AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಸೀತಾ ರಾಮಂ’ ಡೈರೆಕ್ಟರ್​ ಜೊತೆ ಪ್ರಭಾಸ್​ ಹೊಸ ಚಿತ್ರ?  ವೃತ್ತಿಬದುಕಿನ ಸ್ಪೀಡ್​ ಹೆಚ್ಚಿಸಿದ ಸ್ಟಾರ್​ ನಟ

Prabhas Next Movie: ನಿರ್ದೇಶಕ ಹನು ರಾಘವಪುಡಿ ಅವರಿಗೆ ಈಗ ಡಿಮ್ಯಾಂಡ್​ ಹೆಚ್ಚಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ಪ್ರಭಾಸ್​ ಆಸಕ್ತಿ ತೋರಿಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

Prabhas: ‘ಸೀತಾ ರಾಮಂ’ ಡೈರೆಕ್ಟರ್​ ಜೊತೆ ಪ್ರಭಾಸ್​ ಹೊಸ ಚಿತ್ರ?  ವೃತ್ತಿಬದುಕಿನ ಸ್ಪೀಡ್​ ಹೆಚ್ಚಿಸಿದ ಸ್ಟಾರ್​ ನಟ
ಪ್ರಭಾಸ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 13, 2023 | 8:00 AM

Share

ಟಾಲಿವುಡ್​ನ ಸ್ಟಾರ್ ನಟ ಪ್ರಭಾಸ್​ (Prabhas) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಚಿತ್ರಕ್ಕಾಗಿ ಅವರು ಹಲವು ವರ್ಷಗಳನ್ನು ಅವರು ಮೀಸಲಿಟ್ಟಿದ್ದರು. ಅದಕ್ಕೆ ತಕ್ಕ ಪ್ರತಿಫಲ ಅವರಿಗೆ ಸಿಕ್ಕಿತು. ಆದರೆ ಆ ಸಿನಿಮಾದ ಯಶಸ್ಸಿನ ಬಳಿಕ ಪ್ರಭಾಸ್​ ಅವರು ದೊಡ್ಡ ಗೆಲುವು ಕಾಣಲೇ ಇಲ್ಲ. ಹಾಗಾಗಿ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಸದ್ಯ ಅವರು ಹಲವು ನಿರ್ದೇಶಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಅವರು ‘ಸೀತಾ ರಾಮಂ’ (Sita Ramam) ಸಿನಿಮಾದ ನಿರ್ದೇಶಕ ಹನು ರಾಘವಪುಡಿ (Hanu Raghavapudi) ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ. ಈ ನಟ-ನಿರ್ದೇಶಕರು ಈಗಾಗಲೇ ಭೇಟಿ ಮಾಡಿದ್ದು ಶೀಘ್ರವೇ ಈ ಬಗ್ಗೆ ಘೋಷಣೆ ಆಗಬಹುದು ಎಂದು ಹೇಳಲಾಗುತ್ತಿದೆ.

ನಿರ್ದೇಶಕ ಹನು ರಾಘವಪುಡಿ ಅವರು ‘ಸೀತಾ ರಾಮಂ’ ಸಿನಿಮಾದಿಂದ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ದುಲ್ಕರ್​ ಸಲ್ಮಾನ್​, ಮೃಣಾಲ್​ ಠಾಕೂರ್​, ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆ ನಿಭಾಯಿಸಿದ್ದ ಆ ಸಿನಿಮಾಗೆ ಪ್ರೇಕ್ಷಕರು ಮನ ಸೋತರು. ಆ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ಹನು ರಾಘವಪುಡಿ ಅವರಿಗೆ ಡಿಮ್ಯಾಂಡ್​ ಹೆಚ್ಚಿತು. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ಪ್ರಭಾಸ್​ ಅವರು ಆಸಕ್ತಿ ತೋರಿಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ: Adipurush Trailer: ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ: ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಜೂನ್​ 16ರಂದು ಈ ಚಿತ್ರ ಅದ್ದೂರಿಯಾಗಿ ತೆರೆಕಾಣಲಿದೆ. ಅದರ ಪ್ರಚಾರ ಕಾರ್ಯದಲ್ಲಿ ಪ್ರಭಾಸ್​ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆಷ್ಟೇ ಬಿಡುಗಡೆ ಆಗಿರುವ ಟ್ರೇಲರ್​ ಸಖತ್​ ಸದ್ದು ಮಾಡಿದೆ. ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಮೋಷನ್​ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಇದನ್ನೂ ಓದಿ: ನಿಕ್ ನೇಮ್​ನಿಂದ ಪ್ರಭಾಸ್​ನ ಕರೆದ ಅನುಷ್ಕಾ ಶೆಟ್ಟಿ; ನಟಿ ಪ್ರೀತಿಯಿಂದ ಇಟ್ಟ ಹೆಸರೇನು?

‘ಆದಿಪುರುಷ್​’ ಸಿನಿಮಾದ ಪ್ರಮೋಷನ್​ ಜೊತೆಜೊತೆಯಲ್ಲೇ ಪ್ರಭಾಸ್​ ಅವರು ‘ಸಲಾರ್​’ ಮತ್ತು ‘ಪ್ರಾಜೆಕ್ಟ್​ ಕೆ’ ಚಿತ್ರದ ಕೆಲಸಗಳಲ್ಲಿ ಭಾಗಿ ಆಗಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಬಿಡುಗಡೆ ಆಗಲಿವೆ. ಈ ನಡುವೆ ಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುವತ್ತಲೂ ಅವರು ಗಮನ ಹರಿಸಿದ್ದಾರೆ. ನಿರ್ದೇಶಕ ಮಾರುತಿ ಜೊತೆಗೂ ಅವರೊಂದು ಸಿನಿಮಾ ಮಾಡುತ್ತಿದ್ದಾರೆ. ಇನ್ನೂ ಕೆಲವು ಸಿನಿಮಾಗಳಿಗೆ ಗ್ರೀನ್​ ಸಿಗ್ನಲ್​ ಸಿಗುವುದು ಬಾಕಿ ಇದೆ.

ಹನು ರಾಘವಪುಡಿ ಜೊತೆ ಪ್ರಭಾಸ್​ ಮಾಡಲಿರುವ ಸಿನಿಮಾ ದೊಡ್ಡ ಮಟ್ಟದಲ್ಲಿ ಸಿದ್ಧವಾಗಲಿದೆ. ವೈಜಯಂತಿ ಮೂವೀಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣವಾಗಲಿದೆ ಎಂಬ ಮಾಹಿತಿ ಕೇಳಿಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!