‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ; ಸಿನಿಮಾದಲ್ಲಿ ಏನಿದೆ?

|

Updated on: Dec 02, 2024 | 12:27 PM

ನವೆಂಬರ್ 15ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಮೋದಿ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಈ ಸಿನಿಮಾ ವೀಕ್ಷಿಸಲಿದ್ದಾರೆ. ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಚಿತ್ರವನ್ನು ವೀಕ್ಷಿಸಲಿದ್ದಾರೆ.  

‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ; ಸಿನಿಮಾದಲ್ಲಿ ಏನಿದೆ?
ವಿಕ್ರಾಂತ್ ಮಾಸಿ
Follow us on

ಇತ್ತೀಚೆಗೆ ರಿಲೀಸ್ ಆದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಈ ಸಿನಿಮಾದಲ್ಲಿ ವಿಕ್ರಾಂತ್ ಮಾಸ್ಸಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾನ ಬಾಕ್ಸ್ ಆಫೀಸ್​ನಲ್ಲೂ ಉತ್ತಮ ಗಳಿಕೆ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾ ವೀಕ್ಷಿಸಲಿದ್ದಾರೆ. ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಇಂದು (ಡಿಸೆಂಬರ್ 2) ಸಂಜೆ ಸಿನಿಮಾ ವೀಕ್ಷಿಸಲಿದ್ದಾರೆ.

2002ರ ಫೆಬ್ರವರಿ 27ರಂದು ಸೆನ್ಸೇಷನಲ್ ಘಟನೆ ನಡೆದಿತ್ತು. ಕರಸೇವಕರು ಪ್ರಯಾಣ ಮಾಡುತ್ತಿದ್ದ ಸಾಬರಮತಿ ಎಕ್ಸ್​​ಪ್ರೆಸ್​ ರೈಲಿನ ಎಸ್​-6 ಕೋಚ್​ಗೆ ಗುಜರಾತ್​ನ ಗೋದ್ರಾ ಬಳಿ ಬೆಂಕಿ ಹಚ್ಚಲಾಗಿತ್ತು. ಇದು ಗುಜರಾತ್​ನಲ್ಲಿ ಕೋಮುಗಲಭೆ ಕಾರಣ ಆಯಿತು. ಈ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ಎಕ್ಸ್​ಪ್ರೆಸ್’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರವನ್ನು ವೀಕ್ಷಿಸುವ ಮೋದಿ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನವೆಂಬರ್ 15ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಮೋದಿ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲಕ್ಕೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಈಗ ಬಿಡುವು ಮಾಡಿಕೊಂಡು ಅವರು ಸಿನಿಮಾ ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?

ತೆರಿಗೆ ವಿನಾಯಿತಿ

ವಿಕ್ರಾಂತ್ ಮಾಸ್ಸಿ ನಟನೆಯ ‘ದಿ ಸಾಬರಮತಿ ಎಕ್ಸ್​ಪ್ರೆಸ್’ ಚಿತ್ರಕ್ಕೆ ಏಕ್ತಾ ಕಪೂರ್ ನಿರ್ಮಾಣ ಇದೆ. ಧೀರಜ್ ಸರ್ಣಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ಹಲವು ರಾಜ್ಯಗಳು ತೆರಿಗೆ ವಿನಾಯಿತಿ ನೀಡಿವೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ತೆರಿಗೆ ವಿನಾಯಿತಿ ನೀಡಿದ್ದಾರೆ. ಅದೇ ರೀತಿ ಹರಿಯಾಣ, ರಾಜಸ್ಥಾನ, ಛತ್ತೀಸಗಢ, ಮಧ್ಯ ಪ್ರದೇಶ, ಗುಜರಾತ್ ಕೂಡ ತೆರಿಗೆ ವಿನಾಯಿತಿ ನೀಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Mon, 2 December 24