Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

Krishnam Raju Funeral: ದೊಡ್ಡಪ್ಪನ ನಿಧನದಿಂದ ಪ್ರಭಾಸ್​ ಕಣ್ಣೀರು ಹಾಕುತ್ತಿದ್ದಾರೆ. ಈ ನೋವಿನ ಸಂದರ್ಭದಲ್ಲೂ ಅವರು ತಮ್ಮ ಅಭಿಮಾನಿಗಳ ಬಗ್ಗೆ ಕಾಳಜಿ ತೋರಿಸುವುದು ಮರೆತಿಲ್ಲ.

Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​
ಪ್ರಭಾಸ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 14, 2022 | 12:55 PM

ನಟ ಪ್ರಭಾಸ್​ (Prabhas) ಅವರ ಕುಟುಂಬದಲ್ಲಿ ದುಃಖ ಮನೆ ಮಾಡಿದೆ. ಇಡೀ ಫ್ಯಾಮಿಲಿಗೆ ಹಿರಿಯರಾಗಿದ್ದ ಪ್ರಭಾಸ್​ ದೊಡ್ಡಪ್ಪ ಕೃಷ್ಣಂ ರಾಜು (Krishnam Raju) ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಪ್ರಭಾಸ್​ ವೃತ್ತಿಜೀವನಕ್ಕೆ ಕೃಷ್ಣಂ ರಾಜು ಅವರು ಮಾರ್ಗದರ್ಶಕರಾಗಿದ್ದರು. ಹಾಗಾಗಿ ಅವರನ್ನು ಕಳೆದುಕೊಂಡಿದ್ದು ‘ಸಲಾರ್​’ ಹೀರೋಗೆ ತುಂಬಲಾರದ ನಷ್ಟ ಆಗಿದೆ. ತಮ್ಮೆಲ್ಲ ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ, ದೊಡ್ಡಪ್ಪನ ಅಂತ್ಯಕ್ರಿಯೆಯಲ್ಲಿ (Krishnam Raju Funeral) ಪ್ರಭಾಸ್​ ಭಾಗಿ ಆಗಿದ್ದಾರೆ. ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಕೃಷ್ಣಂ ರಾಜು ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇಂಥ ನೋವಿನ ಸಂದರ್ಭದಲ್ಲೂ ಪ್ರಭಾಸ್​ ಅವರು ತಮ್ಮ ಅಭಿಮಾನಿಗಳ ಕ್ಷೇಮದ ಬಗ್ಗೆ ಚಿಂತಿಸಿದ್ದಾರೆ. ಅಂತಿಮ ನಮನ ಸಲ್ಲಿಸಲು ಬಂದ ಎಲ್ಲ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಿಸುವ ಮೂಲಕ ಅವರು ದೊಡ್ಡತನ ಮೆರೆದಿದ್ದಾರೆ.

ಕೃಷ್ಣಂ ರಾಜು ಅವರು ನಟನಾಗಿ ಮಾತ್ರವಲ್ಲದೇ ರಾಜಕಾರಣಿ ಆಗಿಯೂ ಜನಮನ ಗೆದ್ದಿದ್ದರು. ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಅವರಿಗೆ ಅಭಿಮಾನಿಗಳಿದ್ದಾರೆ. ಆಂಧ್ರ ಮತ್ತು ತೆಲಂಗಾಣದ ದೂರದ ಊರುಗಳಿಂದ ಬಂದ ಅಪಾರ ಸಂಖ್ಯೆಯ ಅಭಿಮಾನಿಗಳು ಊಟಕ್ಕಾಗಿ ಕಷ್ಟಪಡಬಾರದು ಎಂಬ ಕಾರಣಕ್ಕೆ ಎಲ್ಲರಿಗೂ ಪ್ರಭಾಸ್​ ಅವರು ಆಹಾರದ ವ್ಯವಸ್ಥೆ ಮಾಡಿದ್ದಾರೆ. ಅವರ ಈ ಕಾಳಜಿಗೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ.

ಈ ಕುರಿತು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಿದ್ದಾರೆ. ‘ಅಭಿಮಾನಿಗಳು ಊಟ ಮಾಡಿಕೊಂಡು ಹೋಗಲಿ’ ಎಂದು ಪ್ರಭಾಸ್​ ಕುಟುಂಬದವರು ಹೇಳಿರುವ ವಿಡಿಯೋ ಕ್ಲಿಪ್​ ವೈರಲ್​ ಆಗಿದೆ. ‘ಈ ನೋವಿನ ಸಮಯದಲ್ಲಿ ನೀವು ಮತ್ತು ನಿಮ್ಮ ಕುಟುಂಬದವರು ಊಟ ಮಾಡಿರಲು ಸಾಧ್ಯವಿಲ್ಲ. ಹಾಗಿದ್ದರೂ ಕೂಡ ಅಭಿಮಾನಿಗಳ ಊಟದ ಬಗ್ಗೆ ಕಾಳಜಿ ತೋರಿಸಿದ್ದೀರಿ. ಈ ಮೂಲಕ ಜೀವಮಾನಕ್ಕೆ ಆಗುವಷ್ಟು ಪ್ರೀತಿಯನ್ನು ನೀವು ನೀಡಿದ್ದೀರಿ’ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ
Image
Prabhas: ರಾವಣನ ಪ್ರತಿಕೃತಿ ಸುಡಲು ಮುಂದಾದ ಪ್ರಭಾಸ್​; ಯಾಕೀ ನಿರ್ಧಾರ?
Image
Krisham Raju: ಪ್ರಭಾಸ್ ದೊಡ್ಡಪ್ಪ, ಟಾಲಿವುಡ್​ನ​ ರೆಬೆಲ್​ಸ್ಟಾರ್ ಕೃಷ್ಣಂರಾಜು ನಿಧನ
Image
Prabhas: ಭಾರತದಲ್ಲಿ ನೂರಾರು ಕೋಟಿ ರೂ. ಸಂಬಳ ಪಡೆದು ದುಬೈನಲ್ಲಿ ಬಿಸ್ನೆಸ್​ ಮಾಡುತ್ತಿರುವ ಪ್ರಭಾಸ್?

ಕೃಷ್ಣಂ ರಾಜು ಮತ್ತು ಪ್ರಭಾಸ್​ ಅವರ ನಡುವೆ ತುಂಬ ಆತ್ಮೀಯತೆ ಇತ್ತು. ಪ್ರಭಾಸ್​ ಮದುವೆಯನ್ನು ನೋಡಬೇಕು, ಪ್ರಭಾಸ್​ ಮಕ್ಕಳ ಜೊತೆ ತಾವು ನಟಿಸಬೇಕು ಎಂಬ ಆಸೆಯನ್ನು ಕೃಷ್ಣಂ ರಾಜು ಇಟ್ಟುಕೊಂಡಿದ್ದರು. ಆದರೆ ಅವರ ಆಸೆ ಈಡೇರುವುದಕ್ಕೂ ಮುನ್ನವೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ದೊಡ್ಡಪ್ಪನ ನಿಧನದಿಂದ ಪ್ರಭಾಸ್​ ಕಣ್ಣೀರು ಹಾಕುತ್ತಿದ್ದಾರೆ. ಅವರಿಗೆ ಎಲ್ಲರೂ ಸಮಾಧಾನ ಮಾಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಪ್ರಭಾಸ್​ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ