ಲಂಡನ್ ಬೀದಿಯಲ್ಲಿ ‘ಪುಷ್ಪ 2’ ಹಾಡಿಗೆ ಹೆಜ್ಜೆ ಹಾಕಿದ ಅಲ್ಲು ಅರ್ಜುನ್ ಫ್ಯಾನ್ಸ್
ಭಾರತದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲಿ ಸಹ ‘ಪುಷ್ಪ 2’ ಸಿನಿಮಾ ಬಗ್ಗೆ ಹೈಪ್ ಸೃಷ್ಟಿ ಆಗಿದೆ. ಅದಕ್ಕೆ ಇಲ್ಲೊಂದು ಉತ್ತಮ ಉದಾಹರಣೆ ಇದೆ. ಲಂಡನ್ನ ರಸ್ತೆಗಳಲ್ಲಿ ಜನರು ಈ ಸಿನಿಮಾದ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇದನ್ನು ಕಂಡು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಖುಷಿ ಆಗಿದೆ.
ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿದೆ. ಡಿಸೆಂಬರ್ 5ರಂದು ಅದ್ದೂರಿಯಾಗಿ ಈ ಚಿತ್ರ ತೆರೆ ಕಾಣಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ಶ್ರೀಲೀಲಾ ಅವರು ಐಟಂ ಡ್ಯಾನ್ಸ್ ಮಾಡಿದ್ದಾರೆ. ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಬಿಡುಗಡೆಗೂ ಮುನ್ನವೇ ‘ಪುಷ್ಪ 2’ ಸಿನಿಮಾದ ಮೇನಿಯಾ ಶುರುವಾಗಿದೆ. ಎಲ್ಲ ಕಡೆಗಳಲ್ಲಿ ಅಬ್ಬರದ ಪ್ರಚಾರ ಮಾಡಲಾಗುತ್ತಿದೆ. ಭಾರತ ಮಾತ್ರವಲ್ಲದೇ ವಿದೇಶದಲ್ಲಿ ಕೂಡ ಈ ಸಿನಿಮಾದ ಕ್ರೇಜ್ ಹೆಚ್ಚಾಗಿದೆ.
ಲಂಡನ್ನಲ್ಲಿ ಒಂದಷ್ಟು ಜನರು ‘ಪುಷ್ಪ 2’ ಸಿನಿಮಾದ ಹಾಡುಗಳಿಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಡ್ಯಾನ್ಸ್ ಶಾಲೆಯ ವಿದ್ಯಾರ್ಥಿಗಳು ಲಂಡನ್ ಬೀದಿಯಲ್ಲಿ ‘ಪುಷ್ಪ 2’ ಚಿತ್ರದ ಟೈಟಲ್ ಸಾಂಗ್ಗೆ ಹೆಜ್ಜೆ ಹಾಕಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿವೆ. ಸಿನಿಮಾ ಮೇಲೆ ಭಾರಿ ನಿರೀಕ್ಷೆ ಮೂಡಲು ಹಾಡುಗಳು ಕೂಡ ಕಾರಣ ಆಗಿವೆ.
#Pushpa2 UK 🇬🇧
FLASH-MOB full video from STREETS OF LONDON🔥🔥🔥🔥 pic.twitter.com/wSY2vefzww
— tolly_wood_UK_US_Europe (@tolly_UK_US_EU) December 1, 2024
‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರ ಮ್ಯಾನರಿಸಂ ಡಿಫರೆಂಟ್ ಆಗಿದೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡಿದ್ದು, ಹಗಲು-ರಾತ್ರಿ ಕಷ್ಟಪಟ್ಟಿದ್ದಾರೆ. ಈ ಸಿನಿಮಾಗಾಗಿ ಸುಕುಮಾರ್ ಅವರು ದೊಡ್ಡ ಸಂಭಾವನೆ ಪಡೆದಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆಯು ನಿರ್ಮಾಣ ಮಾಡಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ಹೊಸ ದಾಖಲೆಗಳನ್ನು ಬರೆಯಲಿದೆ. ಈಗಾಗಲೇ ಅದರ ಮುನ್ಸೂಚನೆ ಸಿಕ್ಕಿದೆ. ಮುಂಗಡ ಟಿಕೆಟ್ ಬುಕಿಂಗ್ಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ.
ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಈ ಅವತಾರ ನೀವು ನೋಡಿಯೇ ಇಲ್ಲ; ಎಲ್ಲರಿಗೂ ಅಚ್ಚರಿ
ಅಲ್ಲು ಅರ್ಜುನ್ ಅವರು ಅತ್ಯುತ್ತಮ ಡ್ಯಾನ್ಸರ್ ಎಂಬುದರಲ್ಲಿ ಎರಡು ಮಾತಿಲ್ಲ. ಅವರಿಗೆ ಪೈಪೋಟಿ ನೀಡಲು ರಶ್ಮಿಕಾ ಮಂದಣ್ಣ ಕೂಡ ಹಿಂದೆ ಬಿದ್ದಿಲ್ಲ. ಇತ್ತೀಚೆಗೆ ಈ ಸಿನಿಮಾದ ‘ಪೀಲಿಂಗ್ಸ್…’ ಹಾಡು ಬಿಡುಗಡೆ ಆಯಿತು. ಈ ಸಾಂಗ್ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅವರ ಕೆಮಿಸ್ಟ್ರಿ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ‘ಪುಷ್ಪ 2’ ಚಿತ್ರ ತೆರೆಕಂಡ ನಂತರ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಇನ್ನಷ್ಟು ಜಾಸ್ತಿ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.