ಕೊವಿಡ್ ಪ್ರಕರಣ ದಿನೇದಿನೇ ಹೆಚ್ಚುತ್ತಲೇ ಇದೆ. ಇದು ಸಹಜವಾಗಿಯೇ ಆತಂಕ ಮೂಡಿಸಿದೆ. ಶೀಘ್ರದಲ್ಲೇ ಮೂರನೆ ಅಲೆ ಅಪ್ಪಳಿಸುವ ಸೂಚನೆ ಸಿಕ್ಕಿದೆ. ಹೀಗಾಗಿ, ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಹೇರಲಾಗಿದೆ. ಹೀಗಾಗಿ, ವಾರಾಂತ್ಯದಲ್ಲಿ ಸಿನಿಮಾ ಪ್ರದರ್ಶನ ಅಸಾಧ್ಯವಾಗಿದೆ. ಅನೇಕ ರಾಜ್ಯಗಳು ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. ಹೀಗಾಗಿ, ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಡುತ್ತಿವೆ. ಇತ್ತೀಚೆಗೆ ‘ಆರ್ಆರ್ಆರ್’ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡಿತ್ತು. ಈಗ ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್’ ಸಿನಿಮಾದ ಸರದಿ.
ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್ ಕೂಡ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 14ರಂದು ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡುವ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.
We have to postpone the release of our film #RadheShyam due to the ongoing covid situation. Our sincere thanks to all the fans for your unconditional love and support.
We will see you in cinemas soon..!#RadheShyamPostponed pic.twitter.com/NzpxyuY7hq
— Pooja Hegde (@hegdepooja) January 5, 2022
ಈ ಮೊದಲು ‘ಆರ್ಆರ್ಆರ್’ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿತ್ತು. ಆದರೆ, ಈ ಬಗ್ಗೆ ‘ರಾಧೆ ಶ್ಯಾಮ್’ ಚಿತ್ರತಂಡ ದೃಢ ನಿರ್ಧಾರ ತೆಗೆದುಕೊಂಡಿತ್ತು. ‘ಆರ್ಆರ್ಆರ್’ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿ ಜನವರಿ 14ರಂದೇ ತೆರೆಗೆ ಬರುತ್ತಿದ್ದೇವೆ ಎನ್ನುವ ಮಾಹಿತಿಯನ್ನು ಕೊಟ್ಟಿತ್ತು. ಆದರೆ, ಕೆಲವೇ ದಿನಗಳಲ್ಲಿ ಎಲ್ಲವೂ ಬದಲಾಗಿದೆ.
ಈ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್’ ತೆರೆಕಾಣಲಿದೆ. ರೊಮ್ಯಾಂಟಿಕ್ ಲವ್ ಸ್ಟೋರಿ ಹೊಂದಿರುವ ಈ ಸಿನಿಮಾ ಪ್ರಭಾಸ್ ವೃತ್ತಿಜೀವನದ ಡಿಫರೆಂಟ್ ಚಿತ್ರ ಎನ್ನಲಾಗುತ್ತಿದೆ.
ಇದನ್ನೂ ಓದಿ: ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್ಆರ್ಆರ್’; ಅಧಿಕೃತವಾಗಿ ಚಿತ್ರದ ರಿಲೀಸ್ ಡೇಟ್ ಮುಂದೂಡಿಕೆ
ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್ ನೀಡಬೇಕು ಆರ್ಆರ್ಆರ್ ನಿರ್ಮಾಪಕರು; ಹೀಗಾದ್ರೆ ಚಿತ್ರದ ಭವಿಷ್ಯ ಏನು?
Published On - 12:16 pm, Wed, 5 January 22