ಪ್ರಭಾಸ್​ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ, ಚಿತ್ರೀಕರಣದಿಂದ ಬ್ರೇಕ್

Prabhas: ಸತತ ಮೂರು ಸಿನಿಮಾಗಳ ಚಿತ್ರೀಕರಣ ಮಾಡಿರುವ ಪ್ರಭಾಸ್ ಬ್ಯುಸಿ ಶೆಡ್ಯೂಲ್, ಸತತ ಓಡಾಟ, ಸತತ ವ್ಯಾಯಾಮಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಪ್ರಭಾಸ್​ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ, ಚಿತ್ರೀಕರಣದಿಂದ ಬ್ರೇಕ್
ಪ್ರಭಾಸ್
Follow us
ಮಂಜುನಾಥ ಸಿ.
|

Updated on: Aug 13, 2023 | 3:43 PM

ಪ್ರಭಾಸ್ (Prabhas) ಚಿತ್ರರಂಗಕ್ಕೆ ಬಂದು 20 ವರ್ಷಕ್ಕೂ ಮೇಲಾಯ್ತು. ಆದರೆ ಈವರೆಗೆ ನಟಿಸಿರುವುದು 21 ಸಿನಿಮಾಗಳಲ್ಲಿ ಮಾತ್ರ. ವರ್ಷಕ್ಕೆ ಒಂದೇ ಸಿನಿಮಾ ಎಂಬ ನಿಯಮವನ್ನು ಹೇರಿಕೊಂಡು ಅದನ್ನು ಇಷ್ಟು ವರ್ಷ ಪಾಲಿಸಿಕೊಂಡೇ ಬಂದಿದ್ದಾರೆ ಪ್ರಭಾಸ್. ಅವರ ಇಪ್ಪತ್ತೊಂದು ವರ್ಷ ಸಿನಿಮಾ ಜೀವನದಲ್ಲಿ ವರ್ಷಕ್ಕೆ ಎರಡು ಸಿನಿಮಾ ಬಿಡುಗಡೆ ಆಗಿರುವುದು ಒಂದು ಬಾರಿ ಅಷ್ಟೆ. ಆದರೆ ಇತ್ತೀಚೆಗೆ ಪ್ರಭಾಸ್ ಒಂದೇ ಸಮಯದಲ್ಲಿ ಎರಡು-ಮೂರು ಸಿನಿಮಾಗಳಲ್ಲಿ ಒಟ್ಟೊಟ್ಟಿಗೆ ನಟಿಸಿದ್ದರು. ತೀರ ಹೆಕ್ಟಿಕ್ ಆದ ಶೆಡ್ಯೂಲ್​ಗಳಲ್ಲಿ ಪ್ರಭಾಸ್ ಕೆಲಸ ಮಾಡಿದರು. ಇದರಿಂದಾಗಿ ಕೆಲವು ಆರೋಗ್ಯ ಸಮಸ್ಯೆಗಳನ್ನು ಪ್ರಭಾಸ್ ಎದುರಿಸುತ್ತಿದ್ದು, ಇದೀಗ ಸಿನಿಮಾ ಚಿತ್ರೀಕರಣದಿಂದ (Shooting) ದೊಡ್ಡ ಬ್ರೇಕ್ ಪಡೆಯಲು ಮುಂದಾಗಿದ್ದಾರೆ.

‘ಆದಿಪುರುಷ್’ ಮುಗಿಸಿ ಸಿನಿಮಾ ಬಿಡುಗಡೆ ಮಾಡಿ, ‘ಸಲಾರ್’ ಸಿನಿಮಾದ ಚಿತ್ರೀಕರಣ ಮುಗಿಸಿರುವ ಪ್ರಭಾಸ್, ‘ಕಲ್ಕಿ 2898’ ಸಿನಿಮಾದ ಚಿತ್ರೀಕರಣವನ್ನು ಬಹುಮಟ್ಟಿಗೆ ಮುಗಿಸಿರುವ ಪ್ರಭಾಸ್ ಈ ವರ್ಷಾಂತ್ಯಕ್ಕೆ ಚಿತ್ರೀಕರಣದಿಂದ ದೊಡ್ಡ ಬ್ರೇಕ್ ಪಡೆಯಲು ಮುಂದಾಗಿದ್ದಾರೆ. ಪ್ರಭಾಸ್​ರ ಹದಗೆಟ್ಟಿರುವ ಆರೋಗ್ಯವೇ ಈ ಬ್ರೇಕ್ ಪಡೆಯಲು ಕಾರಣ.

ಸತತ ಶೂಟಿಂಗ್​, ವ್ಯಾಯಾಮ ಇನ್ನಿತರೆಗಳಿಂದಾಗಿ ಪ್ರಭಾಸ್​ಗೆ ಮೊಣಕಾಲು ನೋವು ಶುರುವಾಗಿದ್ದು, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಆಪರೇಷನ್​ಗೆ ಒಳಗಾಗಲಿದ್ದಾರೆ. ಡಿಸೆಂಬರ್ ವೇಳೆಗೆ ‘ಕಲ್ಕಿ 2898’ ಸಿನಿಮಾದ ಸಂಪೂರ್ಣ ಚಿತ್ರೀಕರಣ ಮುಗಿಸಲಿರುವ ಪ್ರಭಾಸ್ ಆ ಬಳಿಕ ಅಮೆರಿಕಕ್ಕೆ ತೆರಳಿ ನ್ಯೂಯಾರ್ಕ್​ನ ಪ್ರಖ್ಯಾತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಕನಿಷ್ಟ ಒಂದು ವರ್ಷ ಸಿನಿಮಾಗಳಿಂದ ಪ್ರಭಾಸ್ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಾಲಿವುಡ್​ ನಿರ್ದೇಶಕರ ಸಹವಾಸವೇ ಬೇಡ ಅಂತ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಭಾಸ್​?

‘ಕಲ್ಕಿ 2898’ ಸಿನಿಮಾ ಹೊರತಾಗಿ ಪ್ರಭಾಸ್ ಇನ್ನೂ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಅನಾರೋಗ್ಯದಿಂದಾಗಿ ಆ ಸಿನಿಮಾಗಳೆಲ್ಲವೂ ತಡವಾಗಲಿವೆ. ‘ಕಲ್ಕಿ 2898’ ಸಿನಿಮಾದ ಬಳಿಕ ಮಾರುತಿ ನಿರ್ದೇಶನದ ಹಾರರ್ ಫ್ಯಾಂಟಸಿ ಸಿನಿಮಾದಲ್ಲಿ ಪ್ರಭಾಸ್ ನಟಿಸಬೇಕಿತ್ತು. ಅದಾದ ಬಳಿಕ ‘ಅರ್ಜುನ್ ರೆಡ್ಡಿ’ ಸಿನಿಮಾ ನಿರ್ದೇಶಕ ಸಂದೀಪ್ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಅದಾದ ಬಳಿಕ ಬಾಲಿವುಡ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಈ ಮೂರೂ ಸಿನಿಮಾಗಳು ತಡವಾಗಲಿವೆ.

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ ಕೆಲವೇ ತಿಂಗಳ ಹಿಂದೆ ಬಿಡುಗಡೆ ಆಗಿ ತೀವ್ರ ಟೀಕೆಗೆ ಗುರಿಯಾಗಿದೆ. ಇದೀಗ ಅವರ ನಟನೆಯ ‘ಸಲಾರ್’ ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆ ಆಗಲಿದೆ. ಸಿನಿಮಾವು ಎರಡು ಪಾರ್ಟ್​ಗಳಲ್ಲಿ ಬಿಡುಗಡೆ ಆಗಲಿದ್ದು, ಎರಡೂ ಪಾರ್ಟ್​ಗಳ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ‘ಕಲ್ಕಿ’ ಸಿನಿಮಾ ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು