Pooja Hegde Birthday: ಪೂಜಾ ಹೆಗ್ಡೆ ಮತ್ತು ಪ್ರಭಾಸ್​ ಕಿರಿಕ್​ ವದಂತಿಗೆ ಬಿತ್ತು ತೆರೆ; ನಟಿಗೆ ಸರ್​ಪ್ರೈಸ್​ ಉಡುಗೊರೆ ನೀಡಿದ ‘ರಾಧೆ ಶ್ಯಾಮ್’ ನಟ

Prabhas : ಪೂಜಾ ಹೆಗ್ಡೆ ಸೆಟ್​ನಲ್ಲಿ ಸಾಕಷ್ಟು ಆ್ಯಟಿಟ್ಯೂಡ್​ ತೋರಿಸುತ್ತಿದ್ದಾರೆ. ಇದು ಪ್ರಭಾಸ್​ಗೆ ಇಷ್ಟವಾಗುತ್ತಿಲ್ಲ ಎನ್ನಲಾಗಿತ್ತು.  ಹೀಗಾಗಿ, ಪರಸ್ಪರ ಇಬ್ಬರೂ ಮಾತನಾಡುವುದನ್ನೇ ನಿಲ್ಲಿಸಿದ್ದಾರೆ ಎಂದು ಕೂಡ ವರದಿ ಆಗಿತ್ತು.

Pooja Hegde Birthday: ಪೂಜಾ ಹೆಗ್ಡೆ ಮತ್ತು ಪ್ರಭಾಸ್​ ಕಿರಿಕ್​ ವದಂತಿಗೆ ಬಿತ್ತು ತೆರೆ; ನಟಿಗೆ ಸರ್​ಪ್ರೈಸ್​ ಉಡುಗೊರೆ ನೀಡಿದ ‘ರಾಧೆ ಶ್ಯಾಮ್’ ನಟ
ಪ್ರಭಾಸ್​-ಪೂಜಾ ಹೆಗ್ಡೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 13, 2021 | 2:34 PM

ಇಂದು (ಅಕ್ಟೋಬರ್​ 13) ಪೂಜಾ ಹೆಗ್ಡೆ ಜನ್ಮದಿನ. ಅವರು 31ನೇ ವರ್ಷಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳಿಂದ ಹಾಗೂ ಸಾಕಷ್ಟು ಸೆಲೆಬ್ರಿಟಿಗಳಿಂದ ಶುಭಾಶಯಗಳು ಬರುತ್ತಿವೆ. ಈ ಮಧ್ಯೆ ಪ್ರಭಾಸ್​ ಕಡೆಯಿಂದ ಪೂಜಾ ಹಾಗೂ ಅವರ ಅಭಿಮಾನಿಗಳಿಗೆ ವಿಶೇಷ ಗಿಫ್ಟ್​ ಒಂದು ಸಿಕ್ಕಿದೆ. ಈ ಮೂಲಕ ಎಲ್ಲಾ ವದಂತಿಗೆ ತೆರೆ ಬಿದ್ದಿದೆ.

ಪೂಜಾ ಹೆಗ್ಡೆ ಸೆಟ್​ನಲ್ಲಿ ಸಾಕಷ್ಟು ಆ್ಯಟಿಟ್ಯೂಡ್​ ತೋರಿಸುತ್ತಿದ್ದಾರೆ. ಇದು ಪ್ರಭಾಸ್​ಗೆ ಇಷ್ಟವಾಗುತ್ತಿಲ್ಲ ಎನ್ನಲಾಗಿತ್ತು.  ಹೀಗಾಗಿ, ಪರಸ್ಪರ ಇಬ್ಬರೂ ಮಾತನಾಡುವುದನ್ನೇ ನಿಲ್ಲಿಸಿದ್ದಾರೆ ಎಂದು ಕೂಡ ವರದಿ ಆಗಿತ್ತು. ಈ ಬಗ್ಗೆ ಚಿತ್ರತಂಡದಿಂದಲೇ ಸ್ಪಷ್ಟನೆ ಸಿಕ್ಕಿತ್ತು. ಇಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ ಎಂದು ಚಿತ್ರತಂಡ ಹೇಳಿತ್ತು.. ಆದರೆ, ಫ್ಯಾನ್ಸ್ ನಂಬಿರಲಿಲ್ಲ. ಈಗ ಇವೆಲ್ಲದಕ್ಕೂ ಸ್ಪಷ್ಟನೆ ಸಿಕ್ಕಿದೆ.

ಪೂಜಾ ಹೆಗ್ಡೆ ಬರ್ತ್​ಡೇ ಪ್ರಯುಕ್ತ ‘ರಾಧೆ ಶ್ಯಾಮ್’ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ಈ ಪೋಸ್ಟರ್​​ನಲ್ಲಿ ಬಿಳಿ ಬಣ್ಣದ ಡ್ರೆಸ್​ನಲ್ಲಿ ಪೂಜಾ ಮಿಂಚಿದ್ದಾರೆ. ಬ್ಯಾಕ್​​ಗ್ರೌಂಡ್​ ಕೂಡ ಬಿಳಿ ಬಣ್ಣದಲ್ಲೇ ಇದೆ. ಒಟ್ಟಿನಲ್ಲಿ, ಇಡೀ ಫೋಟೋ ಶ್ವೇತ ವರ್ಣದಲ್ಲಿ ಹೊಳೆಯುತ್ತಿದೆ. ಈ ಪೋಸ್ಟರ್​ಗೆ ‘ಹುಟ್ಟು ಹಬ್ಬದ ಶುಭಾಶಯಗಳು ಪೂಜಾ’ ಎಂದು ಪ್ರಭಾಸ್​ ಕ್ಯಾಪ್ಶನ್​ ನೀಡಿದ್ದಾರೆ.

View this post on Instagram

A post shared by Prabhas (@actorprabhas)

ಪ್ರಭಾಸ್​ ಹಾಗೂ ಪೂಜಾ ಹೆಗ್ಡೆ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿದೆ. ರೊಮ್ಯಾಂಟಿಕ್​ ಕಥೆ ಹೊಂದಿರುವ ಸಿನಿಮಾ ಇದಾಗಿದ್ದು, ಪ್ರಭಾಸ್​ ಲವರ್​ ಬಾಯ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಪೋಸ್ಟರ್​ ಹಾಗೂ ಟೀಸರ್​ಗಳು ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿವೆ. ರಾಧಾ ಕೃಷ್ಣ ಕುಮಾರ್​ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಈ ಸಿನಿಮಾ ಜನವರಿ 14ರಂದು ತೆರೆಗೆ ಬರುತ್ತಿದೆ. ಈ ಸಂದರ್ಭದಲ್ಲಿ ದೊಡ್ಡ ಬಜೆಟ್​ನ ಸಾಕಷ್ಟು ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಹೀಗಾಗಿ, ದೊಡ್ಡ ಮಟ್ಟದಲ್ಲಿ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಏರ್ಪಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಪ್ರಭಾಸ್​ ಬಗ್ಗೆ ಹಬ್ಬಿದೆ 150 ಕೋಟಿ ರೂ. ಗಾಸಿಪ್​; ಸಂಬಳದ ವಿಷಯ ಕೇಳಿ ಹುಬ್ಬೇರಿಸಿದ ಫ್ಯಾನ್ಸ್​

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್