
ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಬಹುನಿರೀಕ್ಷಿತ ಆ್ಯಕ್ಷನ್ ಹಾಗೂ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ (Peddi Movie) ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳ ಮನಗೆದ್ದಿರುವ ಈ ಚಿತ್ರವು ಥಿಯೇಟರ್ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ದೊಡ್ಡ ಮಟ್ಟದ ಗಳಿಕೆ ಮಾಡಿದೆ. ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ನಂತರ, ಈ ಸಿನಿಮಾ ಈಗ ಪ್ರಮುಖ ಒಟಿಟಿ ಪ್ಲಾಟ್ಫಾರ್ಮ್ ಆದ ನೆಟ್ಫ್ಲಿಕ್ಸ್ಗೆ ಬರಲು ಸಜ್ಜಾಗಿದೆ.
ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಈ ಸಿನಿಮಾ ಹೊಸ ದಾಖಲೆಗಳನ್ನೇ ಬರೆದಿದೆ. ವಿಶ್ವದಾದ್ಯಂತ ಒಟ್ಟು 120,447 ಶೋಗಳ ಪ್ರದರ್ಶನ ಕಂಡಿರುವ ‘ಪೆದ್ದಿ’, ಒಟ್ಟಾರೆ 338.98 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರಲ್ಲಿ ಭಾರತದ ಗಳಿಕೆ ₹286.08 ಕೋಟಿ ಆಗಿದ್ದರೆ, ವಿದೇಶಿ ಮಾರುಕಟ್ಟೆಯಿಂದ 52.90 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಹರಿದುಬಂದಿದೆ. ಇನ್ನು ಚಿತ್ರದ ಒಟ್ಟು ನೆಟ್ ಕಲೆಕ್ಷನ್ 242.03 ಕೋಟಿ ರೂಪಾಯಿ ತಲುಪಿದೆ.
ಮನೆಯಲ್ಲೇ ಕುಳಿತು ಸಿನಿಮಾ ನೋಡಲು ಕಾಯುತ್ತಿದ್ದ ಒಟಿಟಿ ಪ್ರೇಕ್ಷಕರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಈ ಸಿನಿಮಾ ಜುಲೈ 9ರಂದು ನೆಟ್ಫ್ಲಿಕ್ಸ್ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ಪ್ರಸಾರವಾಗಲಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಲು ಸಿದ್ಧವಾಗಿದೆ. ಹಿಂದಿ ವರ್ಷನ್ ಒಂದು ವಾರ ವಿಳಂಬವಾಗಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಪೆದ್ದಿ ಸಿನಿಮಾ ಬಗೆಗಿನ ಟ್ರೋಲ್ ಬಗ್ಗೆ ಕೊನೆಗೂ ಮೌನ ಮುರಿದ ರಾಮ್ ಚರಣ್
ಈ ಬಿಗ್ ಬಜೆಟ್ ಸಿನಿಮಾವನ್ನು ಪ್ರತಿಭಾವಂತ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ನಿರ್ದೇಶಿಸಿದ್ದಾರೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಬಾಲಿವುಡ್ ನಟಿ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜೊತೆಗೆ ಕನ್ನಡದ ಹೆಮ್ಮೆಯ ನಟ ಕರುನಾಡ ಚಕ್ರವರ್ತಿ ಶಿವ ರಾಜ್ಕುಮಾರ್ ಹಾಗೂ ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಅವರ ಸಂಗೀತ ಈ ಚಿತ್ರಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.