AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ

‘ಫೌಜಿ’ ಸಿನಿಮಾದ ಚಿತ್ರೀಕರಣಕ್ಕೆ ತೆರೆಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಫಘಾತ ಸಂಭವಿಸಿದೆ. ಈ ಘಟನೆಯಲ್ಲಿ ಚಿತ್ರತಂಡದ ಸದಸ್ಯರೊಬ್ಬರು ನಿಧನರಾಗಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಐವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ತನಿಕೆ ಮಾಡುತ್ತಿದ್ದಾರೆ.

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ
Prabhas
ಮದನ್​ ಕುಮಾರ್​
|

Updated on: May 06, 2026 | 8:54 AM

Share

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರತಂಡದಲ್ಲಿ ಭಾರಿ ದುರಂತ ಸಂಭವಿಸಿದೆ. ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಸದಸ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಚಿತ್ರತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ವ್ಯಕ್ತಿ ಮೃತಪಟ್ಟ ಕಾರಣದಿಂದ ‘ಫೌಜಿ’ (Fauzi) ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.

ಹೈದರಾಬಾದ್‌ನ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಗೆ ಚಿತ್ರೀಕರಣಕ್ಕಾಗಿ ತಂಡವು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಬ್ದುಲ್ಲಾಪುರಮೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಸಿಮೆಂಟ್ ಡಿವೈಡರ್‌ಗಳಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಚೌಟುಪ್ಪಲ್ ಪೊಲೀಸ್ ಠಾಣಾ ವ್ಯಾಪ್ತಿಯ ತೂಪ್ರಾನ್‌ಪೇಟ್ ಸೇತುವೆಯ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ.

ಈ ಘಟನೆಯಲ್ಲಿ ಚಿತ್ರತಂಡದ ಓರ್ವ ಸದಸ್ಯ ಮೃತಪಟ್ಟಿದ್ದು, ಅವರ ಗುರುತು ಇನ್ನೂ ಬಹಿರಂಗವಾಗಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಉಳಿದ ಐವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದೆ.

ಈ ದುರದೃಷ್ಟಕರ ಘಟನೆಯ ಬೆನ್ನಲ್ಲೇ ‘ಫೌಜಿ’ ಚಿತ್ರದ ನಿರ್ಮಾಪಕರು ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಮೃತ ಸದಸ್ಯನ ಗೌರವಾರ್ಥವಾಗಿ ಮತ್ತು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತನಿಖೆಗೆ ಚಿತ್ರತಂಡವು ಪೊಲೀಸರೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ‘ಫೌಜಿ’ ಸೆಟ್​ನಿಂದ ಪ್ರಭಾಸ್ ಫೋಟೋ ಲೀಕ್: ಅಭಿಮಾನಿಗಳಿಗೆ ಚಿತ್ರತಂಡದ ವಾರ್ನಿಂಗ್

ಹನು ರಾಘವಪುಡಿ ನಿರ್ದೇಶನದ ಈ ಚಿತ್ರವು 1940ರ ದಶಕದ ಹಿನ್ನೆಲೆಯ ಐತಿಹಾಸಿಕ ಕಥೆಯನ್ನು ಹೊಂದಿದ್ದು, ಈಗಾಗಲೇ ಶೇಕಡ 80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಈ ವರ್ಷದ ದಸರಾ ಅಥವಾ ಡಿಸೆಂಬರ್ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಚಿತ್ರೀಕರಣ ಪ್ರಗತಿಯಲ್ಲಿ ಇರುವಾಗಲೇ ಈ ರೀತಿ ದುರ್ಘಟನೆ ಸಂಭವಿಸಿರುವುದು ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ