
ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ.
‘ದಿ ರಾಜಾ ಸಾಬ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮೊಸಳೆಯ ಜೊತೆ ಫೈಟ್ ಮಾಡುವ ದೃಶ್ಯ ಇದೆ. ಅದನ್ನು ಚಿತ್ರಮಂದಿರದಲ್ಲಿ ಜನರು ಎಂಜಾಯ್ ಮಾಡುತ್ತಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ಕೂಡ ಮೊಸಳೆ ಫೈಟ್ ಹೈಲೈಟ್ ಆಗಿತ್ತು. ಆ ದೃಶ್ಯವನ್ನು ಚಿತ್ರಮಂದಿರದಲ್ಲಿ ಮರುಸೃಷ್ಟಿ ಮಾಡಲು ಅಭಿಮಾನಿಗಳು ನಕಲಿ ಮೊಸಳೆಯನ್ನು ಹೊತ್ತುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ.
Crocodile Festival Beings ❤️🔥🐊🦖#Prabhas #TheRajaasaab pic.twitter.com/hWutARTkyy
— 𝗚𝗮𝗻𝗶🦖 (@PalledaG52898) January 8, 2026
ಚಿತ್ರಮಂದಿರದಲ್ಲಿ ಪ್ರಭಾಸ್ ಅಭಿಮಾನಿಗಳು ಎಂಜಾಯ್ ಮಾಡುತ್ತಿದ್ದಾರೆ. ಮೊಸಳೆಯನ್ನು ಹೊತ್ತುಕೊಂಡು ಪ್ರಭಾಸ್ ಅವರಿಗೆ ಜೈಕಾರ ಹಾಕಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪ್ರಭಾಸ್ ಬಗ್ಗೆ ಅಭಿಮಾನಿಗಳಿಗೆ ಇರುವ ಕ್ರೇಜ್ ಎಂಥದ್ದು ಎಂಬುದಕ್ಕೆ ಇದೇ ಸಾಕ್ಷಿ. ಅಲ್ಲದೇ, ಇತ್ತೀಚಿನ ದಿನಗಳಲ್ಲಿ ವೈರಲ್ ಆಗಬೇಕು ಎಂಬ ಉದ್ದೇಶದಿಂದಲೇ ಈ ರೀತಿ ಮಾಡುವವರ ಸಂಖ್ಯೆ ಜಾಸ್ತಿ ಆಗಿದೆ.
Omg 😱 see the Rebels bring crocodile 🐊 to #RajaSaab movie theatres 🥵🔥💥#Prabhas 🔥🔥🥵 pic.twitter.com/4FuA3V1UdP
— ℙℝ𝔼𝔼𝕋𝕐 (@MySelf_Preety) January 8, 2026
ನೂರಾರು ಕೋಟಿ ರೂಪಾಯಿ ಬಜೆಟ್ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ನಿರ್ಮಾಣ ಆಗಿದೆ. ಸಂಕ್ರಾಂತಿ ಪ್ರಯುಕ್ತ ಇಂದು (ಜನವರಿ 9) ಈ ಸಿನಿಮಾವನ್ನು ರಿಲೀಸ್ ಮಾಡಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆಕಂಡಿದೆ. ಅತ್ತ, ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಗದೇ ಬಿಡುಗಡೆ ರದ್ದಾಗಿದೆ. ಅದರಿಂದಾಗಿ ‘ದಿ ರಾಜಾ ಸಾಬ್’ ಸಿನಿಮಾಗೆ ಪೈಪೋಟಿ ಕಡಿಮೆ ಆಗಿದೆ.
ಇದನ್ನೂ ಓದಿ: ‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ
ಮಾರುತಿ ಅವರು ‘ದಿ ರಾಜಾ ಸಾಬ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ಜೊತೆ ಸಂಜಯ್ ದತ್, ಬೋಮನ್ ಇರಾನಿ, ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್, ರಿದ್ಧಿ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಆದರೆ ಮೊದಲ ದಿನ ಸಿನಿಮಾ ನೋಡಿದವರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.