AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಅವರು ಮೊಸಳೆಯ ಜೊತೆ ಫೈಟಿಂಗ್ ಮಾಡುವ ಸನ್ನಿವೇಶ ಇದೆ. ಆ ದೃಶ್ಯವನ್ನು ಎಂಜಾಯ್ ಮಾಡಲು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ಹೊತ್ತು ತಂದಿದ್ದಾರೆ.

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ
Prabhas Fans
ಮದನ್​ ಕುಮಾರ್​
|

Updated on: Jan 09, 2026 | 5:32 PM

Share

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ.

‘ದಿ ರಾಜಾ ಸಾಬ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮೊಸಳೆಯ ಜೊತೆ ಫೈಟ್ ಮಾಡುವ ದೃಶ್ಯ ಇದೆ. ಅದನ್ನು ಚಿತ್ರಮಂದಿರದಲ್ಲಿ ಜನರು ಎಂಜಾಯ್ ಮಾಡುತ್ತಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಟ್ರೇಲರ್​​ನಲ್ಲಿ ಕೂಡ ಮೊಸಳೆ ಫೈಟ್ ಹೈಲೈಟ್ ಆಗಿತ್ತು. ಆ ದೃಶ್ಯವನ್ನು ಚಿತ್ರಮಂದಿರದಲ್ಲಿ ಮರುಸೃಷ್ಟಿ ಮಾಡಲು ಅಭಿಮಾನಿಗಳು ನಕಲಿ ಮೊಸಳೆಯನ್ನು ಹೊತ್ತುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ.

ಚಿತ್ರಮಂದಿರದಲ್ಲಿ ಪ್ರಭಾಸ್ ಅಭಿಮಾನಿಗಳು ಎಂಜಾಯ್ ಮಾಡುತ್ತಿದ್ದಾರೆ. ಮೊಸಳೆಯನ್ನು ಹೊತ್ತುಕೊಂಡು ಪ್ರಭಾಸ್ ಅವರಿಗೆ ಜೈಕಾರ ಹಾಕಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪ್ರಭಾಸ್ ಬಗ್ಗೆ ಅಭಿಮಾನಿಗಳಿಗೆ ಇರುವ ಕ್ರೇಜ್ ಎಂಥದ್ದು ಎಂಬುದಕ್ಕೆ ಇದೇ ಸಾಕ್ಷಿ. ಅಲ್ಲದೇ, ಇತ್ತೀಚಿನ ದಿನಗಳಲ್ಲಿ ವೈರಲ್ ಆಗಬೇಕು ಎಂಬ ಉದ್ದೇಶದಿಂದಲೇ ಈ ರೀತಿ ಮಾಡುವವರ ಸಂಖ್ಯೆ ಜಾಸ್ತಿ ಆಗಿದೆ.

ನೂರಾರು ಕೋಟಿ ರೂಪಾಯಿ ಬಜೆಟ್​​ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ನಿರ್ಮಾಣ ಆಗಿದೆ. ಸಂಕ್ರಾಂತಿ ಪ್ರಯುಕ್ತ ಇಂದು (ಜನವರಿ 9) ಈ ಸಿನಿಮಾವನ್ನು ರಿಲೀಸ್ ಮಾಡಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆಕಂಡಿದೆ. ಅತ್ತ, ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಗದೇ ಬಿಡುಗಡೆ ರದ್ದಾಗಿದೆ. ಅದರಿಂದಾಗಿ ‘ದಿ ರಾಜಾ ಸಾಬ್’ ಸಿನಿಮಾಗೆ ಪೈಪೋಟಿ ಕಡಿಮೆ ಆಗಿದೆ.

ಇದನ್ನೂ ಓದಿ: ‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ

ಮಾರುತಿ ಅವರು ‘ದಿ ರಾಜಾ ಸಾಬ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ಜೊತೆ ಸಂಜಯ್ ದತ್, ಬೋಮನ್ ಇರಾನಿ, ನಿಧಿ ಅಗರ್​ವಾಲ್, ಮಾಳವಿಕಾ ಮೋಹನನ್, ರಿದ್ಧಿ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಆದರೆ ಮೊದಲ ದಿನ ಸಿನಿಮಾ ನೋಡಿದವರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ