6200 ಸ್ಕ್ರೀನ್​ಗಳಲ್ಲಿ ಆದಿಪುರುಷ್ ಬಿಡುಗಡೆ: ಕರ್ನಾಟಕದಲ್ಲಿ ಯಾರು ವಿತರಣೆ?

Adipurush: ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ಜೂನ್ 16 ರಂದು ಬಿಡುಗಡೆ ಆಗಲಿದ್ದು, ಸಿನಿಮಾವು 6200 ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ತೆರೆಗೆ ಬರುತ್ತಿದೆ.

6200 ಸ್ಕ್ರೀನ್​ಗಳಲ್ಲಿ ಆದಿಪುರುಷ್ ಬಿಡುಗಡೆ: ಕರ್ನಾಟಕದಲ್ಲಿ ಯಾರು ವಿತರಣೆ?
ಆದಿಪುರುಷ್
Follow us
ಮಂಜುನಾಥ ಸಿ.
|

Updated on:Jun 09, 2023 | 9:37 PM

ಪ್ರಭಾಸ್ (Prabhas) ನಟನೆಯ ಆದಿಪುರುಷ್ (Adipurush) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದು ಭಾರತದ ಅತಿದೊಡ್ಡ ಬಜೆಟ್​ ಸಿನಿಮಾ ಎನ್ನಲಾಗುತ್ತಿದ್ದು, ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಸಿನಿಮಾ ಅಷ್ಟೆ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಆದಿಪುರುಷ್ ಬಿಡುಗಡೆ ಆಗಲಿದ್ದು, ಭಾರತ (India) ಮಾತ್ರವೇ ಅಲ್ಲದೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿವೆ. ಆದಿಪುರುಷ್ ಸಿನಿಮಾ ಮೊದಲ ದಿನವೇ ಸುಮಾರು 6200 ಸ್ಕ್ರೀನ್​ಗಳಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ. ಇದು ಸಹ ದಾಖಲೆಯೇ.

ಭಾರತದಲ್ಲಿ ಮಾತ್ರವೇ 6200ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಆದಿಪುರುಷ್ ಬಿಡುಗಡೆ ಆಗಲಿದೆ. ಈ ಮೊದಲು ಕೆಜಿಎಫ್ 2 ಸಿನಿಮಾ ಭಾರತದಲ್ಲಿ ಸುಮಾರು 6000 ಸ್ಕ್ರೀನ್​ಗಳಲ್ಲಿ ಬಿಡುಗಡೆ ಆಗಿತ್ತು. ವಿಶ್ವದಾದ್ಯಂತ ಸುಮಾರು 11,000 ಸ್ಕ್ರೀನ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಹಿಂದಿ ಆವೃತ್ತಿಯೊಂದೇ ಉತ್ತರ ಭಾರತದ ರಾಜ್ಯಗಳಲ್ಲಿ 4000 ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದ ಹಿಂದಿ ಆವೃತ್ತಿಯನ್ನು ಅನಿಲ್ ತಂಡಾನಿ ಬಿಡುಗಡೆ ಮಾಡಲಿದ್ದಾರೆ. ಈ ಹಿಂದೆ ಕೆಜಿಎಫ್ 2, ಬಾಹುಬಲಿ, ಪುಷ್ಪ ಸಿನಿಮಾಗಳನ್ನು ವಿತರಣೆ ಮಾಡಿದ್ದು ಇವರೇ. ಇನ್ನು ಜೂನ್ 10 ರಿಂದ ಆದಿಪುರುಷ್ ಸಿನಿಮಾಕ್ಕೆ ಅಡ್ವಾನ್ಸ್ ಬುಕಿಂಗ್ ಪ್ರಾರಂಭವಾಗಲಿದೆ. ಆದರೆ ಜೂನ್ 10ರಂದು ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಮಾತ್ರವೇ ಬುಕಿಂಗ್ ಆರಂಭ ಆಗಲಿವೆ. ಜೂನ್ 11 ರಿಂದ ಎಲ್ಲ ನಗರಗಳಲ್ಲಿಯೂ ಬುಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಕರ್ನಾಟಕದಲ್ಲಿ ಆದಿಪುರುಷ್ ಸಿನಿಮಾ ವಿತರಣೆ ಹಕ್ಕು ಯಾರಿಗೆ ಸಿಗಬಹುದು ಎಂಬ ಕುತೂಹಲವಿತ್ತು. ಆ ಕುತೂಹಲಕ್ಕೀಗ ಪೂರ್ಣ ವಿರಾಮ ಬಿದ್ದಿದ್ದು, ಕಾರ್ತಿಕ್ ಗೌಡ ಅವರ ಕೆಆರ್​ಜಿ, ಕರ್ನಾಟಕದಲ್ಲಿ ಆದಿಪುರುಷ್ ವಿತರಣೆ ಮಾಡಲಿದೆ. ಕೆಆರ್​ಜಿ ಸ್ಟುಡಿಯೋಸ್, ಹೊಂಬಾಳೆ ಫಿಲಮ್ಸ್​ನ ಸೋದರ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿಯೂ ಈ ಸಿನಿಮಾಕ್ಕೆ ದೊಡ್ಡ ಸಂಖ್ಯೆಯ ಚಿತ್ರಮಂದಿರಗಳು ಲಭಿಸುವ ದಟ್ಟ ಸಾಧ್ಯತೆ ಇದೆ. ಸುಮಾರು 300ಕ್ಕೂ ಹೆಚ್ಚು ಚಿತ್ರಮಂದಿರಗಳು ಈ ಸಿನಿಮಾಕ್ಕೆ ಸಿಗಬಹುದಾಗಿದೆ. ವಿದೇಶದಲ್ಲಿಯೂ ಈ ಸಿನಿಮಾಕ್ಕೆ ಬೇಡಿಕೆ ಹೆಚ್ಚಿದ್ದು ಆಸ್ಟ್ರೇಲಿಯಾ, ನ್ಯೂಜಿಲೆಂಡ್​ಗಳಲ್ಲಿ ಸಿನಿಮಾ ಚೆನ್ನಾಗಿ ಪ್ರದರ್ಶನಗೊಂಡು ಹಳೆಯ ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಆದಿಪುರುಷ್ ಸಿನಿಮಾವು ರಾಮಾಯಣದ ಕತೆ ಆಧರಿಸಿದ ಸಿನಿಮಾ ಆಗಿದ್ದು, ಓಂ ರಾವತ್ ನಿರ್ದೇಶನ ಮಾಡಿರುವ ಸಿನಿಮಾಕ್ಕೆ ಭೂಷಣ್ ಕುಮಾರ್ ಹಾಗೂ ಪ್ರಭಾಸ್ ಒಡೆತನದ ಯುವ ಕ್ರಿಯೇಶನ್ಸ್ ಬಂಡವಾಳ ಹೂಡಿದೆ. ಸಿನಿಮಾದಲ್ಲಿ ಶ್ರೀರಾಮನ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದಾರೆ. ಸೀತಾಮಾತೆಯ ಪಾತ್ರದಲ್ಲಿ ಕೃತಿ ಸೆನನ್ ನಟಿಸಿದ್ದಾರೆ. ಹನುಮಂತನ ಪಾತ್ರದಲ್ಲಿ ದೇವದತ್ ನಾಗರೆ, ಲಕ್ಷ್ಮಣನ ಪಾತ್ರದಲ್ಲಿ ಸನ್ನಿ ಸಿಂಗ್ ನಟಿಸಿದ್ದಾರೆ. ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಬಾಲಿವುಡ್​ನ ಸ್ಟಾರ್ ನಟ ಸೈಫ್ ಅಲಿ ಖಾನ್ ಮಿಂಚಿದ್ದಾರೆ. ಸಿನಿಮಾವು ಜೂನ್ 16 ರಂದು ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Fri, 9 June 23

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ