Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ

Poonam Pandey Death News: ಪೂನಂ ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ
ಪೂನಂ ಪಾಂಡೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 02, 2024 | 12:24 PM

ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (Poonam Pandey) ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಅವರು ಮಾಡಿಕೊಂಡ ವಿವಾದಗಳು ಹಲವು. ಈಗ ಅವರು ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್​ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿಲ್ಲ.

ಪೂನಂ ಪಾಂಡೆ ಪೋಸ್ಟ್​..

ಇದನ್ನೂ ಓದಿ: 3 ದಿನದ ಹಿಂದೆ ಆರಾಮಾಗಿದ್ದ ಪೂನಂ ಪಾಂಡೆ ಕ್ಯಾನ್ಸರ್​ನಿಂದ ನಿಧನ ಎಂದರೆ ನಂಬೋದು ಹೇಗೆ?

ಯಾಲಿಟಿ ಶೋಗಳಲ್ಲೂ ಪೂನಂ ಕಾಣಿಸಿಕೊಂಡಿದ್ದಾರೆ. 2022ರಲ್ಲಿ ಪ್ರಸಾರ ಕಂಡ ‘ಲಾಕ್​ಅಪ್​’ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು. ಅವರು ಏಳನೇ ಸ್ಥಾನದಲ್ಲಿ ಎಲಿಮಿನೇಟ್ ಆದರು. ಹಲವು ವಿವಾದಗಳನ್ನು ಕೂಡ ಅವರು ಮಾಡಿಕೊಂಡಿದ್ದರು. ಈಗ ಅವರು ನಿಧನ ಹೊಂದಿದರು ಎಂದರೆ ಅದನ್ನು ನಂಬೋಕೆ ಫ್ಯಾನ್ಸ್​ಗೆ ಆಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Fri, 2 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ