AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ಶುರು ಆಗಲಿದೆ ‘ಸಲಾರ್​ 2’ ಶೂಟಿಂಗ್​? ಪ್ರಭಾಸ್​ ಫ್ಯಾನ್ಸ್​ಗೆ ಇಲ್ಲಿದೆ ಸಿಹಿ ಸುದ್ದಿ

ಅದ್ದೂರಿ ಬಜೆಟ್​ನಲ್ಲಿ ‘ಸಲಾರ್​ 2’ ಸಿನಿಮಾ ನಿರ್ಮಾಣ ಆಗಲಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಮೂಡಿಬರಲಿರುವ ಈ ಸಿನಿಮಾಗೆ ಸದ್ಯಕ್ಕೆ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಶೂಟಿಂಗ್ ಆರಂಭಿಸಲು ನಿರ್ದೇಶಕ ಪ್ರಶಾಂತ್​ ನೀಲ್​ ಅವರು ತಯಾರಿ ಮಾಡಿಕೊಂಡಿದ್ದಾರೆ. ಪ್ರಭಾಸ್​ ಅಭಿಮಾನಿಗಳು ‘ಸಲಾರ್​ 2’ ಬಗ್ಗೆ ಅಪ್​ಡೇಟ್​ ತಿಳಿಯಲು ಕಾಯುತ್ತಿದ್ದಾರೆ.

ಯಾವಾಗ ಶುರು ಆಗಲಿದೆ ‘ಸಲಾರ್​ 2’ ಶೂಟಿಂಗ್​? ಪ್ರಭಾಸ್​ ಫ್ಯಾನ್ಸ್​ಗೆ ಇಲ್ಲಿದೆ ಸಿಹಿ ಸುದ್ದಿ
ಪ್ರಭಾಸ್​, ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: May 01, 2024 | 10:51 PM

Share

ಸ್ಟಾರ್​ ನಿರ್ದೇಶಕ ಪ್ರಶಾಂತ್​ ನೀಲ್​ ಮತ್ತು ಪ್ಯಾನ್​ ಇಂಡಿಯಾ ನಟ ಪ್ರಭಾಸ್​ (Prabhas) ಅವರ ಕಾಂಬಿನೇಷನ್​​ನಲ್ಲಿ ಮೂಡಿಬಂದ ‘ಸಲಾರ್​: ಪಾರ್ಟ್​ 1 – ಸೀಸ್​ಫೈರ್​’ ಸಿನಿಮಾ 2023ರ ಡಿಸೆಂಬರ್​ 22ರಂದು ಬಿಡುಗಡೆ ಆಯಿತು. ಕರುನಾಡಿನಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ತೆಲುಗು ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದರು. ಈಗ ಈ ಸಿನಿಮಾದ 2ನೇ ಪಾರ್ಟ್​ಗಾಗಿ ಕಾಯುತ್ತಿದ್ದಾರೆ ಅಭಿಮಾನಿಗಳು. ಹಾಗಾದರೆ ‘ಸಲಾರ್​ 2’ (Salaar 2) ಶೂಟಿಂಗ್​ ಯಾವಾಗ ಶುರುವಾಗಲಿದೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಒಂದು ಗುಡ್​ ನ್ಯೂಸ್​ ಸಿಕ್ಕಿದೆ. ಮೇ ಅಂತ್ಯದಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲು ಪ್ರಶಾಂತ್​ ನೀಲ್​ (Prashanth Neel) ನಿರ್ಧರಿಸಿದ್ದಾರೆ ಎನ್ನಲಾಗಿದೆ.

‘ಸಲಾರ್​’ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆಗಳ ಆಧಾರದಲ್ಲಿ ‘ಸಲಾರ್ 2’ ಸಿನಿಮಾದ ಸ್ಕ್ರಿಪ್ಟ್​ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಪ್ರಶಾಂತ್​ ನೀಲ್​ ಮತ್ತು ಅವರ ತಂಡ ಇಷ್ಟು ದಿನ ಸಮಯ ತೆಗೆದುಕೊಂಡಿದೆ. ಈಗ ಶೂಟಿಂಗ್​ ಆರಂಭಿಸುವ ತಯಾರಿ ನಡೆದಿದೆ. ವರದಿಗಳ ಪ್ರಕಾರ, ಮೇ ತಿಂಗಳ ಕೊನೇ ವಾರದಲ್ಲಿ ಈ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಸಲಾರ್​ 2’ ಚಿತ್ರಕ್ಕೆ ಮೊದಲ ಹಂತವಾಗಿ 10 ದಿನಗಳ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಪ್ರಭಾಸ್​ ಮತ್ತು ಪೃಥ್ವಿರಾಜ್​ ಸುಕುಮಾರನ್​ ಅವರು ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಈ ವರ್ಷವೇ ‘ಸಲಾರ್​ 2’ ಚಿತ್ರದ ಬಹುತೇಕ ದೃಶ್ಯಗಳ ಶೂಟಿಂಗ್ ಮುಗಿಸಿಕೊಳ್ಳಲು ಪ್ಲ್ಯಾನ್​ ಮಾಡಲಾಗಿದೆ. ಹೈದರಾಬಾದ್​ ಹಾಗೂ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ: 35 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟ ಪ್ರಭಾಸ್​; ಯಾರಿಗೆ ಸಿಕ್ಕಿದೆ ಈ ಹಣ?

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ‘ಸಲಾರ್​ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗಲಿದೆ. 2025ರ ಡಿಸೆಂಬರ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ. ಎರಡನೇ ಪಾರ್ಟ್​ನಲ್ಲಿ ಪಾತ್ರವರ್ಗ ಹಿರಿದಾಗಲಿದೆ. ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾತರದಿಂದ ಕಾದಿದ್ದಾರೆ.

ಪ್ರಭಾಸ್​ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುವಲ್ಲಿ ಅವರು ತಡ ಮಾಡುತ್ತಿಲ್ಲ. ‘ಸಲಾರ್​ 2’, ‘ಕಲ್ಕಿ 2898 ಎಡಿ’, ‘ದಿ ರಾಜಾ ಸಾಬ್​’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ಈ ಎಲ್ಲ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ