ್ರತಿಭಾವಂತ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ನಿರ್ದೇಶಿಸಿದ್ದಾರೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಬಾಲಿವುಡ್ ನಟಿ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜೊತೆಗೆ ಕನ್ನಡದ ಹೆಮ್ಮೆಯ ನಟ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ ಹಾಗೂ ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಅವರ ಸಂಗೀತ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್