ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

GN Rangarajan Death: ಜಿಎನ್​ ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಜಿಎನ್​ ರಂಗರಾಜನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 03, 2021 | 3:29 PM

ತಮಿಳು ಚಿತ್ರರಂಗದಿಂದ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನರಾಗಿದ್ದಾರೆ. ಹಲವು ಹಿಟ್​ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ (ಜೂ.3) ಅಸುನೀಗಿದ್ದಾರೆ. ರಂಗರಾಜನ್​ ಅವರಿಗೆ 90 ವರ್ಷ ವಯಸ್ಸಾಗಿದೆ. ಅವರ ನಿಧನದ ಸುದ್ದಿಯನ್ನು ಪುತ್ರ ಜಿಎನ್​ಆರ್​ ಕುಮಾರವೇಲನ್​ ಖಚಿತಪಡಿಸಿದ್ದಾರೆ.

‘ನನ್ನ ತಂದೆ, ನನ್ನ ಗುರು, ನನ್ನ ಪ್ರೀತಿ​.. ಇಂದು ಬೆಳಗ್ಗೆ 8.45ಕ್ಕೆ ನಿಧನರಾದರು. ಅವರಿಗೆ ನಿಮ್ಮೆಲ್ಲರ ಪ್ರಾರ್ಥನೆ ಇರಲಿ’ ಎಂದು ಜಿಎನ್​ಆರ್​ ಕುಮಾರವೇಲನ್​ ಟ್ವೀಟ್​ ಮಾಡಿದ್ದಾರೆ. ರಂಗರಾಜನ್​ ಅವರ ಅಂತ್ಯಕ್ರಿಯೆಯು ಇಂದು ಚೆನ್ನೈನಲ್ಲಿ ನಡೆಯಲಿದೆ. ಕಮಲ್​ ಹಾಸನ್​, ಶ್ರೀದೇವಿ ನಟನೆಯ ‘ಮೀಂದುಂ ಕೋಕಿಲಾ’, ಕಲ್ಯಾಣರಾಮನ್​, ಮಹಾರಸನ್​ ಮುಂತಾದ ಸಿನಿಮಾಗಳಿಗೆ ರಂಗರಾಜನ್ ನಿರ್ದೇಶನ ಮಾಡಿದ್ದರು. ಕಳೆದ ವರ್ಷ ಡಿಸೆಂಬರ್​ನಲ್ಲಿ​ ಅವರು 90ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ. ಖ್ಯಾತ ನಟ ವಿವೇಕ್​, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ.ವಿ. ಆನಂದ್​, ಹಾಸ್ಯ ನಟ ಪಾಂಡು, ಅಸುರನ್​ ಖ್ಯಾತಿಯ ನಟ ನಿತೀಶ್​ ವೀರಾ ಸೇರಿದಂತೆ ಅನೇಕರನ್ನು ಇತ್ತೀಚಿನ ದಿನಗಳಲ್ಲಿ ಕಾಲಿವುಡ್​ ಕಳೆದುಕೊಂಡಿದೆ. ಈಗ ರಂಗರಾಜನ್​ ಅಸುನೀಗಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ