‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

ನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿವೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಿತ್ತು. ಈಗ ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾದ ಸರದಿ.

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ
‘ರಾಧೆ ಶ್ಯಾಮ್’: ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್ ಕೂಡ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 14ರಂದು ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡುವ ಅನಿವಾರ್ಯತೆ ಎದುರಾಗಿತ್ತು. ಈ ಚಿತ್ರ ಮಾರ್ಚ್ 4 ಅಥವಾ 11ರಂದು ತೆರೆಗೆ ಬರಲಿದೆ ಎನ್ನಲಾಗಿದೆ.
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 05, 2022 | 1:06 PM

ಕೊವಿಡ್​ ಪ್ರಕರಣ ದಿನೇದಿನೇ ಹೆಚ್ಚುತ್ತಲೇ ಇದೆ. ಇದು ಸಹಜವಾಗಿಯೇ ಆತಂಕ ಮೂಡಿಸಿದೆ. ಶೀಘ್ರದಲ್ಲೇ ಮೂರನೆ ಅಲೆ ಅಪ್ಪಳಿಸುವ ಸೂಚನೆ ಸಿಕ್ಕಿದೆ. ಹೀಗಾಗಿ, ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಹೇರಲಾಗಿದೆ. ಹೀಗಾಗಿ, ವಾರಾಂತ್ಯದಲ್ಲಿ ಸಿನಿಮಾ ಪ್ರದರ್ಶನ ಅಸಾಧ್ಯವಾಗಿದೆ. ಅನೇಕ ರಾಜ್ಯಗಳು ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. ಹೀಗಾಗಿ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿವೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಿತ್ತು. ಈಗ ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾದ ಸರದಿ.

ಪ್ರಭಾಸ್​ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್​ ಕೂಡ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 14ರಂದು ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡುವ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಈ ಮೊದಲು ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದಕ್ಕೆ ಹಾಕಿತ್ತು. ಆದರೆ, ಈ ಬಗ್ಗೆ ‘ರಾಧೆ ಶ್ಯಾಮ್’ ಚಿತ್ರತಂಡ ದೃಢ ನಿರ್ಧಾರ ತೆಗೆದುಕೊಂಡಿತ್ತು. ‘ಆರ್​ಆರ್​ಆರ್​’ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಿ ಜನವರಿ 14ರಂದೇ ತೆರೆಗೆ ಬರುತ್ತಿದ್ದೇವೆ ಎನ್ನುವ ಮಾಹಿತಿಯನ್ನು ಕೊಟ್ಟಿತ್ತು. ಆದರೆ, ಕೆಲವೇ ದಿನಗಳಲ್ಲಿ ಎಲ್ಲವೂ ಬದಲಾಗಿದೆ.

ಈ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣಲಿದೆ. ರೊಮ್ಯಾಂಟಿಕ್​ ಲವ್​ ಸ್ಟೋರಿ ಹೊಂದಿರುವ ಈ ಸಿನಿಮಾ ಪ್ರಭಾಸ್​ ವೃತ್ತಿಜೀವನದ ಡಿಫರೆಂಟ್ ಚಿತ್ರ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್​ಆರ್​ಆರ್​’; ಅಧಿಕೃತವಾಗಿ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ

ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್​ ನೀಡಬೇಕು ಆರ್​ಆರ್​ಆರ್​ ನಿರ್ಮಾಪಕರು; ಹೀಗಾದ್ರೆ ಚಿತ್ರದ ಭವಿಷ್ಯ ಏನು?

Published On - 12:16 pm, Wed, 5 January 22

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್