AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ರಾಮನ ಮೀಸೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ‘ಆದಿಪುರುಷ್’ ನಿರ್ಮಾಪಕ

‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್ ಲುಕ್ ಹೀಗೆಯೇ ಇರಬೇಕು, ಹಾಗೆಯೇ ಇರಬೇಕು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಪ್ರಭಾಸ್​ಗೆ ಈ ಮೀಸೆ ಅಷ್ಟು ಹೊಂದುತ್ತಿಲ್ಲ ಎಂಬುದನ್ನು ಅನೇಕರು ಹೇಳಿದ್ದಾರೆ.

Adipurush Movie: ರಾಮನ ಮೀಸೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ‘ಆದಿಪುರುಷ್’ ನಿರ್ಮಾಪಕ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jun 09, 2023 | 7:38 AM

Share

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ (Adipurush Movie) ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ರಾಮಾಯಣದ ಕಥೆ ಆಧರಿಸಿ ಸಿದ್ಧವಾದ ಈ ಚಿತ್ರ ಹೈಪ್ ಪಡೆದುಕೊಂಡಿದೆ. ಬಾಲಿವುಡ್ ನಿರ್ದೇಶಕ ಓಂ ರಾವತ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್ (Prabhas) ರಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಬೆಡಗಿ ಕೃತಿ ಸನೋನ್ ಸೀತೆಯಾಗಿ ನಟಿಸುತ್ತಿದ್ದಾರೆ. ರಿಲೀಸ್ ಆದ ಎರಡು ಟ್ರೇಲರ್‌ಗಳು ಚಿತ್ರದ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಈ ಸಿನಿಮಾ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾದ ಬಗ್ಗೆ ವಿವಾದಗಳೂ ಹೆಚ್ಚಾಗುತ್ತಿವೆ. ಈ ಮೊದಲು ಬಿಡುಗಡೆಯಾಗಿರುವ ಟೀಸರ್ ಬಗ್ಗೆ ಟೀಕೆಗಳು ವ್ಯಕ್ತವಾಗಿತ್ತು. ಗ್ರಾಫಿಕ್ಸ್ ಉತ್ತಮವಾಗಿಲ್ಲ ಎಂಬ ಮಾತು ಕೇಳಿಬಂದಿವೆ. ಈಗ ಪ್ರಭಾಸ್ ಮೀಸೆ ಬಗ್ಗೆ ಅಪಸ್ವರ ತೆಗೆಯಲಾಗಿದೆ. ಇದಕ್ಕೆ ನಿರ್ಮಾಪಕರಿಂದ ಸ್ಪಷ್ಟನೆ ಸಿಕ್ಕಿದೆ.

ಪ್ರಭಾಸ್ ಅವರು ಹ್ಯಾಂಡ್ಸಂ ಹಂಕ್. ಅವರ ಲುಕ್​ಗೆ ಅನೇಕರು ಫಿದಾ ಆಗಿದ್ದಾರೆ. ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ‘ಆದಿಪುರುಷ್’ ರಾಮಾಯಣ ಆಧರಿಸಿ ಸಿದ್ಧವಾದ ಸಿನಿಮಾ. ಹೀಗಾಗಿ, ಇಲ್ಲಿ ಪ್ರಭಾಸ್ ಲುಕ್ ಹೀಗೆಯೇ ಇರಬೇಕು, ಹಾಗೆಯೇ ಇರಬೇಕು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ, ಪ್ರಭಾಸ್​ಗೆ ಈ ಮೀಸೆ ಅಷ್ಟು ಹೊಂದುತ್ತಿಲ್ಲ ಎಂಬುದನ್ನು ಅನೇಕರು ಹೇಳಿದ್ದಾರೆ.

ಈ ಬಗ್ಗೆ ‘ಆದಿಪುರುಷ್’ ಸಿನಿಮಾ ನಿರ್ಮಾಪಕರಲ್ಲಿ ಒಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ‘ಆದಿಪುರುಷ್​ ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ. ರಾಮನಿಗೆ ಮೀಸೆ ಏಕೆ ಎಂದು ಸಿನಿಮಾ ನೋಡಿದರೆ ಅರ್ಥವಾಗುತ್ತದೆ  ಪ್ರೇಕ್ಷಕರ ಹಲವು ಅನುಮಾನಗಳಿಗೆ ಸಿನಿಮಾ ನೋಡಿದ ನಂತರ ಸ್ಪಷ್ಟನೆ ಸಿಗಲಿದೆ’ ಎಂದು ನಿರ್ಮಾಪಕರು ಹೇಳಿರುವುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸಿಕ್ತು ‘ಆದಿಪುರುಷ್​’ ಚಿತ್ರದ ಸೆನ್ಸಾರ್​ ಸರ್ಟಿಫಿಕೇಟ್​; ಅಬ್ಬಬ್ಬಾ ಈ ಸಿನಿಮಾದ ಅವಧಿ ಇಷ್ಟೊಂದಾ?

ಈ ಮೊದಲು ರಿಲೀಸ್ ಆದ ಟೀಸರ್​ನಲ್ಲಿ ರಾವಣನ ಗಡ್ಡದ ಬಗ್ಗೆ ಅನೇಕರು ಅಪಸ್ವರ ತೆಗೆದಿದ್ದರು. ಭಾರತದ ಮೇಲೆ ದಂಡೆತ್ತಿ ಬಂದ ಮುಸ್ಲಿಂ ರಾಜರ ರೀತಿಯಲ್ಲಿ ಈ ಪಾತ್ರವನ್ನು ಸೃಷ್ಟಿ ಮಾಡಲಾಗಿದೆ ಎಂದು ಅನೇಕರು ಟೀಕಿಸಿದ್ದರು. ಆದರೆ, ಟ್ರೇಲರ್​ನಲ್ಲಿ ರಾವಣನ ಲುಕ್ ಬದಲಾಯಿಸಲಾಗಿದೆ. ರಾವಣನಾಗಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ. ಈ ಸಿನಿಮಾ ಜೂನ್ 16ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಭಾರೀ ಬೆಂಬಲ ಸಿಕ್ಕಿದೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್, ನಟ ರಣಬೀರ್ ಕಪೂರ್, ರಾಮ್ ಚರಣ್ ತಲಾ 10 ಸಾವಿರ ಟಿಕೆಟ್ ಖರೀದಿಸುವುದಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ