Puneetha Parva: ಪುನೀತ ಪರ್ವಕ್ಕೆ ಬರಲು ಈ ರಸ್ತೆಗಳನ್ನು ಬಳಸಿ; ಮಾರ್ಗ ಬದಲಾವಣೆ, ಟ್ರಾಫಿಕ್ ನಿರ್ವಹಣೆಗೆ ಪೊಲೀಸರ ಸಿದ್ಧತೆ

ಗಣ್ಯ ವ್ಯಕ್ತಿಗಳು ಜಯಮಹಲ್ ರಸ್ತೆಯ ಮಾರ್ಗದಲ್ಲಿ ಕಾರ್ಯಕ್ರಮದ ಮುಖ್ಯ ವೇದಿಕೆಗೆ ಬರಲು ‘ವಿಐಪಿ ಎಂಟ್ರಿ’ ಅವಕಾಶ ಕಲ್ಪಿಸಲಾಗಿದೆ.

Puneetha Parva: ಪುನೀತ ಪರ್ವಕ್ಕೆ ಬರಲು ಈ ರಸ್ತೆಗಳನ್ನು ಬಳಸಿ; ಮಾರ್ಗ ಬದಲಾವಣೆ, ಟ್ರಾಫಿಕ್ ನಿರ್ವಹಣೆಗೆ ಪೊಲೀಸರ ಸಿದ್ಧತೆ
ಪುನೀತ ಪರ್ವ ಕಾರ್ಯಕ್ರಮಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ಆಸನ ವ್ಯವಸ್ಥೆ
Follow us
TV9 Web
| Updated By: Digi Tech Desk

Updated on:Oct 21, 2022 | 12:38 PM

ಬೆಂಗಳೂರು: ನಗರದ ಅರಮನೆ ಮೈದಾನದ (Palace Grounds) ‘ಕೃಷ್ಣ ವಿಹಾರ’ದಲ್ಲಿ ಪುನೀತ್ ರಾಜ್​ಕುಮಾರ್ (Puneeth Rajkumar) ನೆನಪಿನ (Puneetha Parva)  ‘ಪುನೀತ ಪರ್ವ’ ಕಾರ್ಯಕ್ರಮ ಶುಕ್ರವಾರ (ಅ 21) ನಡೆಯಲಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರ ಪೊಲೀಸರು ಟ್ರಾಫಿಕ್ ನಿರ್ವಹಣೆಗೆ (Traffic Management) ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಕುರಿತು ಸಂಚಾರ ವಿಭಾಗದ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. ‘ಅರಮನೆ ಸುತ್ತಮುತ್ತ ಯಾವುದೇ ಮಾರ್ಗ ಬದಲಾವಣೆ ಇಲ್ಲ. ನಗರದಲ್ಲಿ ಯಾವುದೇ ರಸ್ತೆಗಳನ್ನು ಬಂದ್ ಮಾಡುವುದಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಸಾವಿರಾರು ಅಭಿಮಾನಿಗಳು ಭಾಗಿಯಾಗುವ ಸಾಧ್ಯತೆ ಇರುವುದರಿಂದ ಸಂಚಾರ ದಟ್ಟಣೆ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಅಭಿಮಾನಿಗಳು ಹಾಗೂ ಸಾರ್ವಜನಿಕರ ಆಗಮನಕ್ಕೆ ಹಲವು ಮಾರ್ಗಗಳನ್ನು ಪೊಲೀಸರು ಗುರುತಿಸಿದ್ದಾರೆ. ಮೈಸೂರು ರಸ್ತೆಯ ಕಡೆಯಿಂದ ಬರುವ ವಾಹನಗಳು ನಾಯಂಡನಹಳ್ಳಿ ಜಂಕ್ಷನ್, ಸುಮ್ಮುನಹಳ್ಳಿ ಸೇತುವೆ, ರಾಜಕುಮಾರ್ ಸಮಾಧಿ, ಗೊರಗುಂಟೆಪಾಳ್ಯ ಜಂಕ್ಷನ್, ಬಿಇಎಲ್ ಸೇತುವೆ, ಹೆಬ್ಬಾಳ ಮೇಲ್ಸೇತುವೆ ಮೆಕ್ರಿ ಸರ್ಕಲ್ ಮಾರ್ಗವಾಗಿ ಅರಮನೆ ಮೈದಾನ ತಲುಪಬೇಕೆಂದು ಸೂಚಿಸಲಾಗಿದೆ.

ತುಮಕೂರು ಕಡೆಯಿಂದ ಬರುವ ವಾಹನಗಳು ತುಮಕೂರು ರಸ್ತೆ, ಗೊರಗುಂಟೆಪಾಳ್ಯ ಜಂಕ್ಷನ್, ಬಿಇಎಲ್ ಸೇತುವೆ, ಹೆಬ್ಬಾಳ ಮೇಲ್ಸೇತುವೆ, ಮೆಕ್ರಿ ಸರ್ಕಲ್ ಮಾರ್ಗವಾಗಿ ಅರಮನೆ ಮೈದಾನ ತಲುಪಬೇಕು. ದೊಡ್ಡಬಳ್ಳಾಪುರ ಕಡೆಯಿಂದ ಬರುವ ವಾಹನಗಳು, ಮೇಜರ್ ಉನ್ನಿಕೃಷ್ಣನ್ ರಸ್ತೆ, ಯಲಹಂಕ ಪೊಲೀಸ್ ಠಾಣೆ, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲ್ಸೇತುವೆ ಮೆಕ್ರಿ ಸರ್ಕಲ್ ಮಾರ್ಗವಾಗಿ ಅರಮನೆ ಮೈದಾನ ತಲುಪಬೇಕು. ಹೊಸೂರು ಕಡೆಯಿಂದ ಬರುವ ವಾಹನಗಳು ಹೊಸೂರು ರಸ್ತೆ, ಮಡಿವಾಳ ಚೆಕ್​ಪೋಸ್ಟ್, ಡೇರಿ ಸರ್ಕಲ್, ಲಾಲ್​ಬಾಗ್ ಮುಖ್ಯದ್ವಾರ, ಮಿನರ್ವ ಸರ್ಕಲ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಬಸವೇಶ್ವರ ವೃತ್ತ, ಮೌಂಟ್ ಕಾರ್ಮಲ್ ಕಾಲೇಜ್, ವಸಂತ ನಗರ ಜಯಮಹಲ್ ರಸ್ತೆ ಮೂಲಕ ಅರಮನೆ ಮೈದಾನ ತಲುಪಬೇಕು ಎಂದು ಪೊಲೀಸರು ಸಲಹೆ ಮಾಡಿದ್ದಾರೆ.

ಕೋಲಾರ ಹೊಸಕೋಟೆ ಕಡೆಯಿಂದ ಬರುವ ವಾಹನಗಳು ಕೆ‌.ಆರ್.ಪುರ, ಟಿನ್ ಫ್ಯಾಕ್ಟರಿ, ಹೆಣ್ಣೂರು ರಿಂಗ್ ರೋಡ್, ಹೆಬ್ಬಾಳ ಮೇಲ್ಸೇತುವೆ, ಮೆಕ್ರಿ ಸರ್ಕಲ್, ಅರಮನೆ ಮೈದಾನ ಮಾರ್ಗ ಬಳಸಬೇಕು ಎಂದು ಪೊಲೀಸರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ವಾಹಗಳಗೆ ಸರ್ಕಸ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಆರಂಭವಾಗುವ ಕ್ಷಣದಿಂದ ಕಾರ್ಯಕ್ರಮ‌ ಮುಗಿಯುವ ತನಕ ಸಂಚಾರ ದಟ್ಟಣೆ ಆಗದಂತೆ ಈ ಮಾರ್ಗದಲ್ಲಿ ಹೆಚ್ಚುವರಿಯಾಗಿ ಸಂಚಾರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ವೈಟ್ ಪೆಟಲ್ ಗೇಟ್ ಮೂಲಕ ಪ್ರವೇಶ

ಪುನೀತ ಪರ್ವ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ವೈಟ್ ಪೆಟಲ್ (ಗೇಟ್ ನಂ 2) ಮೂಲಕ ಪ್ರವೇಶ ಇರಲಿದೆ. ವೈಟ್ ಪೆಟಲ್ ಗೇಟ್ ಮೂಲಕ ಅರಮನೆ ಮೈದಾನ ಪ್ರವೇಶಿಸುವವರು ನಂತರ ಎಡಕ್ಕೆ ತಿರುವು ತೆಗೆದುಕೊಳ್ಳಬೇಕಿದೆ. ತ್ರಿಪುರ ವಾಸಿನಿ ಮುಂಭಾಗದಿಂದ ವೇದಿಕೆ ಮುಂಭಾಗಕ್ಕೆ ಪ್ರವೇಶ ಇರಲಿದೆ. ಎರಡೂ ಕಡೆ ಅಭಿಮಾನಿಗಳಿಗಾಗಿ ಪ್ರವೇಶ ದ್ವಾರಗಳನ್ನು ಸ್ಥಾಪಿಸಲಾಗಿದೆ. ಎರಡು ಕಡೆಯಿಂದ ಒಟ್ಟು 24 ತಾತ್ಕಾಲಿಕ ಗೇಟ್​ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಮೆಟಲ್ ಡಿಟರಕ್ಟರ್​ಗಳ ಮೂಲಕವೇ ಅವರು ಒಳ ಪ್ರವೇಶಕ್ಕೆ ಅವಕಾಶ ಇರಲಿದೆ.

ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ನೂಕುನುಗ್ಗಲಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಭಿಮಾನಿಗಳು ಬರುವ ಮಾರ್ಗದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ವಿಐಪಿ ಎಂಟ್ರಿ

ಗಣ್ಯ ವ್ಯಕ್ತಿಗಳು ಜಯಮಹಲ್ ರಸ್ತೆಯ ಮಾರ್ಗದಲ್ಲಿ ಕಾರ್ಯಕ್ರಮದ ಮುಖ್ಯ ವೇದಿಕೆಗೆ ಬರಲು ‘ವಿಐಪಿ ಎಂಟ್ರಿ’ ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ರಸ್ತೆಯ ತ್ರಿಪುರವಾಸಿನಿ ಮೈದಾನದ ಮೂಲಕ ಸಾರ್ವಜನಿಕರ ವಾಹನ ಹಾಗೂ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ. ಒಟ್ಟು ಐದು ಕಡೆ ಸಾರ್ವಜನಿಕರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್, ಬೈಕ್ ಮತ್ತು ಕಾರ್​ ಪಾರ್ಕಿಂಗ್​ಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸಲಾಗಿದೆ. ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪೊಲೀಸರಿಂದ ಸ್ಥಳ ಪರಿಶೀಲನೆ

ಮುಖ್ಯ ವೇದಿಕೆ ಸೇರಿದಂತೆ ಕಾರ್ಯಕ್ರಮ ನಡೆಯುವ ಆವರಣದಲ್ಲಿ ಪೊಲೀಸರು ಭದ್ರತೆಯ ದೃಷ್ಟಿಯಿಂದ ಸ್ಥಳ ಪರಿಶೀಲಿಸಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಉಪಸ್ಥಿತರಿದ್ದರು. ಅರಮನೆ ಮೈದಾನದ ಭದ್ರತೆ ಕುರಿತು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡಿರಿಂದ ಮಾಹಿತಿ ಪಡೆದುಕೊಂಡರು. ಪೊಲೀಸ್ರು ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಮೂವರು ಡಿಸಿಪಿಗಳಿಗೆ ಭದ್ರತೆಯ ನೇತೃತ್ವ ವಹಿಸಲಾಗಿದೆ. ಸುಮಾರು 30 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಎಷ್ಟು ಜನ ಸೇರಲಿದ್ದಾರೆ ಎಂಬುದು ಸಂಜೆ ವೇಳೆಗೆ ಗೊತ್ತಾಗಲಿದೆ.

Published On - 12:21 pm, Fri, 21 October 22

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.