AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Project K: ಗೆಲುವಿಗಾಗಿ ‘ಬಾಹುಬಲಿ’ ಸೂತ್ರ ಪಾಲಿಸುತ್ತಿರುವ ಪ್ರಭಾ​ಸ್​; 2 ಭಾಗದಲ್ಲಿ ಬರಲಿದೆ ‘ಪ್ರಾಜೆಕ್ಟ್​ ಕೆ’

Prabhas New Movie: ‘ಪ್ರಾಜೆಕ್ಟ್​ ಕೆ’ ಚಿತ್ರ ಎರಡು ಭಾಗದಲ್ಲಿ ಮೂಡಿಬರಲಿದೆ. ದೀಪಿಕಾ ಪಡುಕೋಣೆ ಮತ್ತು ಪ್ರಭಾಸ್​ ಮೊದಲ ಸಲ ಜೋಡಿಯಾಗಿ ನಟಿಸುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ.

Project K: ಗೆಲುವಿಗಾಗಿ ‘ಬಾಹುಬಲಿ’ ಸೂತ್ರ ಪಾಲಿಸುತ್ತಿರುವ ಪ್ರಭಾ​ಸ್​; 2 ಭಾಗದಲ್ಲಿ ಬರಲಿದೆ ‘ಪ್ರಾಜೆಕ್ಟ್​ ಕೆ’
ಪ್ರಭಾಸ್
Follow us
ಮದನ್​ ಕುಮಾರ್​
|

Updated on: Feb 02, 2023 | 6:06 PM

ನಟ ಪ್ರಭಾಸ್​ (Prabhas) ಅವರು ಪ್ಯಾನ್​ ಇಂಡಿಯಾ ಹೀರೋ ಆಗಿದ್ದು ‘ಬಾಹುಬಲಿ’ ಸಿನಿಮಾದ ಯಶಸ್ಸಿನ ನಂತರ. ಆದರೆ ‘ಬಾಹುಬಲಿ 2’ ಗೆದ್ದ ಬಳಿಕ ಅವರಿಗೆ ಮತ್ತೆ ಅಂಥದ್ದೇ ದೊಡ್ಡ ಸಕ್ಸಸ್​ ಸಿಗಲಿಲ್ಲ. ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಈಗ ಪ್ರಭಾಸ್​ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮತ್ತೆ ಹೇಗಾದರೂ ಮಾಡಿ ಗೆಲ್ಲಬೇಕು ಎಂಬ ಅನಿವಾರ್ಯತೆ ಅವರಿಗೆ ಎದುರಾಗಿದೆ. ಅದಕ್ಕಾಗಿ ಅವರು ‘ಬಾಹುಬಲಿ’ (Bahubali) ಚಿತ್ರದ ಸೂತ್ರ ಅನುಸರಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರಭಾಸ್​ ಮತ್ತು ದೀಪಿಕಾ ಪಡುಕೋಣೆ ಅವರು ‘ಪ್ರಾಜೆಕ್ಟ್​ ಕೆ’ (Project K) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಕೂಡ ‘ಬಾಹುಬಲಿ’ ರೀತಿ ಎರಡು ಪಾರ್ಟ್​ನಲ್ಲಿ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

‘ಪ್ರಾಜೆಕ್ಟ್​ ಕೆ’ ಸಿನಿಮಾ ರಿಲೀಸ್​ ಆಗಲು ಇನ್ನೂ ಸಾಕಷ್ಟು ಸಮಯ ಇದೆ. 2024ರಲ್ಲಿ ಈ ಚಿತ್ರ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ನಾಗ್​ ಅಶ್ವಿನ್​ ಅವರು ಇದಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸೈನ್ಸ್​ ಫಿಕ್ಷನ್​ ಕಥೆ ಹೊಂದಿರುವ ಈ ಸಿನಿಮಾಗೆ ತಾತ್ಕಾಲಿಕವಾಗಿ ‘ಪ್ರಾಜೆಕ್ಟ್​ ಕೆ’ ಎಂದು ಹೆಸರು ಇಡಲಾಗಿದೆ. ದೀಪಿಕಾ ಪಡುಕೋಣೆ ಮತ್ತು ಪ್ರಭಾಸ್​ ಅವರು ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿರುವುದರಿಂದ ಅಭಿಮಾನಿಗಳ ಮನದಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ:  Prabhas: ‘ಸಲ್ಮಾನ್​ ಖಾನ್​ ಮದುವೆ ಆದ ನಂತರವೇ ನನ್ನ ವಿವಾಹ’: ಎಲ್ಲರೆದುರು ಘೋಷಿಸಿದ ಪ್ರಭಾಸ್​

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

‘ಈ ಸಿನಿಮಾದ ಕಥೆ ಬಹಳ ದೊಡ್ಡದಾಗಿದೆ. ಹಾಗಾಗಿ ಅದನ್ನು ಎರಡು ಪಾರ್ಟ್​ಗಳಲ್ಲಿ ಹೇಳಬೇಕಾಗಿದೆ. ಮೊದಲ ಭಾಗದಲ್ಲಿ ಕಥೆ ಪರಿಚಯಗೊಳ್ಳುತ್ತದೆ ಮತ್ತು ಸಂಘರ್ಷ ಹುಟ್ಟಿಕೊಳ್ಳುತ್ತದೆ. ಮುಂದೇನಾಗುತ್ತದೆ ಎಂಬುದು ಎರಡನೇ ಪಾರ್ಟ್​ನಲ್ಲಿ ಗೊತ್ತಾಗುತ್ತದೆ. ಬಾಹುಬಲಿ ಸಿನಿಮಾ ರೀತಿಯೇ ‘ಪ್ರಾಜೆಕ್ಟ್​ ಕೆ’ ಕೂಡ 2 ಭಾಗಗಳಲ್ಲಿ ಮೂಡಿಬರಲಿದೆ’ ಎಂದು ಮೂಲಗಳು ಹೇಳಿರುವುದಾಗಿ ಪಿಂಕ್​ವಿಲ್ಲಾ ವರದಿ ಮಾಡಿದೆ.

ಇದನ್ನೂ ಓದಿ: Adipurush: ಜೂ.16ಕ್ಕೆ ‘ಆದಿಪುರುಷ್​’ ರಿಲೀಸ್​ ಖಚಿತ; ಪ್ರಭಾಸ್​ ಫ್ಯಾನ್ಸ್​ಗೆ ಸಮಾಧಾನ ತಂದ ಚಿತ್ರತಂಡದ ಸ್ಪಷ್ಟನೆ

ಪ್ರಭಾಸ್​ ಅವರು ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ‘ಕೆಜಿಎಫ್’ ಯಶಸ್ಸಿನ ಬಳಿಕ ಪ್ರಶಾಂತ್​ ನೀಲ್​ ಕೈಗೆತ್ತಿಕೊಂಡ ಚಿತ್ರವಾದ್ದರಿಂದ ಹೈಪ್​ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

‘ಸಲಾರ್​’ ಚಿತ್ರಕ್ಕಿಂತಲೂ ಮುನ್ನ ‘ಆದಿ ಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ರಾಮಾಯಣದ ಕಥೆಯನ್ನು ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಜೂನ್ 16ರಂದು ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್