Prabhas Birthday: ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಪ್ರಭಾಸ್ ಒಟ್ಟೂ ಆಸ್ತಿ ಎಷ್ಟು?

ಪ್ರಭಾಸ್ ಅವರು ಹೈದರಾಬಾದ್​ನ ಜುಬ್ಲೀ ಹಿಲ್ಸ್​ನಲ್ಲಿ ದೊಡ್ಡ ಮನೆ ಹೊಂದಿದ್ದಾರೆ. ಇದರ ಬೆಲೆ 60 ಕೋಟಿ ರೂಪಾಯಿ ಎನ್ನಲಾಗಿದೆ. ಈ ಮನೆಯಲ್ಲಿ ಜಿಮ್, ಪೂಲ್, ಗಾರ್ಡನ್ ಸೇರಿ ಅನೇಕ ಸವಲತ್ತುಗಳು ಇವೆ. ಈ ಮನೆಯಲ್ಲಿರುವ ಜಿಮ್​ನಲ್ಲಿ ವಸ್ತುಗಳ ಬೆಲೆ 1.5 ಕೋಟಿ ರೂಪಾಯಿ ಎನ್ನಲಾಗಿದೆ.

Prabhas Birthday: ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಪ್ರಭಾಸ್ ಒಟ್ಟೂ ಆಸ್ತಿ ಎಷ್ಟು?
ಪ್ರಭಾಸ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Oct 23, 2024 | 7:45 AM

ನಟ ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಸಿನಿಮಾ ಮೂಲಕ ಈ ವರ್ಷ ಯಶಸ್ಸು ಕಂಡಿದ್ದಾರೆ. ಅವರು ‘ಬಾಹುಬಲಿ’ ಬಳಿಕ ಪ್ಯಾನ್ ಇಂಡಿ ಸ್ಟಾರ್ ಆದರು. ಅವರಿಗೆ ಇಂದು (ಅಕ್ಟೋಬರ್ 23) ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಅವರಿಗೆ ಸಿನಿಮಾ ಹಿಟ್ ಆದ ಖುಷಿ ಇದೆ. ಫ್ಯಾನ್ಸ್ ಕೂಡ ಬರ್ತ್​ಡೇನ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಅವರ ನೆಟ್​ವರ್ತ್​ ಬಗ್ಗೆ ಇಲ್ಲಿದೆ ಮಾಹಿತಿ.

2002ರಲ್ಲಿ ‘ಈಶ್ವರ’ ಚಿತ್ರದ ಮೂಲಕ ಪ್ರಭಾಸ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರು ಹೆಚ್ಚು ತೊಡಗಿಕೊಂಡಿದ್ದು ತೆಲುಗಿನಲ್ಲೇ. ಎಸ್​.ಎಸ್ ರಾಜಮೌಳಿ ನಿರ್ದೇಶನ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತು. ಅವರ ನೆಟ್​ವರ್ತ್​ ಬಗ್ಗೆ ಇಲ್ಲಿದೆ ವಿವರ.

ಉಪ್ಪಳಪತಿ ವೆಂಕಟ ಸೂರ್ಯನಾರಾಯಣ ಪ್ರಭಾಸ್ ರಾಜು ಅನ್ನೋದು ಪ್ರಭಾಸ್ ಅವರ ಮೂಲ ಹೆಸರು. ಅವರು ಜನಿಸಿದ್ದು 1979ರ ಅಕ್ಟೋಬರ್ 23ರಂದು. ಅವರು ಆಸ್ತಿ 241 ಕೋಟಿ ರೂಪಾಯಿಗೂ ಅಧಿಕವಾಗಿದೆ. ಅವರು ಪ್ರತಿ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಚಾರ್ಜ್ ಮಾಡುತ್ತಾರೆ. ‘ಬಾಹುಬಲಿ’ ಚಿತ್ರಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದರು. ಅವರು ‘ಕಲ್ಕಿ 2898 ಎಡಿ’ ಚಿತ್ರಕ್ಕೆ 80 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ.

ಪ್ರಭಾಸ್ ಅವರು ಹೈದರಾಬಾದ್​ನ ಜುಬ್ಲೀ ಹಿಲ್ಸ್​ನಲ್ಲಿ ದೊಡ್ಡ ಮನೆ ಹೊಂದಿದ್ದಾರೆ. ಇದರ ಬೆಲೆ 60 ಕೋಟಿ ರೂಪಾಯಿ ಎನ್ನಲಾಗಿದೆ. ಈ ಮನೆಯಲ್ಲಿ ಜಿಮ್, ಪೂಲ್, ಗಾರ್ಡನ್ ಸೇರಿ ಅನೇಕ ಸವಲತ್ತುಗಳು ಇವೆ. ಈ ಮನೆಯಲ್ಲಿರುವ ಜಿಮ್​ನಲ್ಲಿ ವಸ್ತುಗಳ ಬೆಲೆ 1.5 ಕೋಟಿ ರೂಪಾಯಿ ಎನ್ನಲಾಗಿದೆ. ಪ್ರಭಾಸ್ ಅವರು ಮುಂಬೈನಲ್ಲೂ ಮನೆ ಹೊಂದಿದ್ದಾರೆ. ಅವರಿಗೆ ಇಟಲಿಯಲ್ಲಿ ವಿಲ್ಲಾ ಹೊಂದಿದ್ದು 40 ಲಕ್ಷ ರೂಪಾಯಿ ಬಾಡಿಗೆ ಪಡೆಯುತ್ತಾರೆ.

ಪ್ರಭಾಸ್​ಗೆ ಕಾರ್ ಕಲೆಕ್ಷನ್ ಬಗ್ಗೆ ವಿಶೇಷ ಪ್ರೀತಿ ಇದೆ. 1 ಕೋಟಿ ರೂಪಾಯಿಯ ರೇಂಜ್​ ರೋವರ್ ಸ್ಪೋರ್ಟ್ಸ್​​, ಆಡಿ ಎ6, ಬಿಎಂಡಬ್ಲ್ಯೂ 7 ಸೀರಿಸ್, ಜಾಗ್ವಾರ್, ರೋಲ್ಸ್ ರಾಯ್ಸ್ ಪ್ಯಾಂಟಮ್ ಕಾರುಗಳು ಅವರ ಬಳಿ ಇವೆ.

ಇದನ್ನೂ ಓದಿ: ಈ ಪ್ರಾಪರ್ಟಿಯಿಂದ ಪ್ರಭಾಸ್​ಗೆ ತಿಂಗಳಿಗೆ ಬರುತ್ತೆ 40 ಲಕ್ಷ ರೂಪಾಯಿ ಬಾಡಿಗೆ

ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ಸದ್ಯ ‘ರಾಜಾ ಸಾಬ್’ ಹಾಗೂ ‘ಸ್ಪಿರಿಟ್’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ವರ್ಷಕ್ಕೆ 2-3 ಚಿತ್ರಗಳನ್ನು ರಿಲೀಸ್ ಮಾಡೋ ಟಾರ್ಗೆಟ್​ನ ಅವರು ಇಟ್ಟುಕೊಂಡಿದ್ದಾರೆ. ‘ರಾಜಾ ಸಾಬ್’ ಚಿತ್ರದ ಅಪ್​ಡೇಟ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:43 am, Wed, 23 October 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ