Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ.

Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jan 15, 2024 | 8:21 AM

ನಟ ಪ್ರಭಾಸ್ (Prabhas) ಅವರು ಮಾಸ್ ಸಿನಿಮಾಗಳನ್ನು ಮಾಡಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ‘ಸಲಾರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈಗ ಪ್ರಭಾಸ್ ಅವರು ನಿರ್ದೇಶಕ ಮಾರುತಿ ಜೊತೆ ಕೈ ಜೋಡಿಸುತ್ತಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್​ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ‘ದಿ ರಾಜಾ ಸಾಬ್’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಪೋಸ್ಟರ್ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ದಿ ರಾಜಾ ಸಾಬ್’ ಶೀರ್ಷಿಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾ ರೊಮ್ಯಾಂಟಿಕ್ ಹಾರರ್ ಶೈಲಿಯಲ್ಲಿ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪ್ರಯೋಗಾತ್ಮಕ ಸಿನಿಮಾದಲ್ಲಿ ನಟಿಸಲು ಪ್ರಭಾಸ್ ಉತ್ಸುಕರಾಗಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಮೂಲಕ ಟಿಜಿ ವಿಶ್ವ ಪ್ರಸಾದ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪ್ರಭಾಸ್ ಭೇಟಿ: ಕಾರಣವೇನು?

ಪ್ರಭಾಸ್ ಹುಟ್ಟೂರು ಭೀಮಾವರಂನಲ್ಲಿ ಈ ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಕಪ್ಪು ಬಣ್ಣದ ಶರ್ಟ್ ಹಾಗೂ ಲುಂಗಿ ಹಾಕಿ, ಕಲರ್​ಫುಲ್ ರಸ್ತೆಯಲ್ಲಿ ಪ್ರಭಾಸ್ ನಡೆದುಕೊಂಡು ಬರುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಈ ಸಿನಿಮಾ ತೆಲುಗು, ಕನ್ನಡ, ಹಿಂದಿ, ತಮಿಳು, ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ.  ‘ಸಲಾರ್’ ಚಿತ್ರದಿಂದ ಪ್ರಭಾಸ್ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈ ಕಾರಣಕ್ಕೆ ಚಿತ್ರವನ್ನು ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಆಸಕ್ತಿ ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್