AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

ಪ್ರಶಾಂತ್ ನೀಲ್ ‘ಕೆಜಿಎಫ್’ ಸರಣಿ ಮೂಲಕ ತಮ್ಮ ಕಸುಬುದಾರಿಕೆಯನ್ನು ತೋರಿಸಿದ್ದಾರೆ. ಸದ್ಯ ‘ಸಲಾರ್​’ ಸಿನಿಮಾದ ಪೋಸ್ಟರ್​​ಗಳು ಗಮನ ಸೆಳೆದಿವೆ.

ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್
ಪ್ರಭಾಸ್​​- ಪ್ರಶಾಂತ್ ನೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 17, 2023 | 12:31 PM

Share

ಪ್ರಶಾಂತ್ ನೀಲ್ (Prashanth Neel) ಹಾಗೂ ಪ್ರಭಾಸ್​ ‘ಸಲಾರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಕೊವಿಡ್, ಪ್ರಭಾಸ್​ ಅವರ ಇತರ ಕಮಿಟ್​ಮೆಂಟ್​​ಗಳಿಂದ ‘ಸಲಾರ್​’ ಸಿನಿಮಾ (Salar Movie) ಶೂಟಿಂಗ್ ವಿಳಂಬ ಆಗಿದೆ. ಹೀಗಿರುವಾಗಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ದಿಲ್ ರಾಜು ಬಂಡವಾಳ ಹೂಡುತ್ತಿರುವ ಈ ಸಿನಿಮಾದಲ್ಲಿ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ‘ರವಣಂ’ ಟೈಟಲ್ ಫಿಕ್ಸ್ ಆಗಿದೆ.

ಪ್ರಶಾಂತ್ ನೀಲ್ ‘ಕೆಜಿಎಫ್’ ಸರಣಿ ಮೂಲಕ ತಮ್ಮ ಕಸುಬುದಾರಿಕೆಯನ್ನು ತೋರಿಸಿದ್ದಾರೆ. ಸದ್ಯ ‘ಸಲಾರ್​’ ಸಿನಿಮಾದ ಪೋಸ್ಟರ್​​ಗಳು ಗಮನ ಸೆಳೆದಿವೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಅವರ ರಗಡ್ ಲುಕ್ ಈಗಾಗಲೇ ಅನಾವರಣಗೊಂಡಿದೆ. ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಪ್ರಭಾಸ್-ಪ್ರಶಾಂತ್​ ನೀಲ್​ ಮತ್ತೊಂದು ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ದಿಲ್ ರಾಜು ನಿರ್ಮಾಣದ ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಲ್ಲಿ ದಿಲ್ ರಾಜು ನಿರ್ಮಾಣದ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರ ಗೆದ್ದ ಖುಷಿಯಲ್ಲಿ ಅವರು ‘ಟಿವಿ9 ತೆಲುಗು’ಗೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ತಮ್ಮ ಮುಂದಿನ ಪ್ರಾಜೆಕ್ಟ್ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Prashanth Neel: ಪ್ರಶಾಂತ್ ನೀಲ್ ಟ್ವಿಟರ್ ಖಾತೆ ಕ್ಲೋಸ್​; ನಿರ್ಧಾರಕ್ಕೆ ಕಾರಣವಾಯ್ತಾ ಉರ್ದು ಟ್ವೀಟ್​?
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಅವರ ಕಾಲ್​​ಶೀಟ್ ದಿಲ್ ರಾಜು ಬಳಿ ಇದೆ. ಈಗ ಮಾತನಾಡಿರುವ ದಿಲ್ ರಾಜು, ‘ಪ್ರಶಾಂತ್ ನೀಲ್ ಜತೆ ರವಣಂ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ. ಇದು ಬಯೋಪಿಕ್​ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ ಎನ್ನಲಾಗುತ್ತಿದೆ.

ಇದನ್ನೂ ಓದಿ: Prashanth Neel: ಪ್ರಶಾಂತ್ ನೀಲ್ ಟ್ವಿಟರ್ ಖಾತೆ ಕ್ಲೋಸ್​; ನಿರ್ಧಾರಕ್ಕೆ ಕಾರಣವಾಯ್ತಾ ಉರ್ದು ಟ್ವೀಟ್​?

ಪ್ರಭಾಸ್ ಅವರು ಬ್ಯುಸಿ ಹೀರೋ ಎನಿಸಿಕೊಂಡಿದ್ದಾರೆ. ‘ಸಲಾರ್​’, ‘ಪ್ರಾಜೆಕ್ಟ್​ ಕೆ’, ‘ಆದಿಪುರುಷ್​’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಜತೆಗೆ ಮೈತ್ರಿ ಮೂವಿ ಮೇಕರ್ಸ್ ಜತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಎಲ್ಲಾ ಕಮಿಟ್​ಮೆಂಟ್​​ಗಳು ಮುಗಿದ ಬಳಿಕವೇ ‘ರವಣಂ’ ಸಿನಿಮಾ ಸೆಟ್ಟೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Tue, 17 January 23

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ