Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ರಾಜಾ ಸಾಬ್’ ನಿರ್ದೇಶಕನ ಮೇಲೆ ಪ್ರಭಾಸ್ ಅಭಿಮಾನಿಗಳ ಆಕ್ರೋಶ

Prabhas: ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕಳೆದ ವರ್ಷ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಈ ವರ್ಷ ಜನವರಿಯಲ್ಲಿ ಪ್ರಭಾಸ್ ನಟನೆಯ ಹೊಸ ಸಿನಿಮಾ ‘ದಿ ರಾಜಾ ಸಾಬ್’ ಬಿಡುಗಡೆ ಆಗಬೇಕಿತ್ತು, ಆದರೆ ಈ ವರೆಗೆ ಆಗಿಲ್ಲ. ಈಗ ಸಿನಿಮಾದ ನಿರ್ದೇಶಕ ಮಾರುತಿ, ಬಿಡುಗಡೆಗೆ ಇನ್ನಷ್ಟು ಸಮಯ ಕೇಳಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

‘ದಿ ರಾಜಾ ಸಾಬ್’ ನಿರ್ದೇಶಕನ ಮೇಲೆ ಪ್ರಭಾಸ್ ಅಭಿಮಾನಿಗಳ ಆಕ್ರೋಶ
Prabhas Maruthi
Follow us
ಮಂಜುನಾಥ ಸಿ.
|

Updated on: Apr 08, 2025 | 4:08 PM

ಪ್ರಭಾಸ್ (Prabhas) ನಟನೆಯ ಸಾಲು-ಸಾಲು ಸಿನಿಮಾಗಳು ಚಿತ್ರೀಕರಣದ ಹಂತದಲ್ಲಿವೆ. ಬಿಡುವೇ ಇರದಂತೆ ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ ಪ್ರಭಾಸ್. ಅದೂ ಒಂದಕ್ಕಿಂತಲೂ ಒಂದು ಭಿನ್ನವಾದ ಕತೆಗಳಲ್ಲಿ ಪಾತ್ರಗಳಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಕಳೆದ ವರ್ಷ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಅಸಲಿಗೆ ಈ ವರ್ಷದ ಆರಂಭದಲ್ಲಿಯೇ ಪ್ರಭಾಸ್ ನಟನೆಯ ಹೊಸ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ನಿರ್ದೇಶಕನ ಕಾರಣದಿಂದಾಗಿ ಆ ಸಿನಿಮಾ ತಡವಾಗಿದೆ ಎನ್ನಲಾಗುತ್ತಿದ್ದು, ಇದೀಗ ಪ್ರಭಾಸ್ ಅಭಿಮಾನಿಗಳು ನಿರ್ದೇಶಕನ ಮೇಲೆ ಅಸಮಾಧಾನ ಹೊರಹಾಕುತ್ತಿದ್ದಾರೆ.

ಪ್ರಭಾಸ್ ‘ದಿ ರಾಜಾ ಸಾಬ್’ ಹೆಸರಿನ ಹಾರರ್ ಆಕ್ಷನ್-ಕಾಮಿಡಿ ಸಿನಿಮಾದಲ್ಲಿ ನಟಿಸಿದ್ದಾರೆ. ಬಹಳ ವರ್ಷಗಳ ಬಳಿಕ ಪ್ರಭಾಸ್ ಇಂಥಹದ್ದೊಂದು ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭಾಸ್ ಅಭಿಮಾನಿಗಳು ಸಹ ಕಾಮಿಡಿ ಅವತಾರದಲ್ಲಿ ಪ್ರಭಾಸ್ ಅನ್ನು ಕಾಣಲು ಉತ್ಸುಕರಾಗಿದ್ದರು. ಈ ಸಿನಿಮಾ ಕಳೆದ ಡಿಸೆಂಬರ್ ಅಥವಾ ಈ ವರ್ಷದ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಈ ವರೆಗೂ ಬಿಡುಗಡೆ ಆಗಿಲ್ಲ. ಈಗ ಮತ್ತೆ ‘ದಿ ರಾಜಾ ಸಾಬ್’ ಸಿನಿಮಾದ ಬಿಡುಗಡೆ ಇನ್ನಷ್ಟು ಮುಂದೆ ಹೋಗಿದ್ದು, ‘ನಮಗೆ ಇನ್ನಷ್ಟು ಸಮಯ ಕೊಡಿ’ ಎಂದು ನಿರ್ದೇಶಕ ಮಾರುತಿ ಕೇಳಿರುವುದು ಪ್ರಭಾಸ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

‘ದಿ ರಾಜಾ ಸಾಬ್’ ಸಿನಿಮಾದ ಚಿತ್ರೀಕರಣ ಮುಗಿದು ಕೆಲವು ತಿಂಗಳುಗಳೇ ಆಗಿವೆ. ಆದರೆ ಈ ಸಿನಿಮಾ ಹಾರರ್ ಕತೆ ಹೊಂದಿದ್ದು ಸಾಕಷ್ಟು ವಿಎಫ್​ಎಕ್ಸ್ ಶಾಟ್​ಗಳು, ಗ್ರಾಫಿಕ್ಸ್ ದೃಶ್ಯಗಳು ಸಿನಿಮಾದಲ್ಲಿವೆ. ಮೊದಲಿಗೆ ಚಿತ್ರೀಕರಣ ಮಾಡಿದ್ದ ದೃಶ್ಯಗಳು ಸೂಕ್ತವಾಗಿಲ್ಲವೆಂದು ಕೆಲ ದೃಶ್ಯಗಳ ಮರುಚಿತ್ರೀಕರಣ ಸಹ ಮಾಡಲಾಗಿದೆಯಂತೆ. ದೃಶ್ಯಗಳನ್ನು ಕರೆಕ್ಟ್ ಮಾಡಲು ತುಸು ಹೆಚ್ಚಾಗಿ ಸಮಯ ತೆಗೆದುಕೊಳ್ಳುತ್ತಿದ್ದಾರೆ ಮಾರುತಿ. ಇದೇ ಕಾರಣಕ್ಕೆ ಪ್ರಭಾಸ್ ಅಭಿಮಾನಿಗಳಲ್ಲಿ ಬೇಡಿಕೆ ಸಹ ಇಟ್ಟಿದ್ದಾರೆ.

ಇದನ್ನೂ ಓದಿ:ಪ್ರಭಾಸ್ ಪಿಆರ್​ಓ ವಿರುದ್ಧ ಪೊಲೀಸ್ ದೂರು ದಾಖಲು, ಕಾರಣವೇನು?

ಪ್ರಭಾಸ್ ಇತ್ತೀಚೆಗೆ ನಟಿಸಿದ್ದ ‘ಆದಿಪುರುಷ್’ ಸಿನಿಮಾದ ವಿಎಫ್​ಎಕ್ಸ್ ತೀವ್ರ ಟೀಕೆಗೆ ಒಳಗಾಗಿತ್ತು. ಇದು ಪ್ರಭಾಸ್​ಗೆ ಸಹ ಬೇಸರವಾಗಿತ್ತು. ಹಾಗಾಗಿ ಪ್ರಭಾಸ್ ಅವರೇ ‘ದಿ ರಾಜಾ ಸಾಬ್’ ಸಿನಿಮಾದ ವಿಎಫ್​ಎಕ್ಸ್ ಅತ್ಯುತ್ತಮ ಗುಣಮಟ್ಟದಲ್ಲಿರಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ತಡವಾಗುತ್ತಿದೆಯಂತೆ. ಸಿನಿಮಾದ ಒಂದು ಟೀಸರ್ ಮಾತ್ರವೇ ಈ ವರೆಗೆ ಬಿಡುಗಡೆ ಆಗಿದ್ದು, ದ್ವಿಪಾತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ.

‘ದಿ ರಾಜಾ ಸಾಬ್’ ಸಿನಿಮಾದ ಚಿತ್ರೀಕರಣ ಮುಗಿಸಿರುವ ನಟ ಪ್ರಭಾಸ್ ಇದೀಗ ರಘು ಹನುಪುಡಿ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ‘ಫೌಜಿ’ ಎಂದು ಹೆಸರಿಡಲಾಗಿದೆ. ಸಿನಿಮಾದಲ್ಲಿ ಅಮೆರಿಕದಲ್ಲಿ ನೆಲೆಸಿರುವ ಪಾಕಿಸ್ತಾನಿ ಚೆಲುವೆ ನಾಯಕಿ. ಅದಾದ ಬಳಿಕ ‘ಕಲ್ಕಿ 2’ ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್ ಭಾಗಿ ಆಗಲಿದ್ದಾರೆ. ಆ ಸಿನಿಮಾದ ಚಿತ್ರೀಕರಣ ಇದೇ ವರ್ಷದ ಅಂತ್ಯಕ್ಕೆ ಪ್ರಾರಂಭ ಆಗಲಿದೆ. ಆ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಅದರ ನಂತರ ‘ಸಲಾರ್ 2’ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಪ್ರಶಾಂತ್ ವರ್ಮಾ ನಿರ್ದೇಶಿಸಿ, ಹೊಂಬಾಳೆ ನಿರ್ಮಾಣ ಮಾಡಲಿರುವ ಸೂಪರ್ ಹೀರೋ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ