ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ದೇಶಾದ್ಯಂತ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಸಾಕ್ಷಿ ಸಿಕ್ಕಿದೆ. ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಪ್ರಭಾಸ್ ಅವರ ಜನ್ಮದಿನವನ್ನು ಆಚರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು
ಪ್ರಭಾಸ್ ಫ್ಯಾನ್ಸ್​

Updated on: Oct 21, 2024 | 7:21 PM

ನಟ ಪ್ರಭಾಸ್ ಅವರು ಅಭಿಮಾನಿಗಳ ಪಾಲಿನ ಡಾರ್ಲಿಂಗ್. ‘ಬಾಹುಬಲಿ’ ಸಿನಿಮಾ ಸೂಪರ್​ ಹಿಟ್ ಆದ ಬಳಿಕ ಅವರ ಹವಾ ಹೆಚ್ಚಾಯಿತು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಗುರುತಿಸಿಕೊಂಡರು. ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಅಕ್ಟೋಬರ್​ 23ರಂದು ಪ್ರಭಾಸ್ ಅವರ ಜನ್ಮದಿನ. ಈ ಬಾರಿ ಅದ್ದೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾದಿದ್ದಾರೆ. ವಿಶೇಷ ಏನೆಂದರೆ, ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.

ಹೌದು, ಜಪಾನ್​ನಲ್ಲೂ ಪ್ರಭಾಸ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅಲ್ಲಿನ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳು ‘ರಾಧೆ ಶ್ಯಾಮ್’ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಪ್ರಭಾಸ್​ಗೆ ಹ್ಯಾಪಿ ಬರ್ತ್​ಡೇ ಎಂದು ವಿಶ್ ಮಾಡಿದ್ದಾರೆ. ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟೋಕಿಯಾದಿಂದ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರಭಾಸ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕು.

ಪ್ರಭಾಸ್​ ಅವರಿಗೆ ಈ ವರ್ಷದ ಬರ್ತ್​ಡೇ ತುಂಬ ಸ್ಪೆಷಲ್. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್​ ಹಿಟ್ ಆಗಿದೆ. ‘ಬಾಹುಬಲಿ’ ಬಳಿಕ ಸತತ ಸೋಲು ಕಂಡಿದ್ದ ಅವರು ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಅವರ ಮುಂದಿನ ಸಿನಿಮಾಗಳ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬರ್ತ್​ಡೇಗೂ ಮುಂಚಿತವಾಗಿ ಈ ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದಲ್ಲದೇ ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಲಿರುವ ‘ಸ್ಪಿರಿಟ್’ ಸಿನಿಮಾದಲ್ಲೂ ಪ್ರಭಾಸ್ ನಟಿಸಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾ ಬಗ್ಗೆಯೂ ಏನಾದರೂ ಅಪ್​ಡೇಟ್​ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us