AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ

ಪ್ರಭಾಸ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ಬಹುನಿರೀಕ್ಷಿತ 'ಸ್ಪಿರಿಟ್' ಸಿನಿಮಾ 2027ರ ಮಾರ್ಚ್ 5ರಂದು ನಿಗದಿತ ದಿನಾಂಕದಂದೇ ಬಿಡುಗಡೆಯಾಗಲಿದೆ. ಸಲ್ಮಾನ್ ಖಾನ್ ಸಿನಿಮಾದಿಂದ ಮುಂದೂಡಿಕೆ ವದಂತಿಗಳನ್ನು ತಂಡ ಸ್ಪಷ್ಟವಾಗಿ ನಿರಾಕರಿಸಿದೆ. ಪ್ರಭಾಸ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿರುವ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಚಿತ್ರತಂಡ ತನ್ನ ನಿರ್ಧಾರಕ್ಕೆ ಅಚಲವಾಗಿದೆ.

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ
ಪ್ರಭಾಸ್-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: May 07, 2026 | 10:15 AM

Share

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ.

1.ಮಾರ್ಚ್ 5, 2027ರಂದೇ ‘ಸ್ಪಿರಿಟ್’ ರಿಲೀಸ್ ಅಧಿಕೃತ

2.ಸಲ್ಮಾನ್ ಖಾನ್ ಸಿನಿಮಾ ಕಾರಣಕ್ಕೆ ಸಿನಿಮಾ ಮುಂದೂಡಿಕೆ ವದಂತಿ ಸುಳ್ಳು

3.ಪೊಲೀಸ್ ಆಫೀಸರ್ ಪಾತ್ರದಲ್ಲಿ ಪ್ರಭಾಸ್ ಅಬ್ಬರ

‘ಸ್ಪಿರಿಟ್’ ಸಿನಿಮಾ ಈ ಹಿಂದೆ ಘೋಷಿಸಿದಂತೆ 2027ರ ಮಾರ್ಚ್ 5ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯ ಚಿತ್ರದ ಶೂಟಿಂಗ್ ಪ್ಲಾನ್ ಮಾಡಿದಂತೆಯೇ ಭರದಿಂದ ಸಾಗುತ್ತಿದ್ದು, ಯಾವುದೇ ಕಾರಣಕ್ಕೂ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇರುವುದಿಲ್ಲ ಎಂದು ತಂಡ ಸ್ಪಷ್ಟಪಡಿಸಿದೆ. ಈ ಮೂಲಕ ಸಲ್ಮಾನ್ ಖಾನ್ ಸಿನಿಮಾದಿಂದಾಗಿ ಪ್ರಭಾಸ್ ಸಿನಿಮಾ ಹಿಂದೆ ಸರಿಯಲಿದೆ ಎಂಬ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ.

ಪ್ರಭಾಸ್ ಅವರಿಗೆ ಬಾಲಿವುಡ್​ಗಿಂತ ಹೆಚ್ಚಿನ ಅಭಿಮಾನಿ ಬಳಗ ದಕ್ಷಿಣ ಭಾರತದಲ್ಲಿ ಇದೆ. ಟಾಲಿವುಡ್ ಅಲ್ಲಿ ಅವರನ್ನು ಆರಾಧಿಸುವವರು ಬಹಳಷ್ಟು ಮಂದಿ ಇದ್ದಾರೆ. ಹೀಗಾಗಿ, ಹಿಂದಿಯಲ್ಲಿ ರಿಲೀಸ್ ಆಗುವ ಸಿನಿಮಾ ಬಗ್ಗೆ ಅವರು ಹೆದರುವ ಅಗತ್ಯವೇ ಇಲ್ಲ ಎಂಬುದು ತಂಡದ ಅಭಿಪ್ರಾಯ.

ಇದನ್ನೂ ಓದಿ: ಮುಂಬೈನಲ್ಲಿ ಪ್ರಭಾಸ್ ಕ್ರೇಜ್ ಹೇಗಿದೆ? ಸ್ವಂತ ಅನುಭವ ವಿವರಿಸಿದ ಕರಣ್ ಜೋಹರ್

ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಮೊದಲ ಬಾರಿಗೆ ಒಂದಾಗುತ್ತಿರುವ ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಇದೆ. ಇದರಲ್ಲಿ ಪ್ರಭಾಸ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಬಾಲಿವುಡ್ ನಟಿ ತೃಪ್ತಿ ದಿಮ್ರಿ ಈ ಚಿತ್ರದ ನಾಯಕಿಯಾಗಿದ್ದು, ಮೊದಲ ಬಾರಿಗೆ ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿವೇಕ್ ಒಬೆರಾಯ್ ಪ್ರಮುಖ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಲ್ಮಾನ್ ಸಿನಿಮಾ ಯಾವುದು?

ಸಲ್ಮಾನ್ ಹೊಸ ಸಿನಿಮಾಗೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರಲಿದೆ. ಈ ಸಿನಿಮಾಗೆ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಎಂದರೆ ಈ ಮೊದಲು ಅವರು ಪ್ರಭಾಸ್ ಜೊತೆ ಸಿನಿಮಾ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!