AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ಬಾಲಿವುಡ್ ಸ್ಟಾರ್ ಹೀರೋ ವಿಲನ್

Spirit Movie: ಪ್ರಭಾಸ್ ನಟನೆಯ 'ಸ್ಪಿರಿಟ್' ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ಗಳು ಹೊರಬಿದ್ದಿವೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ವಿವೇಕ್ ಒಬೆರಾಯ್ ಖಳನಾಯಕನಾಗಿ ನಟಿಸಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಪ್ರಭಾಸ್ ತಂದೆಯಾಗಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ಬಾಲಿವುಡ್ ಸ್ಟಾರ್ ಹೀರೋ ವಿಲನ್
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 04, 2025 | 12:11 PM

Share

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಕೆಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಜಾಸಾಬ್’ ಈಗಾಗಲೇ ಚಿತ್ರೀಕರಣದ ಅಂತಿಮ ಹಂತವನ್ನು ತಲುಪಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಕೂಡ ಆಕರ್ಷಕವಾಗಿದೆ. ಈ ಚಿತ್ರದ ಜೊತೆಗೆ, ನಿರ್ದೇಶಕ ಹನು ರಾಘವಪುಡಿ ನಿರ್ದೇಶನದ ‘ಫೌಜಿ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಅಲ್ಲದೆ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದಲ್ಲಿ ‘ಸ್ಪಿರಿಟ್’ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್ ಸ್ಟಾರ್ ನಟ ವಿಲನ್ ಪಾತ್ರ ಮಾಡಲಿದ್ದಾರಂತೆ.

ಸಂದೀಪ್ ರೆಡ್ಡಿ ವಂಗ ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. ‘ಅರ್ಜುನ್ ರೆಡ್ಡಿ’ ಮತ್ತು ‘ಅನಿಮಲ್’ ಚಿತ್ರಗಳ ಮೂಲಕ ಅವರು ಸಂಚಲನ ಸೃಷ್ಟಿಸಿದ್ದಾರೆ. ಈಗ ಪ್ರಭಾಸ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಸಂದೀಪ್, ಶೂಟಿಂಗ್ ಲೊಕೇಶನ್ ಹುಡುಕುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳ ಪ್ರಕಾರ, ಈ ಚಿತ್ರದ ಶೂಟಿಂಗ್ ನವೆಂಬರ್ 5ರಿಂದ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಮಲಯಾಳಿ ನಟಿ ಮಡೋನಾ ಸೆಬಾಸ್ಟಿಯನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮೆಗಾಸ್ಟಾರ್ ಚಿರಂಜೀವಿ ಪ್ರಭಾಸ್ ಅವರ ತಂದೆಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಅವರು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದರೊಂದಿಗೆ, ಈ ಚಿತ್ರದ ಮೇಲಿನ ನಿರೀಕ್ಷೆಗಳು ಉತ್ತುಂಗಕ್ಕೇರಿವೆ. ಈಗ ಈ ಚಿತ್ರದ ಬಗ್ಗೆ ಮತ್ತೊಂದು ಅಪ್‌ಡೇಟ್ ಸದ್ದು ಮಾಡುತ್ತಿದೆ. ಬಾಲಿವುಡ್ ನಟ ವಿವೇಕ್ ಒಬೆರಾಯ್ ಇದರಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಲಿದ್ದಾರಂತೆ.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ನಾಯಕನಾಗಿ, ವಿಲನ್ ಆಗಿ ಹಲವು ಚಿತ್ರಗಳಲ್ಲಿ ಮಿಂಚಿರುವ ವಿವೇಕ್, ಈಗ ‘ಸ್ಪಿರಿಟ್’ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ. ವಿವೇಕ್ ಈಗಾಗಲೇ ಹಲವು ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ಗೆ ಪ್ರಶಂಸೆಗಳ ಸುರಿಮಳೆ, ಪ್ರಭಾಸ್, ಜೂ ಎನ್​​ಟಿಆರ್ ಹೇಳಿದ್ದೇನು?

ಸಂದೀಪ್ ರೆಡ್ಡಿ ಸಿನಿಮಾಗಳು ಯಾವಾಗಲೂ ರಾ ಆಗಿ ಇರುತ್ತವೆ. ಈಗ ‘ಸ್ಪಿರಿಟ್’ ಕೂಡ ಇದೇ ಶೈಲಿಯಲ್ಲಿ ಮೂಡಿ ಬರುವ ಸಾಧ್ಯತೆ ಇದೆ. ಈ ಸಿನಿಮಾಗೆ ಮೊದಲು ದೀಪಿಕಾ ಪಡುಕೋಣೆ ಅವರು ನಾಯಕಿ ಎಂದು ಘೋಷಿಸಲಾಗಿತ್ತು. ಆದರೆ, ಅವರು ಸಿನಿಮಾದಲ್ಲಿ ಕೆಲಸ ಮಾಡೋದಿಲ್ಲ ಎಂದರು. ಅಲ್ಲದೆ, ಸಂದೀಪ್ ರೆಡ್ಡಿ ವಂಗ ಮತ್ತು ದೀಪಿಕಾ ಮಧ್ಯೆ ವೈಮನಸ್ಸು ಮೂಡಲು ಈ ಸಿನಿಮಾ ಕಾರಣ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:09 pm, Sat, 4 October 25

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು