Prabhas: 50 ದಿನಗಳ ಬಳಿಕ ಭಾರತಕ್ಕೆ ಮರಳಿದ ಪ್ರಭಾಸ್; ‘ಸಲಾರ್’ ತಂಡದ ಚಿಂತೆ ದೂರ

ಇತ್ತೀಚೆಗೆ ಅಮೆರಿಕದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ ಭಾಗಿ ಆಗಿದ್ದರು. ಈಗ ಅವರು ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಭಾರತಕ್ಕೆ ಮರಳಿದ್ದಾರೆ.

Prabhas: 50 ದಿನಗಳ ಬಳಿಕ ಭಾರತಕ್ಕೆ ಮರಳಿದ ಪ್ರಭಾಸ್; ‘ಸಲಾರ್’ ತಂಡದ ಚಿಂತೆ ದೂರ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on:Jul 26, 2023 | 12:42 PM

ಪ್ರಭಾಸ್ ಅವರು ‘ಆದಿಪುರುಷ್’ ಸಿನಿಮಾ (Adipurush Movie) ರಿಲೀಸ್ ಸಂದರ್ಭದಲ್ಲಿ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ್ದರು. ಈಗ ಅವರು 50 ದಿನಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ಇಂದು (ಜುಲೈ 26) ಮುಂಜಾನೆ ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ‘ಸಲಾರ್’ ಸಿನಿಮಾ (Salaar Movie) ರಿಲೀಸ್​ಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇದೆ. ಈ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ನೀಡಬೇಕಿದೆ. ಮುಂದಿನ ದಿನಗಳಲ್ಲಿ ಅವರು ಸಂಪೂರ್ಣವಾಗಿ ಈ ಚಿತ್ರದ ಪ್ರಮೋಷನ್ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.

ಪ್ರಭಾಸ್ ‘ಸಲಾರ್’ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿದ್ದರು. ಬಳಿಕ ಇದರಿಂದ ಚೇತರಿಕೆ ಕಂಡರು. ಮತ್ತೆ ಅವರಿಗೆ ತೊಂದರೆ ಕಾಡಿತ್ತು. ಹೀಗಾಗಿ, ಅವರು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಲ್ಲಿಯೇ ಅವರು ಚೇತರಿಸಿಕೊಂಡಿದ್ದಾರೆ. ಇತ್ತೀಚೆಗೆ ಅಮೆರಿಕದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ ಭಾಗಿ ಆಗಿದ್ದರು. ಈಗ ಅವರು ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಭಾರತಕ್ಕೆ ಮರಳಿದ್ದಾರೆ. ಇದರಿಂದ ಫ್ಯಾನ್ಸ್ ಖುಷಿಯಾಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ಸಲಾರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಪ್ರಭಾಸ್​ಗೆ ಇದೆ. ಇದರ ಜೊತೆಗೆ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ಬೇಕಿದೆ. ಟಾಲಿವುಡ್ ಮಾತ್ರವಲ್ಲದೆ ಈ ಚಿತ್ರಕ್ಕೆ ಕನ್ನಡ, ಹಿಂದಿಯಲ್ಲೂ ದೊಡ್ಡ ಮಟ್ಟದ ಪ್ರಮೋಷನ್ ಮಾಡುವ ಅಗತ್ಯವಿದೆ. ಹೀಗಾಗಿ, ಇದಕ್ಕೆ ಕನಿಷ್ಠ ಎರಡು ತಿಂಗಳ ಅವಶ್ಯಕತೆ ಇದೆ.

ಇದನ್ನೂ ಓದಿ: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶ್ರುತಿ ಹಾಸನ್ ಈ ಚಿತ್ರದ ನಾಯಕಿ. ಇತ್ತೀಚೆಗೆ ರಿಲೀಸ್ ಆದ ಟೀಸರ್ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರದಲ್ಲಿ ಮಲಯಾಳಂನ ಪೃಥ್ವಿರಾಜ್ ಸುಕುಮಾರನ್ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಸಿನಿಮಾಗೆ ಯಾವಾಗಿನಿಂದ ಪ್ರಚಾರ ಕಾರ್ಯ ಆರಂಭ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:20 pm, Wed, 26 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್