AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆಗೆ ಕೊವಿಡ್​ ಪಾಸಿಟಿವ್​; ಹೇಗಿದೆ ರಾಧೆ ಶ್ಯಾಮ್​ ನಟಿಯ ಆರೋಗ್ಯ ಸ್ಥಿತಿ?

ಕೈಯಲ್ಲಿ ಅನೇಕ ಪ್ರಾಜೆಕ್ಟ್​ಗಳನ್ನು ಇಟ್ಟುಕೊಂಡಿರುವ ಪೂಜಾ ಹೆಗ್ಡೆ ಅವರು ಸದಾ ತಿರುಗಾಡುತ್ತಲೇ ಇರುತ್ತಾರೆ. ಈ ನಡುವೆ ಪೂಜಾಗೆ ಕೊರೊನಾ ಸೋಂಕು ತಗುಲಿದ್ದು, ಆ ಬಗ್ಗೆ ಸ್ವತಃ ಅವರು ಮಾಹಿತಿ ನೀಡಿದ್ದಾರೆ.

ಪೂಜಾ ಹೆಗ್ಡೆಗೆ ಕೊವಿಡ್​ ಪಾಸಿಟಿವ್​; ಹೇಗಿದೆ ರಾಧೆ ಶ್ಯಾಮ್​ ನಟಿಯ ಆರೋಗ್ಯ ಸ್ಥಿತಿ?
ಪೂಜಾ ಹೆಗ್ಡೆ
ಮದನ್​ ಕುಮಾರ್​
|

Updated on: Apr 26, 2021 | 1:39 PM

Share

ಎಷ್ಟೇ ಪ್ರಯತ್ನಿಸಿದರೂ ಕೊರೊನಾ ವೈರಸ್​ ನಿಯಂತ್ರಣಕ್ಕೆ ಬರುತ್ತಿಲ್ಲ. ಪ್ರತಿ ದಿನ ಕೊವಿಡ್​ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಚಿಕಿತ್ಸೆ ಸಿಗದೇ ಸಾವಿರಾರು ಜನರು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ವೈರಸ್​ ಪಾಸಿಟಿವ್​ ವರದಿ ಬರುತ್ತಿದೆ. ಈಗ ನಟಿ ಪೂಜಾ ಹೆಗ್ಡೆ ಅವರಿಗೂ ಕೊರೊನಾ ಸೋಂಕು ತಗುಲಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಪೂಜಾ ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಕರ್ನಾಟಕ ಮೂಲದ ಪೂಜಾ ಹೆಗ್ಡೆ ಅವರಿಗೆ ಪರಭಾಷೆಯಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇದೆ. ತಮಿಳು, ತೆಲುಗು ಮತ್ತು ಹಿಂದಿಯ ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿ ಆಗಿದ್ದಾರೆ. ಕೈಯಲ್ಲಿ ಅನೇಕ ಪ್ರಾಜೆಕ್ಟ್​ಗಳನ್ನು ಇಟ್ಟುಕೊಂಡಿರುವ ಅವರು ಸದಾ ಕಾಲ ಶೂಟಿಂಗ್​, ಡಬ್ಬಿಂಗ್​, ರಿಹರ್ಸಲ್​ ಎಂದು ತಿರುಗಾಡುತ್ತಲೇ ಇರುತ್ತಾರೆ. ಈ ನಡುವೆ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆ ಬಗ್ಗೆ ಸ್ವತಃ ಅವರು ಮಾಹಿತಿ ನೀಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ಪೂಜಾ ಹೆಗ್ಡೆ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿ ಮತ್ತು ಟ್ವೀಟ್​ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನನಗೆ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ನಿಯಮಗಳ ಪ್ರಕಾರ ನಾನು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್​ ಮಾಡಿಸಿಕೊಳ್ಳಿ’ ಎಂದು ಪೂಜಾ ಹೇಳಿದ್ದಾರೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತಮ್ಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಎಲ್ಲರೂ ಮನೆಯಲ್ಲೇ ಇದ್ದು ಸೇಫ್​ ಆಗಿರಿ ಎಂದು ಸಲಹೆ ನೀಡಿದ್ದಾರೆ.

ಪ್ರಭಾಸ್​ ಅಭಿನಯದ ಬಹುನಿರೀಕ್ಷಿತ ರಾಧೆ ಶ್ಯಾಮ್​ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಅಕ್ಕಿನೇನಿ ಅಖಿಲ್​ ನಟನೆಯ ಮೋಸ್ಟ್​ ಎಲಿಜಬಲ್​ ಬ್ಯಾಚುಲರ್​ ಚಿತ್ರದಲ್ಲಿ ಸ್ಟ್ಯಾಂಡಪ್​ ಕಾಮಿಡಿಯನ್​ ಪಾತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ. ಮೆಗಾ ಸ್ಟಾರ್​ ಚಿರಂಜೀವಿ ಅಭಿನಯದ ಆಚಾರ್ಯ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಪೂಜಾ ನಟಿಸುತ್ತಿದ್ದಾರೆ. ಅದು ನೀಲಾಂಬರಿ ಎಂಬ ಅತಿಥಿ ಪಾತ್ರವಾಗಿದ್ದು, ಅಭಿಮಾನಿಗಳಲ್ಲಿ ಆ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಸದ್ಯ ಅವರಿಗೆ ಕೊರೊನಾ ವೈರಸ್​ ತಗುಲಿರುವುದರಿಂದ ಈ ಎಲ್ಲ ಸಿನಿಮಾ ಕೆಲಸಗಳಿಗೆ ಅವರು ಬ್ರೇಕ್​ ಹಾಕುವುದು ಅನಿವಾರ್ಯ ಆಗಿದೆ.

ಇದನ್ನೂ ಓದಿ: Pooja Hegde: ರಶ್ಮಿಕಾಗೆ ಪೈಪೋಟಿ ನೀಡುವ ಕನ್ನಡತಿ ಪೂಜಾ ಹೆಗ್ಡೆಗೆ ಕಾಲಿವುಡ್​ನಲ್ಲಿ ಸಿಕ್ತು ಬಂಪರ್​ ಆಫರ್​!

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!